Thursday, October 15, 2026
Thursday, October 15, 2026

ಕಲ್ಲಿದ್ದಲು ಕೊರತೆಯಿಲ್ಲ, ಪೂರೈಕೆಯಲ್ಲಿ ತಡ-ಸಚಿವ ಜೋಷಿ

Date:

ದೇಶಾದ್ಯಂತ ಬೇಸಿಗೆ ತಾಪ ಏರುತ್ತಿರುವ ಬೆನ್ನಲ್ಲೇ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದೆ. ಈ ನಡುವೆ, ಉಷ್ಣ ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕೊರತೆ ಗೋಚರಿಸಿದೆ. ಹೀಗಾಗಿ ಕೆಲವು ರಾಜ್ಯಗಳಲ್ಲಿ ಪವರ್ ಕಟ್ ಶುರುವಾಗಿದೆ.

ಸೆಂಟ್ರಲ್ ಇಲೆಕ್ಟ್ರಿಸಿಟಿ ಅಥಾರಿಟಿ ಆಫ್ ಇಂಡಿಯಾದ ಇತ್ತೀಚಿನ ಕಲ್ಲಿದ್ದಲು ದೈನಿಕ ವರದಿ ಪ್ರಕಾರ, ದೇಶದ 150 ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ ಸ್ಥಳೀಯ ಕಲ್ಲಿದ್ದಲು ಬಳಸುವ 81 ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಗಂಭೀರ ಸ್ಥಿತಿಯಲ್ಲಿದೆ ಎನ್ನಲಾಗುತ್ತಿದೆ.

ಇದೇ ರೀತಿ, 54 ಖಾಸಗಿ ಉಷ್ಣ ವಿದ್ಯುತ್ ಸ್ಥಾವರಗಳ ಪೈಕಿ 28ರಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ತಿಳಿದುಬಂದಿದೆ.

ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಕಲ್ಲಿದ್ದಲು ಕೊರತೆ ವಿಚಾರವಾಗಿ ಕೇಂದ್ರ ಸರ್ಕಾರ ಕಳವಳ ತೋಡಿಕೊಂಡಿದೆ. ಇತ್ತೀಚೆಗೆ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಕೋಲ್ ಇಂಡಿಯಾ ಲಿಮಿಟೆಡ್ (ಸಿಐಎಲ್)ನಲ್ಲಿ 72.5 ದಶಲಕ್ಷ ಟನ್ ಕಲ್ಲಿದ್ದಲು ದಾಸ್ತಾನಿದೆ. ಆದಾಗ್ಯೂ, ಕಲ್ಲಿದ್ದಲು ಸಚಿವಾಲಯದ ಅಧಿಕಾರಿಗಳು ಕಲ್ಲಿದ್ದಲು ಕೊರತೆ ಇರುವುದನ್ನು ಅಲ್ಲಗಳೆಯಲಾಗದು ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿರುವ ವಿದ್ಯುತ್ ಸ್ಥಾವರದಲ್ಲಿ ಕೇವಲ ಏಳು ದಿನಕ್ಕೆ, ಹರಿಯಾಣದಲ್ಲಿ 8 ದಿನಕ್ಕೆ, ರಾಜಸ್ಥಾನದಲ್ಲಿ 17 ದಿನಗಳಿಗೆ ಆಗುವಷ್ಟು ಮಾತ್ರವೇ ಕಲ್ಲಿದ್ದಲು ದಾಸ್ತಾನು ಇದೆ. ನಿಯಮ ಪ್ರಕಾರ ಪ್ರತಿ ವಿದ್ಯುತ್ ಸ್ಥಾವರದಲ್ಲಿ 26 ದಿನಗಳಿಗೆ ಆಗುವಷ್ಟು ಕಲ್ಲಿದ್ದಲು ದಾಸ್ತಾನು ಇರಿಸಿಕೊಳ್ಳಬೇಕು. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಜಾರ್ಖಂಡ್, ಛತ್ತೀಸ್​ಗಢಗಳಲ್ಲಿ ಕೂಡ ಪರಿಸ್ಥಿತಿ ಚೆನ್ನಾಗಿಲ್ಲ ಎನ್ನಲಾಗುತ್ತಿದೆ.

ವಿದ್ಯುತ್ ಬೇಡಿಕೆಯು ಏಪ್ರಿಲ್ 19ಕ್ಕೆ 1,88,014 ಮೆಗಾವಾಟ್ ತಲುಪಿದೆ. ಕೊರತೆ ಪ್ರಮಾಣ ಗರಿಷ್ಠ 4,469 ಮೆಗಾವಾಟ್​ನಲ್ಲಿದೆ. ಗರಿಷ್ಠ ಬೇಡಿಕೆ 2021ರ ಜುಲೈನಲ್ಲಿ ದಾಖಲಾಗಿದ್ದು, 2,0,570 ಮೆಗಾ ವಾಟ್ ವಿದ್ಯುತ್ ಬೇಡಿಕೆ ಅಂದು ಇತ್ತು.

ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಿದ್ದರಿಂದ ಸಹಜವೇ ಕಲ್ಲಿದ್ದಲು ಬೇಡಿಕೆ ಹೆಚ್ಚಿದೆ. ಪೂರೈಕೆಯಲ್ಲಿ ತಡವಾಗುತ್ತಿದೆ ಹೊರತು, ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ಕಳೆದ ಎರಡು ವರ್ಷಕ್ಕೆ ಹೋಲಿಸಿದರೆ ಶೇ.43 ಕಲ್ಲಿದ್ದಲು ಉತ್ಪಾದನೆ ಹೆಚ್ಚಾಗಿದ್ದು, ಸುಮಾರು 21 ಮಿಲಿಯನ್ ಟನ್ ದೇಶದಲ್ಲಿ ದಾಸ್ತಾನಿದೆ. ಪ್ರತಿದಿನ 3.10 ಬಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಇದ್ದದ್ದು ಈಗ 3.40 ಬಿಲಿಯನ್ ಯೂನಿಟ್​ಗೆ ಏರಿಕೆಯಾಗಿದೆ. ಕೋಲ್ ಇಂಡಿಯಾದಲ್ಲಿ 72 ಮಿಲಿಯನ್ ಟನ್, ತೆಲಂಗಾಣದ ಸಿಂಗ್ರೇನಿಯಾ, ಕ್ಯಾಪ್ಟಲ್, ವಾಸರಿ ಹೀಗೆ ಹಲವು ಗಣಿಗಳಲ್ಲಿ ಸಾಕಷ್ಟು ಕಲ್ಲಿದ್ದಲು ಸಂಗ್ರಹವಿದೆ. ರಾಜ್ಯಕ್ಕೆ ದೂರದ ಪ್ರದೇಶದಿಂದ ಕಲ್ಲಿದ್ದಲು ಬರುವುದರಿಂದ ಸಾಗಣೆ ತಡವಾಗುತ್ತಿದೆ.

ಬೇಡಿಕೆಯಷ್ಟು ಸರಬರಾಜು ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ಕೊರತೆ ಕಾಡುವುದಕ್ಕೆ 2021-22ರಲ್ಲಿ ಆಮದು ಪ್ರಮಾಣ ಕಡಿಮೆ ಮಾಡಿರುವುದೇ ಮುಖ್ಯ ಕಾರಣ. 2022ನೇ ಹಣಕಾಸು ವರ್ಷದಲ್ಲಿ ಭಾರತ 25 ದಶಲಕ್ಷ ಟನ್ ಕಲ್ಲಿದ್ದಲನ್ನು ಮಾತ್ರ ಆಮದು ಮಾಡಿಕೊಂಡಿದೆ. ಹಿಂದಿನ ವರ್ಷದ ಆಮದು ಪ್ರಮಾಣಕ್ಕೆ ಹೋಲಿಸಿದರೆ ಇದು ಶೇಕಡ 50 ಮಾತ್ರ ಎಂದು ಅಧಿಕಾರಿಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...