ಕೋವಿಡ್ ನಿಂದ ಮೃತಪಟ್ಟವರ ಕುಟುಂಬದವರಿಗೆ ಶಿಕಾರಿಪುರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪರಿಹಾರದ ಚೆಕ್ ವಿತರಿಸಿದ್ದಾರೆ.
ಕೊರೋನಾ ದಿಂದ ಅನೇಕ ಸಾವು-ನೋವುಗಳು ಸಂಭವಿಸಿವೆ. ಇದರಿಂದ ಅವರ ಕುಟುಂಬಗಳು ದೃತಿಗೆಡದೇ ಧೈರ್ಯದಿಂದ ಜೀವನ ನಡೆಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಾಂತ್ವನವನ್ನು ಹೇಳಿದ್ದಾರೆ.
“ಕೊರೋನಾದಿಂದ ಮೃತಪಟ್ಟವರಿಗೆ ನಾನು, ಮುಖ್ಯಮಂತ್ರಿಯಾಗಿದ್ದಂತಹ ಸಂದರ್ಭದಲ್ಲಿ ಘೋಷಣೆ ಮಾಡಿದಂತೆ ಒಂದು ಲಕ್ಷ ರೂಪಾಯಿಗಳನ್ನು ಪ್ರಸ್ತುತ ವಿತರಣೆ ಮಾಡುತ್ತಿದ್ದೇನೆ. ಈ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೇಂದ್ರ ಸರ್ಕಾರ ಕೂಡ 50 ಸಾವಿರ ರೂ. ಗಳನ್ನು ನೀಡುತ್ತದೆ. ಮುಂದಿನ ದಿನಗಳಲ್ಲಿ ಮೂರನೇ ಅಲೆಯಿಂದ ಅನೇಕ ಸಾವು-ನೋವು ಸಂಭವಿಸದಂತೆ ಪ್ರತಿಯೊಬ್ಬರೂ ಕೂಡ ಎಚ್ಚರವಾಗಿರಬೇಕು. ಕೋವಿಡ್ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು ಸಲಹೆ ನೀಡಿದರು.
‘ ಶಿಕಾರಿಪುರ ತಾಲೂಕಿನಲ್ಲಿ 46 ಬಿಪಿಎಲ್ ಕುಟುಂಬಗಳಿಗೆ ಕೋವಿಡ್ ಪರಿಹಾರ ನಿಧಿ ತಲಾ ಒಂದು ಲಕ್ಷ ರೂಪಾಯಿ ಹಣ ದೊರೆಯುತ್ತಿದೆ. ಜೊತೆಗೆ ಕೇಂದ್ರ ಸರ್ಕಾರದ 50 ಸಾವಿರ ರೂಪಾಯಿ ಕೂಡ ದೊರೆಯುತ್ತದೆ. 45 ಎಪಿಎಲ್ ಕಾರ್ಡ್ ಕುಟುಂಬದವರಿಗೆ ಕೇಂದ್ರ ಸರ್ಕಾರ 50 ಸಾವಿರ ರೂಪಾಯಿ ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲೂಕಿನ ಜನರಿಗಾಗಿ ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ನೀರಾವರಿ ಯೋಜನೆ ಅನುಷ್ಠಾನ ಮಾಡಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ರುದ್ರೇಗೌಡ್ರು, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಕೊಳಗಿ ರೇವಣಪ್ಪ ಇನ್ನು ಮುಂತಾದವರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.