ರಾಜ್ಯದ ಮೀನುಗಾರ ಸಮುದಾಯದವರಿಗೂ ವಿದ್ಯಾ ಸಿರಿ ಯೋಜನೆ ವಿಸ್ತರಿಸುವುದರ ಜೊತೆಗೆ ಹೊಸದಾಗಿ ಮತ್ಸ್ಯ ಸಿರಿ ಯೋಜನೆಯನ್ನು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.
ಕಾಪು ತಾಲೂಕು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬ್ರಹ್ಮಕಲಶ ಪುಣ್ಯೋತ್ಸವದ ಸಭೆಯಲ್ಲಿ ನಿನ್ನೆ ಭಾಗವಹಿಸಿ ಅವರು ಮಾತನಾಡಿದರು.
ಪ್ರಸ್ತುತ ರೈತರ ಮಕ್ಕಳಿಗೆ 8 ನೇ ತರಗತಿಯಿಂದ ಸ್ನಾತಕೋತ್ತರ ಶಿಕ್ಷಣವರೆಗೆ ಈ ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಇನ್ನು ಮುಂದೆ ಮೀನುಗಾರರು ಹಾಗೂ ನೇಕಾರರ ಮಕ್ಕಳಿಗೂ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಅವರು ಹೇಳಿದ್ದಾರೆ.
ಮೀನುಗಾರಿಕೆಯಲ್ಲಿ ಆಧುನಿಕ ತಂತ್ರಜ್ಞಾನ ಪ್ರೋತ್ಸಾಹಿಸುವ ಉದ್ದೇಶದಿಂದ ತಲಾ 1.50 ಕೋಟಿ ರೂಪಾಯಿ ಮೌಲ್ಯದ 100 ಹೈ ಸ್ಪೀಡ್ ಮೀನುಗಾರಿಕಾ ಬೋಟ್‌ಗಳನ್ನು ಕರಾವಳಿಯ ಮೂರು ಜಿಲ್ಲೆಯ ಮೀನುಗಾರರಿಗೆ ನೀಡುವ ಮತ್ಸ್ಯಸಿರಿ ಯೋಜನೆಯನ್ನು ಈ ಸಾಲಿನಿಂದಲೇ ಜಾರಿಗೊಳಿಸಲಾಗುತ್ತಿದೆ. ಇದರಲ್ಲಿ ಶೇ. 40 ಕೇಂದ್ರ ಸರ್ಕಾರ, ಶೇ. 10 ಫಲಾನುಭವಿಗಳು ಮತ್ತು ಉಳಿದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಪ್ರಕಟಿಸಿದ್ದಾರೆ.