ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ನಿರೋಧಕ ಲಸಿಕೆ ಕಡ್ಡಾಯಗೊಳಿಸಿದ್ದರಿಂದ ಯಾರಿಗೂ ನಷ್ಟವಾಗಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ನಿರೋಧಕ ಲಸಿಕೆ ಪಡೆಯುವುದನ್ನು ಕಡ್ಡಾಯಗೊಳಿಸಿದ ಕಾರಣ ಜನ ಉದ್ಯೋಗ ಕಳೆದುಕೊಳ್ಳುತ್ತಿದ್ದಾರೆ. ಪಡಿತರ ಸೇರಿ ಹಲವು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಕೀಲ ಪ್ರಶಾಂತ್ ಭೂಷಣ್ ಅವರು ದೂರಿದರು.
ಲಸಿಕೆಗಳ ಕ್ಲಿನಿಕಲ್ ಪ್ರಯೋಗ ಹಾಗೂ ಲಸಿಕೆ ಕಡ್ಡಾಯಗೊಳಿಸಿರುವ ಕುರಿತು ಮಾಹಿತಿ ನೀಡಬೇಕು ಎಂದು ಸಲ್ಲಿಕೆಯಾದ ಅರ್ಜಿಯನ್ನು ನ್ಯಾ.ಎಲ್. ನಾಗೇಶ್ವರ ರಾವ್ ಅವರ ನೇತೃತ್ವದ ನ್ಯಾಯಪೀಠವು ವಿಚಾರಣೆ ನಡೆಸಿತು.
ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಯಾರೂ ಉದ್ಯೋಗ, ಪಡಿತರ ಸೇರಿ ಯಾವುದೇ ಸೌಲಭ್ಯ ಕಳೆದುಕೊಳ್ಳುತ್ತಿಲ್ಲ ಎಂದು ಪ್ರತ್ಯುತ್ತರ ನೀಡಿದರು.
ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯವು ಅರ್ಜಿ ಕುರಿತ ಅಂತಿಮ ವಿಚಾರಣೆಗೆ ಶೀಘ್ರವೇ ದಿನಾಂಕ ತಿಳಿಸಲಾಗುವುದು ಎಂದು ಆದೇಶ ಹೊರಡಿಸಿತು.
ಕೋವಿಡ್ ನಿಂದಾಗಿ ದೇಶದಲ್ಲಿ ಯಾರೂ ಸೌಲಭ್ಯ ವಂಚಿತರಾಗಿಲ್ಲ
Date: