Wednesday, July 8, 2026
Wednesday, July 8, 2026

ರಾಜ್ಯದಲ್ಲಿ ನವೋದ್ಯಮಿಗಳಿಗೆ ಉತ್ತೇಜನವಿದೆ- ಅಶ್ವತ್ಥನಾರಾಯಣ

Date:

ರಾಜಧಾನಿಯಲ್ಲಿ ಮೂಲಸೌಕರ್ಯ ವಿಚಾರದಲ್ಲಿ ಚಿಕ್ಕಪುಟ್ಟ ನ್ಯೂನತೆ ಇರಬಹುದು. ಇದನ್ನು ಉದ್ಯಮಿಗಳು ಸರಕಾರದ ಗಮನಕ್ಕೆ ತರುವ ಕೆಲಸ ಮಾಡಲಿ. ಅದನ್ನು ಬಿಟ್ಟು ಬೆದರಿಕೆ ಹಾಕುವ ಮಟ್ಟಕ್ಕೆ ಹೋಗಬಾರದು ಎಂದು ಐಟಿ ಮತ್ತು ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸ್ಟಾರ್ಟಪ್ ಸೇರಿದಂತೆ ಯಾವುದೇ ಉದ್ದಿಮೆಗಳಿಗೆ ಬೆಂಗಳೂರಿನಲ್ಲಿ ಇರುವಂತಹ ಮೂಲಸೌಕರ್ಯ ಜಾಗತಿಕ ಮಟ್ಟದಲ್ಲಿ ಎಲ್ಲಿಯೂ ಇಲ್ಲ. ಹೀಗಾಗಿಯೇ ಬೆಂಗಳೂರು ದೇಶದ ಸ್ಟಾರ್ಟಪ್ ರಾಜಧಾನಿ ಎನಿಸಿ ಕೊಂಡಿದೆ ಎಂದರು.

ನವೋದ್ಯಮಿಯೊಬ್ಬರು ಬೆಂಗಳೂರಿನಲ್ಲಿ ಮೂಲಸೌಕರ್ಯ ಕೊರತೆ ಇದೆ ಎಂದು ಟ್ವೀಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರು ಹೀಗೆಂದಿದ್ದಾರೆ. ಉದ್ಯಮಿಗಳಿಗೆ ಸರಕಾರವು ಯಥೇಚ್ಛ ಅನುಕೂಲಗಳನ್ನು ಒದಗಿಸುತ್ತಿದೆ. ಉದ್ಯಮಿಗಳಿಗೆ ಕೂಡ ಮೊದಲು ನಾವು ಭಾರತೀಯರು ಎನ್ನುವ ಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಮಾಡಿರುವ ಭ್ರಷ್ಟಾಚಾರ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಸಚಿವರು, ‘ಕೆಂಪಣ್ಣನವರು ಎಷ್ಟು ವರ್ಷಗಳಿಂದ ಗುತ್ತಿಗೆದಾರರಾಗಿದ್ದಾರೆ ಎನ್ನುವುದು ನನಗೆ ಗೊತ್ತು. ಇಷ್ಟು ವರ್ಷ ಸುಮ್ಮನಿದ್ದ ಅವರು ಈಗಷ್ಟೇ ಮಾತನಾಡುತ್ತಿದ್ದಾರೆ ಅಂದರೆ ಏನರ್ಥ? ಇವರ ಹಿಂದೆ ಯಾರೆಲ್ಲ ಇದ್ದಾರೆ ಎನ್ನುವುದನ್ನು ಯಾರಬೇಕಾದರೂ ಊಹಿಸಬಹುದು’ ಎಂದರು.

‘ಸಮಾಜದಲ್ಲಿ ಭ್ರಷ್ಟಾಚಾರ ಇಲ್ಲವೇ ಇಲ್ಲ ಎನ್ನಲಾರೆ. ಆದರೆ ಇದು 70 ವರ್ಷ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷ ಹುಟ್ಟು ಹಾಕಿದ ರೋಗಗ್ರಸ್ತ ಸಂಸ್ಕೃತಿ. ಇದು ಹೆಮ್ಮರವಾಗಿ ಬೆಳೆದಿದೆ. ಇದನ್ನು ಕಿತ್ತು ಹಾಕಲೆಂದೇ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವವನ್ನು ತರಲಾಗುತ್ತಿದೆ ಎಂದು ಅವರು ನುಡಿದರು.

ಭ್ರಷ್ಟಾಚಾರವನ್ನು ಹತ್ತಿಕ್ಕಲೆಂದೇ ಡಿಜಿಟಲ್ ವ್ಯವಹಾರ ವ್ಯವಸ್ಥೆ ತರಲಾಗುತ್ತಿದೆ. ಕಳೆದ ಏಳೆಂಟು ವರ್ಷಗಳಲ್ಲಿ ಸಾಕಷ್ಟು ಸುಧಾರಣೆ ಆಗಿದೆ. ಕಾಂಗ್ರೆಸ್ ಪಕ್ಷಕ್ಕೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಕನಿಷ್ಠ ನೈತಿಕತೆಯೂ ಇಲ್ಲ. ಹೀಗಾಗಿಯೇ ಜನರು ಆ ಪಕ್ಷವನ್ನು ಮೂಲೆಗೆ ತಳ್ಳಿದ್ದಾರೆ ಎಂದು ಅಶ್ವತ್ಥ ನಾರಾಯಣ ಪ್ರತಿಪಾದಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...