ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಈ ಸಂಬಂಧ ವಿಧಾನಸಭೆಯಲ್ಲಿ ಮಾತನಾಡಿದ ಅವರು, ಆಯುಷ್ ವೈದ್ಯ ಪದ್ಧತಿಗಳ ಕುರಿತು ಕೇಂದ್ರ ಸರ್ಕಾರವೇ ನೀತಿ ರೂಪಿಸಿದೆ.
ರಾಜ್ಯದಲ್ಲಿ ಪ್ರತ್ಯೇಕ ನೀತಿ ರೂಪಿಸಲು ಅವಕಾಶವಿಲ್ಲ. ಸಾಂಪ್ರಾದಾಯಿಕ ವೈದ್ಯ ಪದ್ಧತಿ ಅಧ್ಯಯನ ಮಾಡುವವರಿಗೆ ಶೈಕ್ಷಣಿಕ ಅರ್ಹತೆ ಕಡ್ಡಾಯ ಎಂದು ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಆಯುಷ್ ವಿಶ್ವವಿದ್ಯಾಲಯ ಸ್ಥಾಪನೆ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾಂಪ್ರದಾಯಿಕವಾಗಿ ಆಯುರ್ವೇದವನ್ನು ಅಭ್ಯಾಸ ಮಾಡುತ್ತಿರುವವರು ಬಳ್ಳಾರಿ ಮತ್ತು ಬೆಂಗಳೂರಿನ ಆಯುರ್ವೇದ ವಿಶ್ವವಿದ್ಯಾಲಯಗಳಲ್ಲಿ ತಮ್ಮನ್ನು ತಾವು ನೋಂದಾಯಿಸಿಕೊಳ್ಳಬಹುದು.ಅವರಿಗೆ ಸರ್ಕಾರ ಉಚಿತ ಸೀಟುಗಳನ್ನು ಕಾಯ್ದಿರಿಸಿದೆ ಎಂದು ಮಾಹಿತಿ ನೀಡಿದ್ದಾರೆ.