ರಾಜ್ಯದ ಐಟಿ ಉದ್ಯಮದಲ್ಲಿ ಮುಂದಿನ 5 ವರ್ಷಗಳಿಗೆ 55 ಲಕ್ಷ ನುರಿತ ಉದ್ಯೋಗಿಗಳ ಅವಶ್ಯಕತೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಹೇಳಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, 55 ಲಕ್ಷ ಉದ್ಯೋಗ ಸೃಷ್ಟಿಗೆ ಪೂರಕವಾದ ಯೋಜನೆಗಳನ್ನು ರೂಪಿಸಲಾಗುತ್ತದೆ.
ಈ ಅವಧಿಯಲ್ಲಿ ಐಟಿ ಕ್ಷೇತ್ರದ ವಹಿವಾಟನ್ನು 300 ಶತಕೋಟಿ ಡಾಲರ್ ಮಟ್ಟಕ್ಕೆ ಬೆಳೆಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ಅವರು ತಿಳಿಸಿದ್ದಾರೆ.
ಬೆಂಗಳೂರು ತಂತ್ರಜ್ಞಾನ ಶೃಂಗ ಭೌತಿಕ ರೂಪದಲ್ಲಿ ನಡೆಯಲಿದೆ. ಇದಕ್ಕೆ ಪೂರಕವಾಗಿ ಅಮೆರಿಕ, ಇಂಗ್ಲೆಂಡ್, ಜಪಾನ್ ಮುಂತಾದ ಕಡೆಗಳಲ್ಲಿ ಕಾರ್ಯಕ್ರಮ ನಡೆಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಹಣಕಾಸು ವರ್ಷದಲ್ಲಿ ದೇಶಕ್ಕೆ ಹರಿದು ಬಂದಿರುವ ಒಟ್ಟು ವಿದೇಶಿ ಹೂಡಿಕೆಯಲ್ಲಿ ಶೇ 40 ಪಾಲು ಕರ್ನಾಟಕದಲ್ಲೇ ಹೂಡಿಕೆಯಾಗಿದೆ ಎಂದು ಅಶ್ವತ್ಥನಾರಾಯಣ ಅವರು ಮಾಹಿತಿ ನೀಡಿದ್ದಾರೆ