Sunday, October 11, 2026
Sunday, October 11, 2026

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಮುಸ್ಲೀಮರು ಈ ಬಗ್ಗೆ ಚಿಂತಿಸಲಿ- ಈಶ್ವರಪ್ಪ

Date:

ರಾಜ್ಯದ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ ವಿಚಾರದ ಕುರಿತಂತೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಮಸೀದಿಯೊಳಗೆ ಶಬ್ದ ಕೇಳುವಂತೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಎಲ್ಲರೂ ಧ್ವನಿವರ್ಧಕ ಬಳಸುತ್ತಾ ಹೋದರೆ ಧರ್ಮಗಳ ನಡುವೆ ಸಂಘರ್ಷಕ್ಕೆ ಕಾರಣವಾಗುತ್ತದೆ. ಮಂದಿರ, ಮಸೀದಿ, ಚರ್ಚ್‌ಗಳಲ್ಲಿ ಜೋರಾಗಿ ಧ್ವನಿವರ್ಧಕ ಹಾಕಿದ್ರೆ ವಿದ್ಯಾರ್ಥಿಗಳು ಓದಿಕೊಳ್ಳುವುದಕ್ಕೂ ಸಮಸ್ಯೆಯಾಗುತ್ತದೆ. ಹೀಗಾಗಿ ಮುಸ್ಲಿಮರು ಈ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದು ಹೇಳಿದರು.

ಮುಂಚೆಯಿಂದಲೂ ಬಂದಂತಹ‌ ಪದ್ಧತಿಯ ಮೂಲಕ ದೇವರ ಪ್ರಾರ್ಥನೆ ಮಾಡುತ್ತೇವೆ ಎನ್ನುವುದು ಮುಸ್ಲಿಮರ ವಾದ. ಅವರು ಮಸೀದಿಗಳಲ್ಲಿ ಜೋರಾಗಿ ಕೂಗ್ತಾರೆ, ಅದಕ್ಕೆ ಹನುಮಾನ್ ಚಾಲೀಸ ಮೈಕಿನಲ್ಲಿ ಹಾಕ್ಬೇಕು ಅಂತಾ ನಾವು ಸ್ಪರ್ಧೆ ಮಾಡಬಾರದು. ಮುಸ್ಲಿಂ ಸಮುದಾಯದ ಮುಖಂಡರು ಈ ಬಗ್ಗೆ ಚಿಂತನೆ ಮಾಡಿ ನಿರ್ಧರಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...