ಗಂಗಾ ಕಲ್ಯಾಣ ಯೋಜನೆ ವಿಳಂಬ ತಪ್ಪಿಸಲು ಇನ್ನು ಮುಂದೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲೇ ಶೀಘ್ರದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಹೇಳಿದ್ದಾರೆ.
ಹಾಸನದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾ ಕಲ್ಯಾಣ ಯೋಜನೆ ಕಾಮಗಾರಿ ಗುತ್ತಿಗೆ ಪಡೆದವರ, ವಿರುದ್ಧ ಗುತ್ತಿಗೆ ಸಿಗದ ಗುತ್ತಿಗೆದಾರರು ಕೋರ್ಟ್ ಗೆ ಹೋಗಿ ತಡೆಯಾಜ್ಞೆ ತರುವುದು, ಇತ್ಯಾದಿ ತೊಡಕುಗಳಿಂದ ವಿಳಂಬವಾಗುತ್ತಿತ್ತು. ಅದನ್ನು ತಪ್ಪಿಸಲು ಗುತ್ತಿಗೆ ಬದಲು ಫಲಾನುಭವಿಗೆ ಹಣ ಒದಗಿಸುತ್ತದೆ ಎಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.
ಮೆಟ್ರಿಕ್ ಪೂರ್ವಕ್ಕಿಂತ ಮೆಟ್ರಿಕ್-ನಂತರದ ಹಾಸ್ಟೆಲ್ ಸಮಸ್ಯೆ ಹೆಚ್ಚಾಗಿದೆ. ಆದ್ದರಿಂದ, ಹಾಸನ ಪ್ರದೇಶದಲ್ಲಿ ಬಾಡಿಗೆ ಕಟ್ಟಡವನ್ನು ವ್ಯವಸ್ಥೆ ಕಲ್ಪಿಸಲು ವಿಶೇಷ ಅನುದಾನ ಕೊಡಲಾಗುವುದು ದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಹಾಸ್ಟೆಲ್ ವ್ಯವಸ್ಥೆಯನ್ನು ತುರ್ತಾಗಿ ಮಾಡಲಾಗುತ್ತಿದೆ. ಹಾಸನ ಕ್ಷೇತ್ರದಲ್ಲೂ ಆರು ಹಾಸ್ಟೆಲ್ ಅನುಮತಿ ನೀಡಲಾಗಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ಗಳಲ್ಲಿ ಗುಣಮಟ್ಟದ ಆಹಾರ ನೀಡಬೇಕು ಎಂಬ ಕಾರಣದಿಂದ ಪಾರದರ್ಶಕ ಟೆಂಡರ್ ಗೆ ಅವಕಾಶ ಕಲ್ಪಿಸಿದೆ. ಅಕ್ರಮ ನಡೆದಿದ್ದೇ ಆದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಭಿಕ್ಷುಕರಿಗೆ ನೆಲೆ ಒದಗಿಸಲು 18 ಕೇಂದ್ರಗಳನ್ನು ತೆರೆಯಲಾಗಿದೆ. ಬಿಕ್ಷುಕ ರಹಿತ ನಗರ ಮಾಡಬೇಕು ಎಂಬ ದೃಷ್ಟಿಯಿಂದ ಪ್ರಯತ್ನ ನಡೆಯುತ್ತಿದೆ. ಅಲೆಮಾರಿಗಳಿಗೆ ಸೂರು ಒದಗಿಸಲು 250 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಾಸನದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಿಂದೆ ನಡೆದಿದೆ ಎನ್ನಲಾದ ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವನ್ನೂ ನೀಡಿದ್ದಾರೆ.