Tuesday, April 29, 2025
Tuesday, April 29, 2025

ಮಲೇರಿಯ ಜಾಗೃತಿ ವೈದ್ಯಕೀಯ ಕಾಲೇಜುಗಳಿಂದಲೂ ಆಗಬೇಕು- ಸುಧಾಕರ್

Date:

ಮನುಕುಲಕ್ಕೆ ಶಾಪವಾಗಿರುವ ಮಲೇರಿಯಾ ವಿರುದ್ಧ ಸರ್ಕಾರ ವಿವಿಧ ರೀತಿಯಲ್ಲಿ ಹೋರಾಟ ಮಾಡುತ್ತಿದೆ. ಕೇಂದ್ರ ಸರ್ಕಾರ 2030ಕ್ಕೆ ಮಲೇರಿಯಾ ಮುಕ್ತ ಭಾರತಕ್ಕೆ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ 2027ರ ಹೊತ್ತಿಗೆ ಮಲೇರಿಯಾ ನಿರ್ಮೂಲನೆ ಆಗಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಕರೆ ಕೊಟ್ಟಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿರುವ ಪಿಎಂಎಸ್ ಎಸ್ ವೈ ಆಸ್ಪತ್ರೆ ವಿಶ್ವ ಮಲೇರಿಯಾ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲೇರಿಯಾ ವಿರುದ್ಧ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಜೊತೆಯಾಗಿ ಶ್ರಮ ಪಟ್ಟರೆ ಆರೋಗ್ಯಯುಕ್ತ ಕರ್ನಾಟಕದ ಕನಸು ನನಸಾಗಬಹುದು ಎಂದು ಹೇಳಿದರು.

ಏಪ್ರಿಲ್ 25ನ್ನು ವಿಶ್ವ ಮಲೇರಿಯಾ ದಿನವನ್ನಾಗಿ ಆಚರಿಸಲಾಗುತ್ತಿದೆ. ಸಾರ್ವಜನಿಕರಲ್ಲಿ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ಜಾಥಾಗಳ ಮೂಲಕ ನಡೆಯುತ್ತಿದೆ. ಪ್ರತಿಯೊಂದು ತಾಲೂಕುಗಳಲ್ಲೂ ಮಲೇರಿಯಾ ಬಗ್ಗೆ ಅರಿವು ಮೂಡಿಸುವ ಕಾರ್ಯ ವಿಭಿನ್ನವಾಗಿ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಸ್ವಚ್ಛತೆಯ ಮಹತ್ವನ್ನು ಸಾರ್ವಜನಿಕರಿಗೆ ತಿಳಿಸುತ್ತಿದ್ದಾರೆ ಎಂದು ಅಭಿಪ್ರಾಯ ಪಟ್ಟರು.

ವಿಶ್ವ ಮಲೇರಿಯಾ ದಿನವನ್ನು ಆರಂಭದಲ್ಲಿ ಆಫ್ರಿಕಾ ಮಲೇರಿಯಾ ದಿನ ಎಂದು ಆಚರಣೆ ಮಾಡಲಾಗುತ್ತಿತ್ತು. ಬಿಸಿಲಿರುವ ಪ್ರದೇಶಗಳಲ್ಲಿ ಮಲೇರಿಯಾ ಹೆಚ್ಚಾಗಿತ್ತು. ಹೀಗಾಗಿ ಆಫ್ರಿಕಾ ದೇಶಗಳಲ್ಲಿ, ಏಷ್ಯಾಖಂಡದಲ್ಲಿ ಮಲೇರಿಯಾ ಸೋಂಕು ಹೆಚ್ಚಿದೆ. ಅಮೆರಿಕಾದಲ್ಲಿ ಪ್ರವಾಸಿಗರಿಂದಾಗಿ ಅಪರೂಪಕ್ಕೆ ಮಲೇರಿಯಾ ಪ್ರಕರಣಗಳು ಕಾಣಿಸಿಕೊಳ್ಳುತ್ತವೆ. ಐರೋಪ್ಯ ದೇಶಗಳಲ್ಲಿ ಮಲೇರಿಯಾ ಪ್ರಕರಣಗಳು ಅತೀ ಕಡಿಮೆ ಪ್ರಮಾಣದಲ್ಲಿ ದಾಖಲಾಗುತ್ತವೆ. ಏಷ್ಯಾ ಖಂಡದಲ್ಲಿ ಮಲೇರಿಯಾದಿಂದಾಗುವ ಸಾವುಗಳ ಪೈಕಿ ಅತೀ ಹೆಚ್ಚು ಸಾವು ಭಾರತದಲ್ಲೇ ಆಗುತ್ತದೆ. ಇದು ಗಂಭೀರ ವಿಚಾರ ಎಂದು ಹೇಳಿದರು.

ಭಾರತದಲ್ಲಿ 2030ರ ಒಳಗೆ ಮಲೇರಿಯಾ ನಿರ್ಮೂಲನೆ ಮಾಡಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸಂಕಲ್ಪ ತೊಟ್ಟಿದ್ದಾರೆ. ರಾಷ್ಟ್ರೀಯ ಆರೋಗ್ಯ ಅಭಿಯಾನದ ಮೂಲಕ ಅನೇಕ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಸರ್ಕಾರ ಮತ್ತು ಸಮಾಜ ಒಟ್ಟಾಗಿ ಪ್ರತಿರೋಧ ಒಡ್ಡಿದರೆ ಮಾತ್ರ ಯಶಸ್ಸು ಸಿಗುತ್ತದೆ. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಹೆಚ್ಚಾಗಿ ನಡೆಯಬೇಕು. ಎಲ್ಲಾ ಹಳ್ಳಿಗಳಲ್ಳೂ ಆಶಾ ಕಾರ್ಯಕರ್ತರು ಶುಚಿತ್ವ ಮತ್ತು ನೈರ್ಮಲ್ಯದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ. ವೈದ್ಯಕೀಯ ಕಾಲೇಜುಗಳು ತಮ್ಮ ವಿದ್ಯಾರ್ಥಿಗಳನ್ನು ಬಳಸಿಕೊಂಡು ಆಯಾ ಜಿಲ್ಲೆಗಳಲ್ಲಿ, ತಾಲೂಕುಗಳಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ಸಾರ್ವಜನಿಕ ಆರೋಗ್ಯ ಕಾಪಾಡುವ ಕೆಲಸ ಕೇವಲ ಆರೋಗ್ಯ ಇಲಾಖೆಯ ಕೆಲಸ ಮಾತ್ರವಲ್ಲ. ವೈದ್ಯಕಿಯ ಶಿಕ್ಷಣ ನೀಡುವ ವೈದ್ಯಕೀಯ ಕಾಲೇಜುಗಳು ಕೂಡ ಮಾಡಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...