Tuesday, March 24, 2026
Tuesday, March 24, 2026

ಜನತಾ ಜಲಧಾರೆ ಮೇಕೆದಾಟು ಪಾದಯಾತ್ರೆಯ ರೀತಿ ಶೋ ಯಾತ್ರೆಯಲ್ಲ -ಎಚ್. ಡಿ.ಕೆ.

Date:

ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡುವುದಿಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜನತಾ ಜಲಧಾರೆ ಯಾತ್ರೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ -ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಮೌನ ವಿಚಾರವಾಗಿ ಪ್ರತಿಕ್ರಿಯಿಸಿ, ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ.? ರಾಯಚೂರಿನಲ್ಲಿ ತಲವಾರ್ ಹಂಚಿದ್ದಾರೆ. ಯಾವ ಕಾರಣಕ್ಕೆ ತಲವಾರ್ ಹಂಚಿದ್ದಾರೆ? ಅವರ‌ನ್ನು ನೀವು ಅರೆಸ್ಟ್ ಮಾಡಿದ್ದೀರಾ? ಮೌನಿ‌ ಬಸವರಾಜ ಬೊಮ್ಮಾಯಿ ಅವರೇ ಎಂದು ಕಿಡಿಕಾರಿದರು.

ಈ ಬಾರಿ ಜೆಡಿಎಸ್‌ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡಲಾಗುವುದು ಎಂದರು.

ರಾಯಚೂರಿನಲ್ಲಿ ಲವ್ ಕೇಸರಿ ವಿಚಾರವಾಗಿ ಮಾತನಾಡಿ, ಯಾವುದೇ ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ. ಪರಸ್ಪರ ಪ್ರೀತಿಸುವವರಿಗೆ ತೊಂದರೆ ಕೊಡಬಾರದು. ಅವರು ಯಾವ ಧರ್ಮದವರೇ ಆಗಿರಲಿ. ಅವರನ್ನು ನಿಯಂತ್ರಿಸುವ ಕೆಲಸ ಮಾಡಬಾರದು ಎಂದರು.

ಜನತಾ ಜಲಧಾರೆ ಯಾತ್ರೆ ವಿಚಾರವಾಗಿ ಮಾತನಾಡಿ, ಇದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಎಂದು ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಎಂದರು.

ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರಿಗೆ ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ. ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ, ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಯೋಜನೆಗಳು-ಬ್ಯಾಂಕಿಂಗ್ ಸೇವೆಗಳನ್ನು ಜನಸಾಮಾನ್ಯರಿಗೆ ತಲುಪಿಸಬೇಕು : ಬಿ.ವೈ.ರಾಘವೇಂದ್ರ

B.Y. Raghavendra ಪ್ರತಿಯೊಬ್ಬ ನಾಗರೀಕರಿಗೆ ಆರ್ಥಿಕ ಸಬಲೀಕರಣ ನೀಡಬೇಕೆಂಬ ಉದ್ದೇಶದಿಂದ ಅನುಷ್ಟಾನಗೊಳಿಸಲಾಗಿರುವ...

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...