ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆಡಿಎಸ್ ನಿಂದ ಹಮ್ಮಿಕೊಂಡಿದ್ದ ಜನತಾ ಜಲಧಾರೆ ರಥಯಾತ್ರೆಗೆ ಇಂದು ಚಾಲನೆ ಸಿಕ್ಕಿದೆ.
ಜನತ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಿದ ಮಾಜಿ ಸಿಎಂ ಕುಮಾರಸ್ವಾಮಿಯವರು ಶಿವಮೊಗ್ಗದಿಂದ ಕೂಡಲಿಗೆ ತೆರಳಿದರು. ಅಲ್ಲಿ ರಥವನ್ನು ನಿಲ್ಲಿಸಿ ಬಹಿರಂಗ ಸಮಾವೇಶ ನಡೆಸಲಾಯಿತು.
ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ.
ಕುಮಾರಸ್ವಾಮಿಯವರು, ಕಳೆದ ಚುನಾವಣೆಯಲ್ಲಿ ಈ ನಾಡಿನ ಜನತೆಯ ವಿಶೇಷವಾಗಿ ರೈತರ ಆತ್ಮಹತ್ಯೆ ಪ್ರಕರಣಗಳ ಮುಖಾಂತರ ನಮ್ಮ ತಾಯಂದಿರು, ಸಹೋದರಿಯರು ವಿಧವೆಯರಾದದ್ದನ್ನು ನಾವು ನೋಡಿದ್ದೇವೆ. ಅದರ ಹಿನ್ನೆಲೆಯಲ್ಲಿ 18ರ ಚುನಾವಣೆಯಲ್ಲಿ ನಾನು ಈ ನಾಡಿನ ಜನತೆಗೆ ಒಂದು ಭರವಸೆ ನೀಡಿದ್ದೆ. ಅದರಂತೆ ನಾನು ರೈತರ ಸಾಲಮನ್ನಾ ಮಾಡುವ ಕೆಲಸ ಮಾಡಿದೆ. ನಾನು ಎರಡನೆಯ ಬಾರಿ ಮುಖ್ಯಮಂತ್ರಿಯಾಗಿ ಆಯ್ಕೆಯಾದ ನಂತರ ಕೇವಲ 14 ತಿಂಗಳಿನಲ್ಲಿ 25 ಸಾವಿರ ಕೋಟಿ ರೂಪಾಯಿಗಳ ರೈತರ ಸಾಲ ಮನ್ನಾ ಮಾಡುವಲ್ಲಿ ಯಶಸ್ವಿಯಾಗಿದ್ದೆನೆ ಎಂದರು.
ಶಿವಮೊಗ್ಗದಲ್ಲಿ ಆದಂತಹ ನೀರಾವರಿ ಕಾಮಗಾರಿಗಳನ್ನು ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಎಲ್ಲಾ ನೀರಾವರಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿಸಿದ್ದೆ. ಆದರೆ ಬೇರೆ ಬೇರೆ ಬ್ಯಾನರ್ ಗಳನ್ನು ಹಾಕಿಕೊಂಡು ಹೆಸರುಗಳಿಸಿದರು ಎಂದರು.
ನಮ್ಮ ಪಕ್ಷವನ್ನ ಸ್ವತಂತ್ರವಾಗಿ ಗೆಲ್ಲಿಸಿ ಕೊಟ್ಟರೆ ಶಾರದಾಪುರ ನಾಯ್ಕ್ ಅವರನ್ನು ಸಚಿವರನ್ನಾಗಿ ಮಾಡಿ, ಶಿವಮೊಗ್ಗದ ಅಭಿವೃದ್ಧಿಯನ್ನು ಮಾಡಿಸುವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀಕಾಂತ್, ಮಾಜಿ ಗ್ರಾಮಾಂತರ ಶಾಸಕಿ ಶಾರದಾಪುರ್ಯಾ ನಾಯಕ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.