ಪ್ರಧಾನ ಮಂತ್ರಿಯವರು ಸದೃಢ ಕರ್ನಾಟಕ ನಿರ್ಮಿಸಲು ಸಲಹೆ ನೀಡಿದ್ದಾರೆ. ಅದರಂತೆ ಗುರಿ ತಲುಪಲು ನಾವು ದಿನದ 24 ಗಂಟೆಯೂ ಕೆಲಸ ಮಾಡಲು ನಿರ್ಧರಿಸಿದ್ದೇವೆ. ಸಾಮಾಜಿಕ ನ್ಯಾಯ ಪಾಲನೆ ಜೊತೆಗೆ ಎಲ್ಲರೂ ಸ್ವಾಭಿಮಾನ ಜೀವನ ನಡೆಸಲು ಬೇಕಾದ ವ್ಯವಸ್ಥೆ ಕಲ್ಪಿಸುವುದು ನಮ್ಮ ಸಂಕಲ್ಪ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆರು ತಿಂಗಳಿನಲ್ಲಿ ಕಾರ್ಯನಿರ್ವಹಣೆ, ಸಾಧನೆಯ ಮಾಹಿತಿಯುಳ್ಳ ‘ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು’ ಕೈಪಿಡಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಿಡುಗಡೆಗೊಳಿಸಿದರು.

ಸಮರ್ಥ ಸಚಿವರು, ಪ್ರಗತಿಪರ ಶಾಸಕರು ಮತ್ತು ಸರ್ಕಾರದ ಆಶಯಕ್ಕೆ ಪೂರಕವಾಗಿ ಕಾರ್ಯ ನಿರ್ವಹಿಸುವ ಅಧಿಕಾರಿಗಳ ತಂಡದೊಂದಿಗೆ ಸದೃಢ ಕರ್ನಾಟಕ ನಿರ್ಮಾಣಕ್ಕಾಗಿ ದಿನದ 24 ಗಂಟೆಯೂ ಚಿಂತನೆ ನಡೆಸಿ ಕಾರ್ಯೋನ್ಮುಖ ವಾಗುವ ಭರವಸೆಯನ್ನು ಮಾನ್ಯ ಮುಖ್ಯಮಂತ್ರಿಯವರು ತಿಳಿಸಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಸ್ಥಾನದಿಂದ ಚಿಂತಿಸಿ ಸರ್ವರು ಸಮಾನವಾಗಿ ಸ್ವಾಭಿಮಾನದಿಂದ ಸ್ವಾವಲಂಬಿ ಜೀವನ ನಡೆಸುವಂತ ಆಗುವ ನಿಟ್ಟಿನಲ್ಲಿ ಸರ್ಕಾರ ಲಕ್ಷ್ಯ ಹರಿಸಲಿದೆ ಎಂದು ಮಾನ್ಯ ಮುಖ್ಯಮಂತ್ರಿ ಅವರು ತಿಳಿಸಿದ್ದಾರೆ