ಚಿತ್ರಮಂದಿರ, ರಂಗಮಂದಿರ ಜಿಮ್ ,ಈಜುಕೊಳ ಸಾಮರ್ಥ್ಯಕ್ಕೆ ಶೇಕಡ 100ರಷ್ಟು ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರವೇಶದ್ವಾರದಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಇಟ್ಟಿರಬೇಕು ಹಾಗೂ ಥರ್ಮಲ್ ಸ್ಕ್ಯಾನ್ ಮೂಲಕ ಪ್ರತಿಯೊಬ್ಬರಿಗೂ ಪರೀಕ್ಷೆ ಮಾಡಬೇಕು. ಎಲ್ಲ ವ್ಯಕ್ತಿಗಳು ಕಡ್ಡಾಯವಾಗಿ ಎನ್ -95 ಮಾಸ್ಕ್ ಧರಿಸಬೇಕು.
ಪ್ರದರ್ಶನದ ಸಮಯ ಸೇರಿದಂತೆ ಎಲ್ಲಾ ಸಮಯದಲ್ಲೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದು ಸರ್ಕಾರ ಸೂಚಿಸಿದೆ.
ಚಿತ್ರಮಂದಿರ, ರಂಗಮಂದಿರ, ಜಿಮ್, ಈಜುಕೊಳ ಇವುಗಳ ಸಾಮರ್ಥ್ಯವನ್ನು ಶೇ.50ರಷ್ಟು ಬಳಕೆಗೆ ಮಾತ್ರ ಅವಕಾಶ ನೀಡಲಾಗಿತ್ತು. ಈಗ ಇಲ್ಲಿಗೆ ಹೋಗುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕೆಂದು ಸೂಚಿಸಲಾಗಿದೆ.
ಪ್ರತಿ ಪ್ರದರ್ಶನದ ನಂತರ ಸಭಾಂಗಣ ಮತ್ತು ವಿಶ್ರಾಂತಿ ಕೊಠಡಿಗಳನ್ನು ಸ್ವಚ್ಛಗೊಳಿಸಬೇಕು.
ಕೋವಿಡ್ ಮಾರ್ಗಸೂಚಿಯನ್ವಯ ಎಸಿ ಬಳಸಬೇಕೆಂದು ತಿಳಿಸಲಾಗಿದೆ. ಜಿಮ್, ಯೋಗ, ಮತ್ತು ಈಜು ಕೇಂದ್ರದಲ್ಲಿ ಪ್ರತಿಯೊಬ್ಬರ ನಡುವೆ ಆರು ಅಡಿ ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಬ್ಯಾಚ್ ಮುಗಿದ ನಂತರ ವಿಶ್ರಾಂತಿ ಕೊಠಡಿಯನ್ನು ಸ್ವಚ್ಛಗೊಳಿಸಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಸಂಘಟಕರು ಈ ಎಲ್ಲದರ ಮೇಲ್ವಿಚಾರಣೆ ನಡೆಸುವಂತೆ ಆದೇಶದಲ್ಲಿ ಸೂಚಿಸಲಾಗಿದೆ.