ಫೆಬ್ರವರಿಯಲ್ಲಿ ಆರಂಭವಾಗಬೇಕಿದ್ದ ಎಂಬಿಬಿಎಸ್ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡುವಂತೆ ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿಗೆ ಸಚಿವ ಡಾಕ್ಟರ್ ಸುಧಾಕರ್ ಅವರು ಸೂಚಿಸಿದ್ದಾರೆ.
ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾದಾಗ ಆನ್ ಲೈನ್ ನಲ್ಲಿ ತರಗತಿಗಳು ನಡೆಸಿದ್ದರಿಂದ ಪರೀಕ್ಷೆಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಪರೀಕ್ಷೆ ಮುಂದೂಡಬೇಕೆಂದು ವಿದ್ಯಾರ್ಥಿಗಳು ಕಳೆದ ವಾರ ವರ್ಚ್ಯುವಲ್ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪತ್ರ ಬರೆದಿರುವ ಸಚಿವರು, ರಾಜೀವ್ ಗಾಂಧಿ ಆರೋಗ್ಯ ವಿವಿ ಅಧೀನದ ವೈದ್ಯಕೀಯ ಕಾಲೇಜುಗಳಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಯ ಆರಂಭವಾದದ್ದು ಮೇ ತಿಂಗಳಲ್ಲಿ. ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಿದ್ದ ಕಾರಣ ಜುಲೈವರೆಗೆ ಪಾಠಗಳು ಆನ್ ಲೈನ್ ನಲ್ಲಿ ನಡೆದಿವೆ. ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಲ್ಲದೆ ಅಂತಿಮ ವರ್ಷದ ವಿದ್ಯಾರ್ಥಿಗಳು ಎರಡು ತಿಂಗಳು ಕಾಲ ಕೋವಿಡ್ ಕರ್ತವ್ಯವನ್ನು ನಿರ್ವಹಿಸಿದ್ದಾರೆ ಎಂದು ತಿಳಿಸಿದರು. ತರಗತಿಗಳು ವಿಳಂಬವಾಗಿ ಆರಂಭವಾಗಿರುವುದರಿಂದ ಪರೀಕ್ಷೆಯಲ್ಲಿ ಮುಂದೂಡಬೇಕು ಎಂದು ಹೇಳಿದರು.
ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆ ಮುಂದೂಡಲು ಸಚಿವರ ಸೂಚನೆ
Date: