Tuesday, August 25, 2026
Tuesday, August 25, 2026

ಕುವೆಂಪು ವಿವಿ ಕ್ಯಾಂಪಸ್ ನಲ್ಲಿ ಕಾಡಾನೆ ಓಡಾಟ!

Date:

ನಿನ್ನೆ ಸಂಜೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಆವರಣದಲ್ಲಿ ಎರಡು ಆನೆಗಳು ಕಾಣಿಸಿಕೊಂಡಿದೆ. ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಸಂಜೆ ಆರು ಗಂಟೆ ಸಮಯಕ್ಕೆ ಸಿಬ್ಬಂದಿ ಕ್ವಾರ್ಟರ್ಸ್ ಬಳಿ ಕಾಣಿಸಿಕೊಂಡ ಆನೆಗಳು ಸಂಜೆ 7.30ರ ಹೊತ್ತಿಗೆ ಕುವೆಂಪು ಪ್ರತಿಮೆ, ಗ್ರಂಥಾಲಯದ ಮುಂದೆ ನಡೆದಾಡಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸೆಕ್ಯೂರಿಟಿ‌ ಸಿಬ್ಬಂದಿ‌ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಗಳಿಂದ ಹೊರಬರದಂತೆ ಸೂಚನೆ ನೀಡಿದೆ. ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಧಾವಿಸಲಿದ್ದಾರೆ ಎಂದು ವಿವಿ ಮೂಲಗಳಿಂದ ತಿಳಿದುಬಂದಿದೆ.

ಅರಣ್ಯ ಇಲಾಖೆಯವರು ಸ್ಥಳಕ್ಕೆ ಧಾವಿಸಿದ್ದಾರೆ. ಆನೆಗಳನ್ನು ಕ್ವಾರ್ಟರ್ಸ್ ಹಿಂಭಾಗದಿಂದ ಅರಣ್ಯಕ್ಕೆ ಕಳುಹಿಸುವ ಪ್ರಯತ್ನದಲ್ಲಿದ್ದಾರೆ. ಇನ್ನೊಂದೆಡೆ ಹಾಸ್ಟೆಲ್ ಮ್ಯಾನೇಜರ್ ಗಳು ವಿದ್ಯಾರ್ಥಿಗಳ ಸುರಕ್ಷತೆಗಾಗಿ ಎಚ್ಚರಿಕೆ ವಹಿಸುತ್ತಿರುವ ದೃಶ್ಯಗಳು ಕಂಡು ಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...