ರಾಜ್ಯ ಸರ್ಕಾರವು ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಹಿಸುದ್ದಿ ನೀಡಿದೆ. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಆರಂಭವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ, ರಾಷ್ಟ್ರೀಯ ಸಂಜೀವಿನಿ ಸರಸ್ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮಹಿಳೆಯರ ಸ್ವಸಹಾಯ ಸಂಘಗಳಿಗೆ ಬಲ ತುಂಬಲು ಈ ಸಲದ ಬಜೆಟ್ ನಲ್ಲಿ 500 ಕೋಟಿ ರೂ. ಕೊಡಲಾಗಿದೆ. ಈ ಮೂಲಕ 4 ಲಕ್ಷ ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡಲಾಗುವುದು. ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಒಂದು ತಿಂಗಳಲ್ಲಿ ಅಗತ್ಯ ಆರ್ಥಿಕ ಅನುಕೂಲಗಳು ಸುಗಮವಾಗಿ ಸಿಗುವಂತೆ ಮಾಡಲು ಆಯಂಕರ್ ಬ್ಯಾಂಕ್ ನ್ನು ಪ್ರಾರಂಭಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರವು ಈ ವರ್ಷ ಮಹಿಳಾ ಕಾರ್ಯಕ್ರಮಗಳಿಗೆ 47 ಸಾವಿರ ಕೋಟಿ ರೂ. ಮತ್ತು ಮಕ್ಕಳಿಗೆ ಸಂಬಂಧಿಸಿದ ನಾನಾ ಯೋಜನೆಗಳಿಗೆ 43 ಸಾವಿರ ಕೋಟಿ ರೂ.ಗಳಷ್ಟು ಅಗಾಧ ಮೊತ್ತವನ್ನು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ. ಇವೆಲ್ಲವುಗಳ ಅನುಷ್ಠಾನದ ಸಂಬಂಧ ಇನ್ನು ಒಂದು ವಾರದಲ್ಲಿ ಸೂಕ್ತ ಆದೇಶಗಳನ್ನು ಹೊರಡಿಸಲಾಗುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.