ಕೇಂದ್ರ ಲೋಕಸೇವಾ ಆಯೋಗವು ನಾಗರಿಕ ಸೇವಾ ಪರೀಕ್ಷೆ ಮತ್ತು ಭಾರತೀಯ ಅರಣ್ಯ ಸೇವಾ ಪರೀಕ್ಷೆಗೆ ಅಧಿಸೂಚನೆ ಹೊರಡಿಸಿದೆ.
ದೇಶದ ಅತ್ಯಂತ ಪರಿಷ್ಟಿತ ಪರೀಕ್ಷೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಎರಡೂ ಹುದ್ದೆಗಳಿಗೆ ಒಂದೇ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಸಲ್ಲಿಸಲು ಫೆಬ್ರವರಿ 22 ಕೊನೆಯ ದಿನವಾಗಿದೆ. ಮಹಿಳೆಯರು, ಪುರುಷರು ಮಾತ್ರವಲ್ಲ ತೃತೀಯಲಿಂಗಿ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಈ ಬಾರಿ 816 ನಾಗರಿಕ ಸೇವಾ ಹುದ್ದೆಗಳಿಗೆ ಮತ್ತು 152 ಭಾರತೀಯ ಅರಣ್ಯಾಧಿಕಾರಿ ಸೇವಾ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಯುಪಿಎಸ್ ಸಿ ಅಧಿಸೂಚನೆಯಲ್ಲಿ ತಿಳಿಸಿದೆ. ವೇಳಾಪಟ್ಟಿಯಲ್ಲಿ ಪ್ರಕಟಿಸಿರುವಂತೆ ಜೂನ್ 5ರಂದು ಪೂರ್ವಭಾವಿ ಪರೀಕ್ಷೆ ನಡೆಯಲಿದೆ. 296 ಹುದ್ದೆಗಳಲ್ಲಿ 34 ಹುದ್ದೆಗಳನ್ನು ವಿಕಲಚೇತನರಿಗೆ ಮೀಸಲಿಡಲಾಗಿದೆ. ಬೆಂಗಳೂರು ಮೈಸೂರು ಹಾಗೂ ಧಾರವಾಡ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ಅರಣ್ಯಾಧಿಕಾರಿ ಸೇವೆಗಳಿಗೆ ನವೆಂಬರ್ ತಿಂಗಳಿನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಾಗರಿಕ ಸೇವಾ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ಯಾವಾಗ ನಡೆಯಲಿದೆ ಎಂದು ಸೂಚನೆಯಲ್ಲಿ ಸ್ಪಷ್ಟಪಡಿಸಿಲ್ಲ. ಮುಖ್ಯ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ಸಂದರ್ಶನ ನಡೆಸಿ ಅನಂತರ ನೇಮಕ ಮಾಡಿಕೊಳ್ಳಲಾಗುತ್ತದೆ.
ಯಾವುದೇ ಪದವೀಧರರು ಐಎಎಸ್ ಬರೆಯಬಹುದು. ಆದರೆ ಅರಣ್ಯಾಧಿಕಾರಿ ಸೇವಾ ಬುದ್ಧಿಗಳ ಪರೀಕ್ಷೆ ಬರೆಯಲು ಇಚ್ಚಿಸುವ ಅಭ್ಯರ್ಥಿಗಳು ಪಶುಪಾಲನಾ ಮತ್ತು ಪಶುವೈದ್ಯ ವಿಜ್ಞಾನ ಅಥವಾ ಸಸ್ಯಶಾಸ್ತ್ರ ಅಥವಾ ರಸಾಯನಶಾಸ್ತ್ರ ಅಥವಾ ಭೂವಿಜ್ಞಾನ ಶಾಸ್ತ್ರ ಅಥವಾ ಗಣಿತ ಸಂಖ್ಯಾಶಾಸ್ತ್ರ, ಪ್ರಾಣಿಶಾಸ್ತ್ರ ಇವುಗಳಲ್ಲಿ ಯಾವುದಾದರೂ ಒಂದು ವಿಷಯದಲ್ಲಿ ಪದ್ಧತಿ ಅಥವಾ ಕೃಷಿ ವಿಜ್ಞಾನ ಅಥವಾ ಅರಣ್ಯ ಶಾಸ್ತ್ರದಲ್ಲಿ ಪದವಿ ಅಥವಾ ಇಂಜಿನಿಯರಿಂಗ್ ಪದವಿ ಪಡೆದಿರಬೇಕು. ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿ 32 ವರ್ಷವಾಗಿದೆ.