ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆಗೆ ಸಂಬಂಧಿಸಿದಂತೆ, ಸಚಿವ ಕೆ.ಎಸ್. ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ಕೊಡಲು ನಿರ್ಧರಿಸಿದ್ದಾರೆಯೇ ಹೊರತು, ಯಾವುದೇ ಒತ್ತಡದಿಂದಲ್ಲ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರಷ್ಟೇ ಈಶ್ವರಪ್ಪ ಅವರನ್ನು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹುಬ್ಬಳ್ಳಿ ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಿಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈಶ್ವರಪ್ಪ ಅವರೊಂದಿಗೆ ಮಾತನಾಡಿದ್ದೇನೆ. ತಾವು ನಿರಪರಾಧಿಯಾಗಿದ್ದು, ಆದಷ್ಟು ಬೇಗ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದಿದ್ದಾರೆ.
ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿದಾಗ ಸತ್ಯಾಂಶ ಹೊರಬರಲಿದೆ ಎಂದರು.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ. ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಜಾರ್ಜ್ ವಿರುದ್ಧವೂ ಪೊಲೀಸ್ ಅಧಿಕಾರಿ ಆರೋಪ ಆತ್ಮಹತ್ಯೆ ಮಾಡಿಕೊಂಡಿದ್ದರು. ಆಗ ರಾಜ್ಯದ ಪೊಲೀಸರಾಗಲಿ ಅಥವಾ ಸಿಬಿಐನವರಾಗಲಿ ಜಾರ್ಜ್ ಅವರನ್ನು ಬಂಧಿಸಿರಲಿಲ್ಲ. ತನಿಖೆ ಆಧರಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕೇ ಬೇಡವೇ ಎಂಬುದನ್ನು ಪೊಲೀಸರು ನಿರ್ಧರಿಸಲಿದ್ದಾರೆ.
ಈ ವಿಷಯದಲ್ಲಿ ಕಾಂಗ್ರೆಸ್ ನವರು ತನಿಖಾಧಿಕಾರಿ ಆಥವಾ ಜಡ್ಜ್ ಆಗುವ ಅವಶ್ಯಕತೆ ಇಲ್ಲ. ತನಿಖೆಗೆ ಮುಕ್ತ ಅವಕಾಶ ನೀಡಬೇಕು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.