Friday, April 18, 2025
Friday, April 18, 2025

ಜಿಲ್ಲಾಧಿಕಾರಿಗಳಿಗೆ ಬೇಲೂರಿನ‌ ಜನಪರ ಸಂಘಟನೆಗಳ ಮನವಿ

Date:

ಬೇಲೂರು ಚನ್ನಕೇಶವ ಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರದಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು.

ದೇವಸ್ಥಾನದ ಹೊರಗೆ ಪ್ರವಾಸಿಗರಿಗೆ ಮಾಹಿತಿ ನೀಡಿ, ಸಣ್ಣಪುಟ್ಟ ವ್ಯಾಪಾರ ನಡೆಸುವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ, ವಹಿವಾಟು ನಡೆಸದಂತೆ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳು ಸೂಚಿಸಿದ್ದಾರೆ.

ಇದು ಅಸಾಂವಿಧಾನಿಕ ಕ್ರಮವಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಬೇಲೂರು ಸೇರಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ನಡೆಯುವ ಜಾತ್ರೆ, ಉತ್ಸವ, ಹಬ್ಬಗಳು ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಮರಿಗೆ ಆರ್ಥಿಕ ಚಟುವಟಿಕೆ ನಡೆಸಲು ಅವಕಾಶ ನೀಡಬೇಕು. ಹಾಗೂ ಅನಧಿಕೃತವಾಗಿ ನಿರ್ಬಂಧ ಹೇರಿ ಸಾಮಾಜಿಕ ಬಹಿಷ್ಕಾರ ಹಾಕದಂತೆ ಜಿಲ್ಲಾಡಳಿತ ಆದೇಶ ಹೊರಡಿಸಬೇಕು ಎಂದು
ಒತ್ತಾಯಿಸಿದರು.

ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಮರ ವಿರುದ್ಧ ಸುಳ್ಳು ಮತ್ತು ಅಪಪ್ರಚಾರದ ಮೂಲಕ ಸಮಾಜದಲ್ಲಿ ಕೋಮು ದ್ವೇಷ ಹರಡುತ್ತಿರುವ ಸಂಘಟನೆಗಳು ಮತ್ತು ವ್ಯಕ್ತಿಗಳ ವಿರುದ್ಧ ಪೋಲೀಸರು ಕ್ರಮ ಜರುಗಿಸಬೇಕು. ಬೇಲೂರು ದೇವಸ್ಥಾನವನ್ನು ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಸೇರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಇಂತಹ ಸಂದರ್ಭದಲ್ಲಿ ಜಾಗತಿಕ ಮಟ್ಟದಲ್ಲಿ ದೇಶ ಮತ್ತು ಜಿಲ್ಲೆಗೆ ಮುಜುಗರ ತರುವಂತಹ ಇಂತಹ ಕೃತ್ಯಗಳು ನಡೆಯದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರಿಗೆ ಮನವಿ ಸಲ್ಲಿಸಿದರು.

ಧರಣಿಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಧರ್ಮೇಶ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ಎಚ್.ಕೆ. ಸಂದೇಶ್, ರಾಜಶೇಖರ್, ಕೃಷ್ಣದಾಸ್, ಕಾಂಗ್ರೆಸ್‌ ಮುಖಂಡ ಅಬ್ದುಲ್ ಸಮದ್, ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್, ಹಿರಿಯ ನಾಗರಿಕರ ವೇದಿಕೆ ಬಿ.ಕೆ.ಮಂಜುನಾಥ್, ಪತ್ರಕರ್ತ ವೆಂಕಟೇಶ್, ಎಚ್‌.ಎಸ್‌.ನಾಗರಾಜು, ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಎಂ.ಜಿ.ಪೃಥ್ವಿ, ಕೆ.ಪಿ.ಆರ್‌.ಎಸ್‌ ಜಿಲ್ಲಾ ಅಧ್ಯಕ್ಷ ಎಚ್.ಆರ್.ನವೀನ್ ಕುಮಾರ್, ಮುಬಾಶಿರ್‌ ಅಹಮದ್‌, ಕೆಪಿಸಿಸಿ ಸದಸ್ಯ ಎಚ್‌.ಕೆ.ಮಹೇಶ್‌, ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ತಾರಾಚಂದನ್‌, ಲೇಖಕಿ ಸುವರ್ಣ ಶಿವಪ್ರಸಾದ್ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...