Saturday, March 22, 2025
Saturday, March 22, 2025

ನಂದಿನಿ ಬ್ರ್ಯಾಂಡ್ ಸಹಕಾರ ಕ್ಷೇತ್ರಕ್ಕೆ ಬೃಹತ್ ಕೊಡುಗೆ-ಅಮಿತ್ ಶಾ

Date:

ಸಹಕಾರ ರಂಗದ ಕುರಿತು ಹೆಚ್ಚಿನ ಅರಿವು ಮೂಡಿಸಲು ಸಹಕಾರ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ಘೋಷಿಸಿರುವ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಸಹಕಾರ ಕ್ಷೇತ್ರದ ಪಾರದರ್ಶಕ ನಿರ್ವಹಣೆಗೆ ನೀತಿ ಜಾರಿಗೊಳಿಸುವುದಾಗಿ ಪ್ರಕಟಿಸಿದ್ದಾರೆ.

ಇದೇ ವೇಳೆ, ಹಾಲು ಉತ್ಪಾದಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸಲು ಉದ್ದೇಶಿಸಿದ್ದು, ಆ ಯೋಜನೆ ಕರ್ನಾಟಕದಿಂದಲೇ ಪ್ರಾಯೋಗಿಕವಾಗಿ ಆರಂಭವಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಅರಮನೆಯಲ್ಲಿ ಸಹಕಾರ ಇಲಾಖೆ ಆಯೋಜಿಸಿದ್ದ ಸಹಕಾರ ಮೇಳದಲ್ಲಿ ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ನ ಲಾಂಛನ ಬಿಡುಗಡೆ ಮತ್ತು ಸೌಹಾರ್ದ ಸಹಕಾರಿ ಸೌಧವನ್ನು ವರ್ಚುವಲ್‌ ಮೂಲಕ ಉದ್ಘಾಟನೆ ಅವರು ಮಾತನಾಡಿದರು.

ನಂದಿನಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್‌ ಮೂಲಕ ಎಲ್ಲಾ ಹಾಲು ಉತ್ಪಾದಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು. ಇದು ಕೇಂದ್ರದ ಯೋಜನೆಯಾಗಿದ್ದು, ಪ್ರಾಯೋಗಿಕವಾಗಿ ಕರ್ನಾಟಕದಿಂದಲೇ ಆರಂಭವಾಗಲಿ. ಇದಕ್ಕೆ ಬೇಕಾದ ಎಲ್ಲ ಸಹಕಾರ-ಸಹಾಯವನ್ನು ಕೇಂದ್ರ ಸರ್ಕಾರ ನೀಡಲಿದೆ ಎಂದು ಆಶ್ವಾಸನೆ ನೀಡಿದರು.

ಆರ್ಥಿಕ ಸಂಕಷ್ಟದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಲವರ್ಧನೆಗೆ ಕೇಂದ್ರ ಸರ್ಕಾರವು ಕಾರ್ಯೋನ್ಮುಖವಾಗಿದ್ದು, ಕಾನೂನು ತರಲು ಮುಂದಾಗಿದೆ. ಈ ಸಂಬಂಧ ಕರಡನ್ನು ಸಿದ್ಧಪಡಿಸಲಾಗುತ್ತಿದೆ. ನಂತರ ಎಲ್ಲಾ ರಾಜ್ಯಗಳಿಗೂ ಅದನ್ನು ಕಳುಹಿಸಿಕೊಡಲಾಗುವುದು. ಕಾನೂನು ಅಳವಡಿಕೆ ಮಾಡಿಕೊಂಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಬಲವರ್ಧನೆಗೆ ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದು ಶಾ ತಿಳಿಸಿದರು.

ಸಹಕಾರ ರಂಗದ ಕುರಿತು ಹೆಚ್ಚಿನ ಅರಿವು ಮೂಡಿಸಲು ಸಹಕಾರ ವಿಶ್ವವಿದ್ಯಾಲಯ ಆರಂಭಿಸಲಾಗುವುದು. ಸಹಕಾರ ಕ್ಷೇತ್ರವು ಸರ್ಕಾರದ ಹಸ್ತಕ್ಷೇಪ ಇಲ್ಲದೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಸಹಕಾರ ನೀತಿಯನ್ನು ಸಹ ಜಾರಿಗೊಳಿಸುವ ಉದ್ದೇಶವೂ ಇದೆ ಎಂದು ತಿಳಿಸಿದರು.

ಸಹಕಾರ ಆಂದೋಲನವು ಕರ್ನಾಟಕ ರಾಜ್ಯದಿಂದ ಆರಂಭಗೊಂಡಿದೆ. ಅಮೂಲ್‌ ಸಂಸ್ಥೆ, ಲಿಜ್ಜತ್‌ ಪಾಪಡ್‌ ಹೆಸರಲ್ಲಿ ಮಹಿಳೆಯರು ತಯಾರಿಸಿದ ಹಪ್ಪಳ ರಫ್ತು, ಕ್ರಿಬ್ಕೊದಂತಹ ಸಹಕಾರ ಸಂಸ್ಥೆಗಳು ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡುತ್ತಿವೆ. ಇವೆಲ್ಲವು ಆಂದೋಲನದ ಫಲಶೃತಿಯಾಗಿದೆ ಎಂದರು.

ಇದರೊಂದಿಗೆ ಕರ್ನಾಟಕದ ನಂದಿನಿ ಬ್ರ್ಯಾಂಡ್‌ ಸಹ ಸಹಕಾರ ಕ್ಷೇತ್ರಕ್ಕೆ ಬಹುದೊಡ್ಡ ಕೊಡುಗೆ ನೀಡುತ್ತಿದೆ. ಬಹು ಸಾಮರ್ಥ್ಯ ಇರುವ ಸಹಕಾರಿ ಕ್ಷೇತ್ರವು ಗ್ರಾಮೀಣ ಅಭಿವೃದ್ಧಿಯ ಜತೆಗೆ ದೇಶದ ಆರ್ಥಿಕತೆಗೆ ಹೊಸ ದಿಕ್ಕು ನೀಡಿದೆ. ಸಹಕಾರ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದಲು ಸಾಕಷ್ಟುಅವಕಾಶಗಳು ಇವೆ. ಜತೆ ಜತೆಗೆ ಸವಾಲುಗಳೂ ಇವೆ. ಆ ಸವಾಲುಗಳನ್ನು ಮೆಟ್ಟಿನಿಲ್ಲದಿದ್ದರೆ ಸಹಕಾರ ಆಂದೋಲನ ಕಷ್ಟಕರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ನಾವೀಗ ಸ್ವಾತಂತ್ರ್ಯದ ಅಮೃತ ಮಹೋತ್ಸವದ ವರ್ಷದಲ್ಲಿದ್ದೇವೆ. ಈ ವೇಳೆ ನಾವೆಲ್ಲ ಒಂದು ಸಂಕಲ್ಪ ಮಾಡಬೇಕು. ಅಮೃತ ಮಹೋತ್ಸವದಿಂದ ಶತಮಾನೋತ್ಸವದ ವೇಳೆಗೆ ದೇಶದ ಗ್ರಾಮೀಣ ಭಾಗದ ಪ್ರತಿ ಮನೆಗೂ ಸಹಕಾರ ಆಂದೋಲನವನ್ನು ಮುಟ್ಟಿಸುವ ಕೆಲಸ ಮಾಡಬೇಕು. ಈ ಮೂಲಕ ಬಡತನವನ್ನು ನಿರ್ಮೂಲನೆ ಮಾಡಬೇಕಾಗಿದೆ ಎಂದು ಅಮಿತ್‌ ಶಾ ಎಂದು ತಿಳಿಸಿದರು.

ಗ್ರಾಮೀಣ ವಿಕಾಸದಲ್ಲಿ ಸಹಕಾರ ಕ್ಷೇತ್ರದ ಅನಿವಾರ್ಯತೆ ಸೃಷ್ಟಿಯಾಗಬೇಕು. ಸಹಕಾರಿ ಕ್ಷೇತ್ರದಲ್ಲಿ ಭ್ರಷ್ಟಾಚಾರ ಕಡಿಮೆಯಾಗಬೇಕು. ಚುನಾವಣೆ, ಮುಂಬಡ್ತಿ, ನೇಮಕಾತಿ, ಖರೀದಿ ಪ್ರಕ್ರಿಯೆಗಳು ಪಾರದರ್ಶಕವಾಗಬೇಕು. ಇದಕ್ಕಾಗಿ ಜೆಮ್‌ (ಗವರ್ನಮೆಂಟ್‌ ಇ-ಮಾರ್ಕೆಟ್‌ಪ್ಲೇಸ್‌) ಎಂಬ ಹೊಸ ಸಾಫ್ಟ್ ವೇರ್‌ ರೂಪಿಸಲಾಗಿದೆ. ಇದರಿಂದ ಭ್ರಷ್ಟಾಚಾರ ಶೂನ್ಯಕ್ಕಿಳಿಯಲಿದೆ. ಅಲ್ಲದೇ, ಪ್ಯಾಕ್ಸ್‌, ಡಿಸಿಸಿ, ರಾಜ್ಯ ಸಹಕಾರ ಬ್ಯಾಂಕ್‌ ಮತ್ತು ನಬಾರ್ಡ್‌ಗಳನ್ನು ಡಿಜಿಟಲೀಕರಣಗೊಳಿಸಿ ಎಲ್ಲದಕ್ಕೂ ಒಂದೇ ಸಾಫ್ಟ್‌ವೇರ್‌ ಮಾಡಲಾಗುವುದು. ಇದು ಎಲ್ಲಾ ರಾಜ್ಯ ಭಾಷೆಯಲ್ಲಿಯೂ ಲಭ್ಯವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ಶೋಭಾ ಕರಂದ್ಲಾಜೆ, ಭಗವಂತ್‌ ಖೂಬಾ, ರಾಜ್ಯದ ಸಚಿವರಾದ ಎಸ್‌.ಟಿ.ಸೋಮಶೇಖರ್‌, ಆರ್‌.ಅಶೋಕ್‌, ಆರಗ ಜ್ಞಾನೇಂದ್ರ, ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಬೈರತಿ ಬಸವರಾಜ, ಪ್ರಭು ಚವ್ಹಾಣ್‌, ಬಿ.ಸಿ.ಪಾಟೀಲ್‌, ಶಿವರಾಂ ಹೆಬ್ಬಾರ್‌, ಶಶಿಕಲಾ ಜೊಲ್ಲೆ, ಕೆ.ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kumsi MESCOM ಕುಂಸಿ ಮೆಸ್ಕಾಂ ಕಛೇರಿಯಲ್ಲಿ ಮಾರ್ಚ್ 18. ಜನಸಂಪರ್ಕ ಸಭೆ

Kumsi MESCOM ಕುಂಸಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಮಾ.18 ರಂದು ಬೆಳಿಗ್ಗೆ...

Karnataka Legislative Council ಇಡೀ ರಾಷ್ಟ್ರವೇ ಮೆಚ್ಚುವ ‌ಕಾನೂನು ಶಿಕ್ಷಣ ಸಿಗಲಿ- ಮಾಜಿ ನ್ಯಾ.ಎಂ.ಎನ್.ವೆಂಕಟಾಚಲಯ್ಯ

Karnataka Legislative Council ಪ್ರವಾಹೋಪಾದಿಯಲ್ಲಿ ಸಾಧನೆ ಮಾಡುವ ಹಂಬಲ ಉಳ್ಳವರನ್ನು ತಡೆಯಲು...

District Consumer Disputes Redressal Commission ರೆಫ್ರಿಜಿರೇಟರ್ ಸೇವಾನ್ಯೂನತೆ. ಜಿಲ್ಲಾ ವ್ಯಾಜ್ಯ ಪರಿಹಾರ ಆಯೋಗದಿಂದ ಗ್ರಾಹಕರಿಗೆ ಸಿಕ್ಕಿತು ನ್ಯಾಯ

District Consumer Disputes Redressal Commission ದೂರುದಾರರಾದ ಎಸ್.ವಿ.ಲೋಹಿತಾಶ್ವ ಇವರು ಎದುರುದಾರರಾದ...