Thursday, March 26, 2026
Thursday, March 26, 2026

ಟಾಟಾ ಐಪಿಎಲ್22 ಗೆಲುವಿನ ಲಯದತ್ತ ಆರ್ ಸಿ ಬಿ

Date:

ದಿನೇಶ್ ಕಾರ್ತಿಕ್ ಮತ್ತು ಗ್ಲೆನ್ ಮ್ಯಾಕ್ಸ್ವೆಲ್ ಅವರ ಸ್ಫೋಟಕ ಅರ್ಧಶತಕ ಮತ್ತು ಹೇಜಲ್ ಹುಡ್ ಅವರ ಪರಿಣಾಮಕಾರಿ ಬೌಲಿಂಗ್ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಐಪಿಎಲ್ 15ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ 16 ರನ್ ಗಳಿಂದ ಜಯಗಳಿಸಿ ಕೊಂಡಿದೆ. ಇದರ ಜೊತೆಗೆ ಟೂರ್ನಿಯಲ್ಲಿ 4ರ ಜಯ ದಾಖಲಿಸಿದ ಆರ್ ಸಿಬಿ 38 ಅಂಕ ಕಲೆ ಹಾಕಿದೆ.

ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಗೆ ಆಹ್ವಾನ ಪಡೆದ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 189 ರನ್ ಕಲೆ ಹಾಕಿದೆ. ನಂತರ ಗುರಿ ಬೆನ್ನತ್ತಿದ್ದ ಡೆಲ್ಲಿ, ಡೇವಿಡ್ ವಾರ್ನರ್ ಅವರ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ 20 ಓವರ್ಗಳಲ್ಲಿ 7 ವಿಕೆಟ್ಗೆ 123 ರನ್ ಗಳಿಸಲಷ್ಟೇ ಶಕ್ತವಾಯಿತು. ಜಯದ ಹಾದಿಗೆ ಉತ್ಸಾಹದಲ್ಲಿದ್ದ ಆರ್ ಸಿಬಿ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ಅನುಜ್ ರಾವತ್ ತಂಡಕ್ಕೆ ಉತ್ತಮ ಅಡಿಪಾಯ ಹಾಕುವಲ್ಲಿ ವಿಫಲರಾದರು. ಕೇವಲ 13 ರನ್ಗಳಿಗೆ ಇವರಿಬ್ಬರನ್ನು ಕಳೆದುಕೊಂಡ ಬೆಂಗಳೂರು ತಂಡ, ಆರಂಭಿಕ ಆಘಾತ ಅನುಭವಿಸಿತು.

ನಂತರ ವಿರಾಟ್ ಕೊಹ್ಲಿ ಹಾಗೂ ಮ್ಯಾಕ್ಸ್ವೆಲ್ ತಂಡಕ್ಕೆ ಆಸರೆಯಾಗುವ ಯತ್ನಿಸುತ್ತಿರುವಾಗಲೇ ಲಲಿತ್ ಯಾದವ್ ಅವರಿಂದ ರನ್ ಔಟ್ ಆದ ವಿರಾಟ್ ಕೊಹ್ಲಿ ಪೆವಿಲಿಯನ್ ಗೆ ಹೆಜ್ಜೆ ಹಾಕಿದರು.

ಸುಯಶ್ ಸಹ ಹೆಚ್ಚು ಹೊತ್ತು ನಿಲ್ಲಲಿಲ್ಲ. ಆದ್ದರಿಂದ 75ಕ್ಕೆ ನಾಲ್ಕು ವಿಕೆಟ್ ಕಳೆದುಕೊಂಡ ರಾಯಲ್ ಚಾಲೆಂಜರ್ಸ್ ತಂಡ ಸಾಧಾರಣ ಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ತಮ್ಮ ತೋಳು ಸಡಿಲಿಸಿದ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟರ್ ಗ್ಲೆನ್ ಮ್ಯಾಕ್ಸ್ವೆಲ್ ಬಿರುಸಿನ ಹೊಡೆತಗಳ ಮೂಲಕ ಕ್ಷಣಾರ್ಧದಲ್ಲಿ ಅರ್ಧಶತಕ ಗಳಿಸಿ ಚೈನಾ ಮನ್ ಬೌಲರ್ ಕುಲದೀಪ್ ಯಾದವ್ ಗೆ ವಿಕೆಟ್ ಒಪ್ಪಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...