ಹಿಂದೂಗಳಿಗೆ ಅವರ ಜನಸಂಖ್ಯೆಯ ಆಧಾರದ ಮೇಲೆ ರಾಜ್ಯಗಳು ಅಲ್ಪಸಂಖ್ಯಾತ ಸಮುದಾಯದ ಸ್ಥಾನಮಾನವನ್ನು ನೀಡಬಹುದು ಎಂದು ಕೇಂದ್ರ ಸರ್ಕಾರ ಸ್ಪಷ್ಟವಾಗಿ ಹೇಳಿದೆ.
ಅಲ್ಪಸಂಖ್ಯಾತರನ್ನು ಜನಸಂಖ್ಯೆ, ಧಾರ್ಮಿಕ ಮತ್ತು ಭಾಷಿಕ ಆಧಾರದ ಮೇಲೆ ಗುರುತಿಸಿ ಅವರಿಗೆ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ನಿಗದಿಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ಅಫಿಡವಿಟ್ ಸಲ್ಲಿಸುವ ಮೂಲಕ ಕೇಂದ್ರವು ಈ ವಿಷಯ ತಿಳಿಸಿದೆ.
ಈ ಪ್ರಕರಣದ ವಿಚಾರಣೆ ಈಗ ಮೇ 10 ರಂದು ನಡೆಯಲಿದೆ.
ಅಲ್ಪಸಂಖ್ಯಾತರ ರಾಷ್ಟ್ರೀಯ ಆಯೋಗ ಕಾಯ್ದೆ 1992ರ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಅಧಿಸೂಚನೆ ನೀಡುವ ಕೇಂದ್ರ ಸರ್ಕಾರದ ಅಧಿಕಾರದ ವಿರುದ್ಧದ ಮನವಿಗೆ ಸ್ಪಷ್ಟ ಉತ್ತರ ನೀಡಲು ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ಹೆಚ್ಚಿನ ಸಮಯವನ್ನು ನೀಡಿದೆ. ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾಯಾಲಯದಿಂದ ಸಮಯ ಕೋರಿದಾಗ, ಕೇಂದ್ರ ಸರ್ಕಾರ ಸಲ್ಲಿಸಿದ ಅಫಿಡವಿಟ್ ಅನ್ನು ಇನ್ನೂ ಓದಿಲ್ಲ ಎಂದು ಹೇಳಿದ್ದಾರೆ.
ಅಫಿಡವಿಟ್ ಓದಿ ವಾದ ಮಂಡಿಸಲು ನ್ಯಾಯಾಲಯ ಸ್ವಲ್ಪ ಕಾಲಾವಕಾಶ ನೀಡಬೇಕು ಎಂದರು.