Tuesday, April 29, 2025
Tuesday, April 29, 2025

ಜನಹಿತ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದೇವೆ-ಸಿ ಎಂ.

Date:

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಜನಹಿತಕ್ಕಾಗಿ ಹಲವು ಯೋಜನೆ ಜಾರಿಗೊಳಿಸಲಾಗಿದೆ ನಮಗೆ ನಮ್ಮ ಜವಾಬ್ದಾರಿಯಾಗಿದೆ ಸಿದ್ದರಾಮಯ್ಯ ಅವರೇ ಮೊಸರಲ್ಲಿ ಕಲ್ಲು ಹುಡುಕುವ ಯತ್ನ ಮಾಡಬೇಡಿ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರಿಂದ ಹೆಚ್ಚಿನದೇನನ್ನೂ ನಿರೀಕ್ಷೆ ಮಾಡಲಾಗದು. ಜನಹಿತದ ಕಾರ್ಯಕ್ರಮ ಅನುಷ್ಠಾನವಾಗಿದ್ದನ್ನು ನೋಡಬೇಕು. ಅದನ್ನು ಅನಗತ್ಯ ಟೀಕೆ ಮಾಡಬಾರದು ಸಿದ್ದರಾಮಯ್ಯ ಅವರ ಅವಧಿಯಲ್ಲಿ ಪ್ರಣಾಳಿಕೆಯ ಶೇ. 96ರಷ್ಟು ಜಾರಿಗೊಳಿಸಿದ್ದಾರೆ ಹೇಳಿಕೊಂಡಿದ್ದರು. ಈ ನಡುವೆಯೂ ಜನರು ಅವರನ್ನು‌ ತಿರಸ್ಕರಿಸಿದ್ದರು ಎಂದು ಸಿಎಂ ಬೊಮ್ಮಾಯಿ ಅವರು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ.

ಈ ವೇಳೆ “ಕಾರ್ಯಕ್ರಮ ಘೋಷಿಸಿದರೆ ಆಗುವುದಿಲ್ಲ ಅನುಷ್ಠಾನವಾಗಬೇಕು ವಿದ್ಯಾರ್ಥಿಗಳು, ಯುವಕರು, ಮಹಿಳೆಯರು, ರೈತರು, ದುಡಿಯುವ ವರ್ಗ, ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಒಳ್ಳೆಯದು ಮಾಡಬೇಕೆನ್ನುವ ಅರಿವಿದೆ” ಎಂದು ಸಿಎಂ ತಿಳಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ “ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ಘಟನೆಯಿಂದ ಬಯಲಾಗಿದೆ. ಬಿಜೆಪಿ ಶಾಸಕರು ತಮ್ಮ ಪಕ್ಷಕ್ಕೆ ಬರುತ್ತಿದ್ದಾರೆಂದು ಕಾಂಗ್ರೆಸ್ ನಾಯಕರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಆದರೆ, ಕಾಂಗ್ರೆಸ್ ಸ್ಥಿತಿಯೇ ಮನೆಯೊಂದು ಮೂರು ಬಾಗಿಲು ಎಂಬಂತಾಗಿದೆ” ಎಂದು ವ್ಯಂಗ್ಯ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...