Monday, August 24, 2026
Monday, August 24, 2026

ಪೂಂಛ್ ಜಿಲ್ಲೆಯಲ್ಲಿ ಉಗ್ರರ ಅಡಗುದಾಣ ಪತ್ತೆ

Date:

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ಹಳ್ಳಿಯೊಂದರಲ್ಲಿ ಭದ್ರತಾ ಪಡೆಗಳು ಉಗ್ರರ ಅಡಗುತಾಣವನ್ನು ಭೇದಿಸಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೂರಕೋಟೆ ಗ್ರಾಮದಲ್ಲಿ ಸೇನೆ ಮತ್ತು ಪೊಲೀಸರು ನಡೆಸಿದ ಜಂಟಿ ಶೋಧ ಕಾರ್ಯಾಚರಣೆಯಲ್ಲಿ ಅಡಗುತಾಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎರಡು ಮ್ಯಾಗಜೀನ್ ನೊಂದಿಗೆ ಎರಡು ಎಕೆ-47 ರೈಫಲ್ಸ್ ಗಳು, 63 ಗುಂಡು ಸುತ್ತುಗಳು, ಹ್ಯಾಂಡ್ ಗ್ರೀಪ್ ನೊಂದಿಗೆ ಒಂದು 223 ಬೋರ್ ಎಕೆ ಮಾದರಿಯ ಗನ್, ಅದರು ಎರಡು ಮ್ಯಾಗಜಿನ್ ಗಳು ಮತ್ತು 20 ಗುಂಡು ಸುತ್ತುಗಳು ಮತ್ತು ಮ್ಯಾಗಜಿನ್ ನೊಂದಿಗೆ ಚೀನಾದ ಪಿಸ್ತೂಲ್ ವೊಂದನ್ನು ಅಡಗುತಾಣದಿಂದ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಯಾರನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...