Tuesday, February 24, 2026
Tuesday, February 24, 2026

ಉಕ್ರೇನ್ ರಷ್ಯ ಬಿಕ್ಕಟ್ಟು ಭಾರತ ಮಧ್ಯಸ್ಥಿಕೆ ವಹಿಸಿದರೆ ರಷ್ಯ ಬೆಂಬಲಿಸುತ್ತದೆ

Date:

ರಷ್ಯಾ ಉಕ್ರೇನ್‌ ನಡುವೆ ಬಿಕ್ಕಟ್ಟು ಪರಿಹಾರಕ್ಕೆ ಯಾವುದೇ ರೀತಿಯಲ್ಲಿ ಮಧ್ಯಸ್ಥಿಕೆ ವಹಿಸಲು ಭಾರತ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ವಿದೇಶಾಂಗ ಸಚಿವ ಸೆರ್ಗೇಯ್‌ ಲಾವ್ರೊವ್‌ ಅವರಿಗೆ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಉಕ್ರೇನ್‌ ಮೇಲಿನ ಯುದ್ಧವನ್ನು ಕೂಡಲೇ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ್ದ ಲಾವ್ರೊವ್‌, ಭಾರತವು ಸಮಸ್ಯೆಗೆ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಮಧ್ಯಸ್ಥಿಕೆ ವಹಿಸಲು ಇಚ್ಛಿಸಿದರೆ, ಅಂತಾರಾಷ್ಟ್ರೀಯ ಸಮಸ್ಯೆಗಳಿಗೆ ನ್ಯಾಯಸಮ್ಮತವಾದ ಹಾಗೂ ತರ್ಕಬದ್ಧವಾದ ವಿಧಾನದ ಮೂಲಕ ಪರಿಹಾರ ನೀಡುವುದಾದರೆ ಮಧ್ಯಸ್ಥಿಕೆ ವಹಿಸುವುದನ್ನು ರಷ್ಯಾ ಬೆಂಬಲಿಸುತ್ತದೆ ಎಂದು ಹೇಳಿದ್ದಾರೆ.

ರಷ್ಯಾ ಪಡೆಗಳು ಚೆರ್ನೋಬಿಲ್‌ ಪರಮಾಣು ಸ್ಥಾವರದಿಂದ ನಿರ್ಗಮಿಸುತ್ತಿವೆ ಮತ್ತು ಉಕ್ರೇನಿನ ಗಡಿ ಬೆಲಾರಸ್‌ ಕಡೆಗೆ ತೆರಳುತ್ತಿವೆ ಎಂದು ಉಕ್ರೇನ್‌ ಪರಮಾಣು ಘಟಕ ಕಂಪನಿಯ ಕಾರ‍್ಯನಿರ್ವಹಣಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲ್ಲದೆ ನ್ಯೂಕ್ಲಿಯರ್‌ ಘಟಕದ ಕಾರ್ಮಿಕರು ನೆಲೆಸಿರುವ ಸ್ಲಾವುಟಿಚ್‌ ನಗರದಿಂದಲೂ ರಷ್ಯಾ ಸೇನೆ ನಿರ್ಗಮನಕ್ಕೆ ಸಿದ್ಧತೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಚೆರ್ನೋಬಿಲ ಸ್ಥಾವರದ ಸುತ್ತಲಿನ 10 ಚ. ಕಿ.ಮೀ ಪ್ರದೇಶದ ಕೆಂಪು ಅರಣ್ಯದಲ್ಲಿ ರಷ್ಯನ್ನರು ಕಂದಕಗಳನ್ನು ಅಗೆದಿದ್ದಾರೆ ಎಂದು ವರದಿಗಳು ದೃಢಪಡಿಸಿವೆ. ವಿಕಿರಣ ಸೋರಿಕೆಯಿಂದ ರಷ್ಯಾ ಸೈನಿಕರಲ್ಲಿ ಅನಾರೋಗ್ಯ ಕಾಣಿಸಿಕೊಂಡಿದೆ. ಆದ್ದರಿಂದ ಗಾಬರಿಗೊಂಡು ಸ್ಥಳದಿಂದ ನಿರ್ಗಮಿಸಲು ನಿರ್ಧರಿಸಿವೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Akashvani Bhadravati ಶಿವಮೊಗ್ಗಕ್ಕೆ 10 ಕಿ,ವ್ಯಾ. ಶಕ್ತಿಯ ಎಫ್.ಎಂ.ಆಕಾಶವಾಣಿ ಕೇಂದ್ರ. ಫೆ. 26 ರಂದು ಲೋಕಾರ್ಪಣೆ

Akashvani Bhadravati 1965ರ ಫೆಬ್ರವರಿ 7ರಂದು ಆರಂಭವಾದ ಆಕಾಶವಾಣಿ ಭದ್ರಾವತಿ...

Department of Tourism ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...

Gramabharati Trust ಮಾತೃಭೂಮಿಯನ್ನ ದೇವತೆಯಂತೆ ಆರಾಧಿಸುವ ಅರ್ಥ “ವಂದೇ ಮಾತರಂ” ಗೀತೆಯಲ್ಲಿದೆ- ನ.ನಾಗರಾಜ

Gramabharati Trust ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬ್ರಿಟಿಷರ ವಿರುದ್ಧ ಪ್ರತಿರೋಧ...