ಭವಿಷ್ಯದ ವಿದ್ಯುತ್ ಕೊರತೆ ನಿವಾರಿಸಲು ಸೌರಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ರಾಜ್ಯ ಸರ್ಕಾರ ವಿನೂತನ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಆದರೆ ರಾಜ್ಯದಲ್ಲಿನ ಗ್ರಾಮಪಂಚಾಯ್ತಿಗಳು ಕಟ್ಟಡಗಳ ಛಾವಣಿಗಳಲ್ಲಿ ಸೌರ ವಿದ್ಯುತ್ ಉತ್ಪಾದಿಸಲು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ. ಇದರಿಂದ ಸರಕಾರದ ಮೂಲ ಆಶಯ ಈಡೇರಿದಂತಾಗಿದೆ.
ಗ್ರಾಮ ಪಂಚಾಯಿತಿ ಕಟ್ಟಡಗಳ ಛಾವಣಿಯಲ್ಲಿ ಸೌರ ಘಟಕ ಗಳನ್ನು ಅಳವಡಿಸಿ ವಿದ್ಯುತ್ ಉತ್ಪಾದಿಸಲು ಕ್ರಮ ಕೈಗೊಳ್ಳುವಂತೆ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಅದಾಗ್ಯೂ, ವಿದ್ಯುತ್ ಉತ್ಪಾದನೆಗೆ ಗ್ರಾ.ಪಂ. ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರ್ ಡಿಪಿಆರ್ ನಿರ್ದೇಶಕರಾದ ಕೆ. ರೇವಣ್ಣಪ್ಪ ನವರು ತಿಳಿಸಿದ್ದಾರೆ.
ವಿದ್ಯುತ್ ಸಮಸ್ಯೆ ನಿವಾರಿಸುವ ಸಲುವಾಗಿ ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿಗಳಲ್ಲೂ ಸೌರ ವಿದ್ಯುತ್ ಉತ್ಪಾದನೆಯನ್ನು ಕಡ್ಡಾಯಗೊಳಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 2020ರ ಡಿಸೆಂಬರ್ ನಲ್ಲಿ ಆದೇಶ ಹೊರಡಿಸಿದೆ. ಅನಂತರವೂ ಹಲವು ಸಲ ಸೌರ ವಿದ್ಯುತ್ ಘಟಕಗಳನ್ನು ಅಳವಡಿಸುವಂತೆ ನಿರ್ದೇಶನ ನೀಡಿದೆ. ಸೌರ ವಿದ್ಯುತ್ ಉತ್ಪಾದನೆಗೆ ಅನುದಾನದ, ಆರ್ಥಿಕ ಸಂಪನ್ಮೂಲದ ಕೊರತೆಯೂ ಇಲ್ಲ. ಅದಾಗ್ಯೂ, ಸೌರ ವಿದ್ಯುತ್ ಉತ್ಪಾದನೆ ಯೋಜನೆಯು ಕಾರ್ಯರೂಪಕ್ಕೆ ಬಂದಿಲ್ಲ. ಗ್ರಾಮ್ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಅಧಿಕಾರಿಗಳ ಉದಾಸೀನತೆಯಿಂದ ಯೋಜನೆ ಸಾಕಾರಗೊಂಡಿಲ್ಲ ಎಂದು ತಿಳಿದುಬಂದಿದೆ.
ಸೌರ ವಿದ್ಯುತ್ ಘಟಕಗಳನ್ನು ಅಳವಡಿಸಲು ಟೆಂಡರ್ ಪಡೆದ ಕಂಪನಿಗಳೇ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಯ ಗ್ರಿಡ್ ಗಳ ಜೊತೆ ಸಂಪರ್ಕ ಕಲ್ಪಿಸುವಂತೆ ಆದೇಶಿಸಲಾಗಿದೆ. ಗ್ರಿಡ್ ಸಂಪರ್ಕದ ಅಂತರದ ಕುರಿತು ಸ್ಪಷ್ಟತೆ ಇಲ್ಲದಿರುವುದರಿಂದ ಕಂಪನಿಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ ಎಂಬ ದೂರಿದೆ. ಹೀಗಾಗಿ , ಟೆಂಡರ್ ಪಡೆದ ಕಂಪನಿಗಳು ಹಿಂದೇಟು ಹಾಕುತ್ತಿವೆ. ಈ ಹಿನ್ನೆಲೆಯಲ್ಲಿ ಸೌರ ವಿದ್ಯುತ್ ಉತ್ಪಾದನೆಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.