ಎಲ್ಲಾ ಸರ್ಕಾರಿ ಯೋಜನೆಗಳಲ್ಲಿ ಫೋರ್ಟಿಫೈಡ್ ಅಕ್ಕಿಯನ್ನ ವಿತರಿಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಸಾರ್ವಜನಿಕ ವಿತರಣಾ ವ್ಯವಸ್ಥೆ ಹಾಗೂ ಇತರ ಯೋಜನೆಗಳ ಅಡಿಯಲ್ಲಿ ಪೌಷ್ಠಿಕ ಅಕ್ಕಿ ವಿತರಣೆಯನ್ನ ಮೂರು ಹಂತಗಳಲ್ಲಿ ಜಾರಿಗೆ ತರಲಾಗುತ್ತದೆ.
ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ
ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ತಿಳಿಸಿದ್ದಾರೆ.
ಭಾರತೀಯ ಆಹಾರ ನಿಗಮ ಮತ್ತು ರಾಜ್ಯ ಸಂಸ್ಥೆಗಳು ಈ ನಿಟ್ಟಿನಲ್ಲಿ ಪೂರೈಕೆ ಮತ್ತು ವಿತರಣೆಗಾಗಿ ಹೆಚ್ಚುವರಿಯಾಗಿ 88.65 ಲಕ್ಷ ಟನ್ ಹೆಚ್ಚುವರಿ ಪೌಷ್ಠಿಕ ಅಕ್ಕಿಯನ್ನು ಈ ಹಿಂದೆ ಸಂಗ್ರಹಿಸಿವೆ ಎಂದು ಅವರು ಮಾಹಿತಿ ತಿಳಿಸಿದ್ದಾರೆ.
ಇದನ್ನು ಉದ್ದೇಶಿತ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಜಾರಿಗೆ ತರಲಾಗುತ್ತದೆ ಎಂದು ಅನುರಾಗ್ ಠಾಕೂರ್ ಅವರು ಹೇಳಿದ್ದಾರೆ.
ಇದನ್ನು 2024ರ ಸಮಯಕ್ಕೆ ಹಂತ ಹಂತವಾಗಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ತರಲಾಗುತ್ತದೆ. ಈ ಯೋಜನೆಗೆ ವಾರ್ಷಿಕ 2,700 ಕೋಟಿ ರೂ.ವೆಚ್ಚವಾಗಲಿದೆ. ಇದನ್ನು ಕೇಂದ್ರ ಸರ್ಕಾರ ಭರಿಸಲಿದೆ ಎಂದು ಅನುರಾಗ್ ಠಾಕೂರ್ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.