Monday, August 24, 2026
Monday, August 24, 2026

ಟ್ವಿಟರ್ ಗಳ ಮೂಲಕ ಕುಟುಕಾಡುತ್ತಿರುವ ಮಾಜಿ ಸಿಎಂ ಗಳು

Date:

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಅವರ ನಡುವಿನ ಮಾತಿನ ಸಮರ ಮುಂದುವರಿದಿದೆ.
ಇದೀಗ ಸಿದ್ದರಾಮಯ್ಯ ವಿರುದ್ಧ ಮತ್ತೆ ಟ್ವೀಟ್ ಮೂಲಕ ಪ್ರಶ್ನೆಗಳ ಸಮರ ಮುಂದುವರಿಸಿರುವ ಕುಮಾರಸ್ವಾಮಿ ಅವರು, ಪರ್ಸಂಟೇಜ್ ಪಿತಾಮಹ, ಅನೈತಿಕ ರಾಜಕಾರಣದ ಅಸಲಿ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕೆ ಅವರು, ಆಪರೇಷನ್ ಕಮಲವೆಂಬ ಅನೈತಿಕ ಕೂಸಿನ ಬೇನಾಮಿ ಅಪ್ಪ, ಆ ಪಾಪಕ್ಕೆ ಪ್ರತಿಯಾಗಿ ಪಡೆದ ಫಲದ ಬಗ್ಗೆ ಪಲಾಯನವೇಕೆ ಸುಳ್ಳುರಾಮಯ್ಯ? ಕಳ್ಳಮಾಲು ಹ್ಯೂಬ್ಲೆಟ್ ವಾಚಿನ ಬಗ್ಗೆ ವಾಕರಿಕೆ ಬರುವಷ್ಟು ಹೇಸಿಗೆ ಕಥೆಗಳೇ ಇವೆ. ಇವೆರಡೂ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ, ಯಾಕಯ್ಯಾ? ಈಶ್ವರಪ್ಪ ಬಗ್ಗೆ ಮಾತನಾಡಿ, ಅಭ್ಯಂತರವಿಲ್ಲ. ಡಿವೈಎಸ್ಪಿ ಗಣಪತಿ ಬಗ್ಗೆಯೂ ಹೇಳಿ, ಬೇಜಾರಿಲ್ಲ. ಆದರೆ, ಕಲ್ಲಪ್ಪ ಹಂಡೀಭಾಗ್ ಬಗ್ಗೆ ಮಾತನಾಡಿದರೆ ನಿಮ್ಮ ಜಾಣ ಮೌನವೇಕೆ? ಆ ಪಾಪಕ್ಕೆ ಪ್ರಾಯಶ್ಚಿತ್ತ ಅನುಭವಿಸದೇ ವಿಧಿಯೇ ಇಲ್ಲ. ಪ್ರಾಮಾಣಿಕ ಅಧಿಕಾರಿಯ ದುರಂತ ಅಂತ್ಯ ನಿಮ್ಮನ್ನು ಸುಮ್ಮನೆ ಬಿಡಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಜೆಡಿಎಸ್ ಬಗ್ಗೆ ಸುಳ್ಳು ಹೇಳಿದ್ದೀರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ನಿಮ್ಮ ಐದು ವರ್ಷಗಳ ದುರಾಡಳಿತದಲ್ಲಿ ಆ ಜಿಲ್ಲೆಯೊಂದರಲ್ಲೇ 200 ರೈತರು ಆತ್ಮಹತ್ಯೆಗೆ ಶರಣಾದರು. ಮೈಷುಗರ್ ಕಾರ್ಖಾನೆ ಮುಚ್ಚಿಸಿ ಕಬ್ಬು ಬೆಳೆಗಾರರ ಮನೆ ಹಾಳು ಮಾಡಿದಿರಿ. ಮರೆತುಬಿಟ್ಟಿರಾ ಸುಳ್ಳುರಾಮಯ್ಯ? ಮಂಡ್ಯದಲ್ಲಿ ಏಳೂ ಸೀಟು ಸಿಗಲಿಲ್ಲ ಎಂದು ಜನರ ಮುಂದೆ ಹಲುಬುತ್ತೀರಿ. 200 ಅನ್ನದಾತರ ಜೀವಕ್ಕೆ ಎರವಾಗಿ, ಇಡೀ ಜಿಲ್ಲೆಯಲ್ಲಿ ಮರಣಮೃದಂಗ ಭಾರಿಸಿದ ನಿಮ್ಮ ರೈತವಿರೋಧಿ ನೀತಿಗಳು ಕಸಿದ ಜೀವಗಳ ಲೆಕ್ಕವೆಲ್ಲಾ ಚುಕ್ತಾ ಆಗುವ ಕಾಲ ಬಂದಿದೆ. ಜೀವ ತೆಗೆಯುವ ಜವರಾಯನ ಅವತಾರವೇ ನೀವಾಗಿರುವಾಗ ನಮ್ಮ ಕಣ್ಣೀರನ್ನು ಹಂಗಿಸುತ್ತೀರಿ ಎಂದು ಟೀಕೆ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...