ಶಿವಮೊಗ್ಗ ಜಿಲ್ಲೆಯ ಪ್ರಥಮ ಓಮಿಕ್ರಾನ್ ಪ್ರಕರಣ ಭದ್ರಾವತಿಯಲ್ಲಿ ಪತ್ತೆಯಾಗಿದೆ. ಇದರಿಂದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭದ್ರಾವತಿಯಲ್ಲಿ ಓರ್ವ ವಿದ್ಯಾರ್ಥಿನಿಗೆ ಓಮಿಕ್ರಾನ್ ಸೋಂಕು ತಗಲಿರುವ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ ಕ್ಲಸ್ಟರ್ ಹಂತದಲ್ಲಿ ಪ್ರಕರಣಗಳು ಕಂಡುಬಂದಿದೆ. ಕೇರಳದಿಂದ ಬಂದ ನರ್ಸಿಂಗ್ ವಿದ್ಯಾರ್ಥಿನಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ಈಕೆಯೊಂದಿಗೆ ಸಂಪರ್ಕ ಹೊಂದಿರುವವರಲ್ಲಿ ಆಂತಕ ಉಂಟಾಗಿದೆ.
ಕಳೆದ ಎರಡು ವಾರಗಳ ಹಿಂದೆಯಷ್ಟೇ ಭದ್ರಾವತಿಯ, ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿತ್ತು. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ 218 ಜನರ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆದರೆ, ಅವರಲ್ಲಿ 27 ಜನರ ವರದಿ ಪಾಸಿಟಿವ್ ಬಂದಿತ್ತು. ಅನಂತರ , ಸೋಂಕಿತರ ಗಂಟಲು ದ್ರವದ ಮಾದರಿಯನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿತ್ತು. ಈ ಪೈಕಿ ಒಬ್ಬ ವಿದ್ಯಾರ್ಥಿನಿ ಯಲ್ಲಿ ಓಮಿಕ್ರಾನ್ ವೈರಸ್ ಪತ್ತೆಯಾಗಿದೆ. ಈ ವಿದ್ಯಾರ್ಥಿನಿ ವಿದೇಶಕ್ಕೆ ಪ್ರಯಾಣಿಸಿಲ್ಲ. ಆದರೆ ವಿದೇಶದಿಂದ ಬಂದವರೊಂದಿಗೆ ಸಂಪರ್ಕ ಹೊಂದಿರುವುದು ದೃಢವಾಗಿದೆ. ಆದ್ದರಿಂದ ಸೋಂಕು ತಗುಲಿದೆ ಎನ್ನುವುದು ಆರೋಗ್ಯ ಇಲಾಖೆಗಳ ಮೂಲಗಳು ತಿಳಿಸಿವೆ. ಈಕೆ ಕೊರೋನಾದ 2 ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಕೂಡ ಪಡೆದುಕೊಂಡಿದ್ದಾಳೆ.