Saturday, June 21, 2025
Saturday, June 21, 2025

ಆರ್ಥಿಕ ಬಿಕ್ಕಟ್ಟಿನಲ್ಲಿ ಶ್ರೀಲಂಕಾ ಆಹಾರ ವಸ್ತುಗಳಿಗೆ ಜನರ ಪರದಾಟ

Date:

1948ರ ಆರ್ಥಿಕ ಬಿಕ್ಕಟ್ಟಿನ ಬಳಿಕ ಇದೇ ಮೊದಲ ಬಾರಿಗೆ ಶ್ರೀಲಂಕಾ ಅತೀ ದೊಡ್ಡ ಸಂಕಷ್ಟಕ್ಕೆ ಸಿಲುಕಿದೆ. ಆಹಾರ ವಸ್ತುಗಳ ಕೊರತೆ, ನಿರುದ್ಯೋಗ, ಇಂಧನ ಅಭಾವ, ವಿದೇಶಿ ಕರೆನ್ಸಿಯ ಕೊರತೆಯಿಂದ ಇಡೀ ದೇಶವೇ ದಿವಾಳಿಯಂಚಿಗೆ ತಲುಪಿದೆ.

ಮೂರು ಹೊತ್ತಿನ ಊಟಕ್ಕೂ ಗತಿಯಿಲ್ಲದೇ ಜನ ವಲಸೆ ಹೋಗುವ ಸ್ಥಿತಿ ಬಂದಿದೆ.

ದೇಶದ ಆರ್ಥಿಕತೆ ಪತನಗೊಳ್ಳಲು ವಿದೇಶಿ ಕರೆನ್ಸಿಯ ಕೊರತೆಯೇ ಪ್ರಮುಖ ಕಾರಣ. ಶ್ರೀಲಂಕಾವು ಆಮದಿನ ಮೇಲೆಯೇ ಅವಲಂಬಿಸಿದೆ. ಅದು ಪೆಟ್ರೋಲಿಯಂ, ಆಹಾರ ವಸ್ತು, ಪೇಪರ್‌, ಸಕ್ಕರೆ, ಕಾಳುಗಳು, ಔಷಧ, ಸಾರಿಗೆ ಸಲಕರಣೆ ಮತ್ತಿತರ ಅಗತ್ಯ ವಸ್ತುಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತದೆ. ವಿದೇಶಿ ಕರೆನ್ಸಿಯ ಕೊರತೆ ಎಂದರೆ ಈ ಅಗತ್ಯ ವಸ್ತುಗಳನ್ನು ಖರೀದಿಸಲು ಹಣದ ಕೊರತೆ ಎದುರಾಗಿದೆ ಎನ್ನಲಾಗಿದೆ.

ಶ್ರೀಲಂಕಾದ ಜಿಡಿಪಿಯ ಶೇ.10ರಷ್ಟು ಬರುವುದೇ ಪ್ರವಾಸೋದ್ಯಮದಿಂದ. 2019ರ ಕೊಲೊಂಬೋ ಸರಣಿ ಬಾಂಬ್‌ ಸ್ಫೋಟದ ಬಳಿಕ ಇಲ್ಲಿ ಪ್ರವಾಸೋದ್ಯಮ ಕುಸಿಯತೊಡಗಿತು. ಕೊರೊನಾ ಹಾಗೂ ಲಾಕ್‌ಡೌನ್‌ ಈ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿತು ಎಂದು ತಿಳಿದುಬಂದಿದೆ.

2018ರಲ್ಲಿ ಶ್ರೀಲಂಕಾದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯು 1.6 ಶತಕೋಟಿ ಡಾಲರ್‌ ಇತ್ತು. 2019ರಲ್ಲಿ ಇದು 793 ದಶಲಕ್ಷ ಡಾಲರ್‌ಗೆ, 2020ರಲ್ಲಿ 548 ದಶಲಕ್ಷ ಡಾಲರ್‌ಗೆ ಇಳಿಕೆಯಾಯಿತು. ಎಫ್ ಡಿಐ ಇಳಿಕೆಯ ಬೆನ್ನಲ್ಲೇ, ಮೀಸಲು ನಿಧಿಯಲ್ಲಿದ್ದ ವಿದೇಶಿ ಕರೆನ್ಸಿಯೂ ಇಳಿಮುಖವಾಯಿತು. ಇನ್ನೊಂದೆಡೆ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ ಸಾಲ ಪಡೆಯಲೂ ಶ್ರೀಲಂಕಾ ನಿರಾಕರಿಸಿದ್ದು, ಅದರ ಆರ್ಥಿಕ ಪತನಕ್ಕೆ ಕಾರಣವಾಗಿದೆ.

ಕೃಷಿಯನ್ನು ಶೇ.100ರಷ್ಟು ಸಾವಯವವಾಗಿಸಬೇಕು ಎಂಬ ಉದ್ದೇಶವೂ ಶ್ರೀಲಂಕಾದ ಮೇಲೆ ಪ್ರತಿಕೂಲ ಪರಿಣಾಮ ಬೀರಿತು. ದೇಶಾದ್ಯಂತ ರಾಸಾಯನಿಕ ಗೊಬ್ಬರಗಳಿಗೆ ಸರಕಾರ ನಿಷೇಧ ಹೇರಿದ ಕಾರಣ, ಕೃಷಿ ಉತ್ಪನ್ನಗಳ ಉತ್ಪಾದನೆ ಗಣನೀಯವಾಗಿ ಕುಗ್ಗಿತು. ಇದರ ಜತೆಗೆ “ಆಹಾರ ಮಾಫಿಯಾ’ವು ಅತ್ಯಗತ್ಯ ವಸ್ತುಗಳನ್ನು ಕಳ್ಳದಾಸ್ತಾನು ಮಾಡಿದ ಕಾರಣ ಆಹಾರ ವಸ್ತುಗಳ ಬೆಲೆ‌ ಗಗನಕ್ಕೇರಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Malenadu Development Foundation ಸಾಧಿಸುವ ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು- ಡಾ.ಗುರುರಾಜ ಕರ್ಜಗಿ

Malenadu Development Foundation ಸಾಧಿಸುವ ಛಲ, ಧೈರ್ಯದೊಂದಿಗೆ ವಿದ್ಯಾರ್ಥಿಗಳು ಜೀವನೋತ್ಸಾಹ ಬೆಳೆಸಿಕೊಳ್ಳಬೇಕು...

MESCOM ಜೂ.23 ರಂದು ಕುಂಸಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ...