Saturday, October 5, 2024
Saturday, October 5, 2024

ಅಪರಾಧ ಪ್ರಕರಣ ನಿಯಂತ್ರಿಸಲು ಹತ್ತು ಅಂಶಗಳ ಕಾರ್ಯಕ್ರಮ- ಲಕ್ಷ್ಮೀಪ್ರಸಾದ್

Date:

ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ಸುವುದರ ಜೊತೆಗೆ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳಿಗೆ ಮತ್ತಷ್ಟು ಕಡಿವಾಣ ಹಾಕಿ ಶಾಂತಿ-ಸುವ್ಯವಸ್ಥೆ ಮುಂದುವರಿಸಿಕೊಂಡು ಹೋಗಲು ಜಿಲ್ಲಾ ಪೊಲೀಸ್ ಇಲಾಖೆ 10 ಅಂಶಗಳ ಕಾರ್ಯಕ್ರಮವನ್ನು ಹಾಕಿಕೊಂಡಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಲಕ್ಷ್ಮಿ ಪ್ರಸಾದ್ ಅವರು ಮಾತನಾಡುತ್ತಿದ್ದರು. ” ಹತ್ತು ಅಂಶಗಳ ಕಾರ್ಯಕ್ರಮಗಳ ಮೂಲಕ ರಾಬರಿ, ಕಳ್ಳತನ ಮತ್ತು ಅಪಘಾತಗಳನ್ನು ಶೇ.10 ರಷ್ಟು ಕಡಿಮೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿ ಸಲು ಸಾರ್ವಜನಿಕರೊಂದಿಗೆ ಹೇಗೆ ವರ್ತಿಸಬೇಕು?, ದೂರು ನೀಡಲು ಬರುವ ಮಹಿಳೆಯರು, ವಯೋವೃದ್ಧರು ಹಾಗೂ ಮಕ್ಕಳೊಂದಿಗೆ ಹೇಗೆ ವರ್ತಿಸಬೇಕು ಎಂಬುದರ ಬಗ್ಗೆ ಪೊಲೀಸರಿಗೆ ತರಬೇತಿ ನೀಡಲಾಗುತ್ತದೆ. ಬಿಟ್ ಪೋಲಿಸ್, ನಗರದಲ್ಲದೆ ಪ್ರತಿ ಹಳ್ಳಿಗಳಲ್ಲೂ ನಡೆಸಲು ನಿರ್ಧರಿಸಲಾಗಿದೆ. ಇದನ್ನು ಇನ್ನು ಆರು ತಿಂಗಳಲ್ಲಿ ಪರಿಣಾಮಕಾರಿಯಾಗಿ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದರು.

ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರು ಜಾಮೀನಿನ ಮೇಲೆ ಬಹಳ ಬೇಗ ಹೊರಬರುವುದು, ಕಡಿಮೆ ಶಿಕ್ಷೆ ಅನುಭವಿಸಿ ಹೊರ ಬಂದು ಯಥಾಪ್ರಕಾರವಾಗಿ ಸಮಾಜ ವಿದ್ರೋಹಿ ಕೃತ್ಯಗಳನ್ನು ನಡೆಸಿ ಸಮಾಜ ಕರಾಗುವುದು ನಡೆದಿದೆ. ಅಂಥವರ ವಿರುದ್ಧ ಕಠಿಣ ಸೆಕ್ಷನ್ ಗಳನ್ನು ಹಾಕಿ ಅಧಿಕ ಶಿಕ್ಷೆಗೆ ಗುರಿಯಾಗುವಂತೆ ಮಾಡುವ ಕಡೆಗೂ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತದೆ. ಶಾಲೆ ಬಿಟ್ಟು ಬಾರ್ ಬೆಂಡಿಂಗ್, ಗಾರೆ ಹಾಗೂ ಇತರೆ ಕೂಲಿಕೆಲಸ ಹೋಗುತ್ತಿರುವ ಬಹಳಷ್ಟು ಮಕ್ಕಳು ಬಹಳ ಬೇಗ ಮಾದಕ ವ್ಯಸನಗಳ ಕೂಪಕ್ಕೆ ಬೀಳುತ್ತಿದ್ದಾರೆ. ಇದನ್ನು ತಪ್ಪಿಸುವ ಸಲುವಾಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅವರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

ಶಾಲೆ, ಕಾಲೇಜುಗಳಲ್ಲಿ ಮಕ್ಕಳು ಎದುರಿಸುವ ಸಮಸ್ಯೆಗಳನ್ನು ಅರಿಯುವುದು, ಸಮಾಜದಲ್ಲಿ ಪೊಲೀಸ್ ಇಲಾಖೆ ಗೌರವ, ವಿಶ್ವಾಸ ಹಾಗೂ ನಂಬಿಕೆ ವೃದ್ಧಿಸುವ ಮತ್ತು ಅವರ ಸಮಸ್ಯೆಗಳನ್ನು ಹೇಳಿಕೊಳ್ಳುವ ಸಲುವಾಗಿ ಶಾಲೆ ಕಾಲೇಜುಗಳ ಶಿಕ್ಷಕರು, ವರ್ತಕರು, ಕಾರ್ಮಿಕರು, ಹಣ್ಣು ಮಾರುವವರು ಮತ್ತು ಆಟೋ ಚಾಲಕರು ಸೇರಿದಂತೆ ಎಲ್ಲ ವರ್ಗಗಳ ವಾಟ್ಸಪ್ ಗ್ರೂಪ್ ಗಳಲ್ಲಿ ಪೊಲೀಸರಿಂದ ಸೇರಿಸಲಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...