Monday, October 12, 2026
Monday, October 12, 2026

ಹಿಜಾಬ್ ಕೇಸ್ ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಸಮ್ಮತಿ

Date:

ಶಾಲೆಯೊಳಗೆ ಹಿಜಾಬ್‌ ಧರಿಸಲು ಅನುಮತಿ ನಿರಾಕರಿಸಿದ ಕರ್ನಾಟಕ ಹೈಕೋರ್ಚ್‌ ತೀರ್ಪು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂಕೋರ್ಚ್‌ ಸಮ್ಮತಿಸಿದೆ.

ತುರ್ತು ವಿಚಾರಣೆ ಕೋರಿ ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ, ‘ಎರಡು ದಿನ ಕಾಯಿರಿ. ನಿಮ್ಮ ಅರ್ಜಿಯನ್ನು ಲಿಸ್ಟ್‌ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ನ್ಯಾ.ಕೃಷ್ಣ ಮುರಾರಿ ಮತ್ತು ನ್ಯಾ. ಹಿಮಾ ಕೊಹ್ಲಿ ಪೀಠದಲ್ಲಿನ ಇತರೆ ಇಬ್ಬರು ನ್ಯಾಯಮೂರ್ತಿಗಳಾಗಿದ್ದಾರೆ.
ಹಿಜಾಬ್‌ ಧಾರಣೆ ಇಸ್ಲಾಂನಲ್ಲಿ ಅತ್ಯಗತ್ಯ ಧಾರ್ಮಿಕ ಆಚರಣೆಗಳ ಭಾಗವಲ್ಲ. ಹೀಗಾಗಿ ಅದನ್ನು ಸಂವಿಧಾನದ 25ನೇ ವಿಧಿಯಡಿ ಪರಿಗಣಿಸಲು ಬರುವುದಿಲ್ಲ ಎಂದು ಹೇಳಿದ್ದ ಕರ್ನಾಟಕ ಹೈಕೋರ್ಚ್‌, ಶಾಲಾ ಕೊಠಡಿಯೊಳಗೆ ಹಿಜಾಬ್‌ ಧರಿಸಲು ಅನುಮತಿ ನಿರಾಕರಿಸಿತ್ತು.

ಜೊತೆಗೆ ಈ ಬಗ್ಗೆ ಉಡುಪಿ ಪದವಿ ಪೂರ್ವ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿತ್ತು.

ಇದನ್ನು ಸುಪ್ರೀಂಕೋರ್ಚ್‌ನಲ್ಲಿ ಪ್ರಶ್ನಿಸಿರುವ ಅರ್ಜಿದಾರರು, ‘ಧಾರ್ಮಿಕ ಸ್ವಾತಂತ್ರ್ಯ ಮತ್ತು ಆತ್ಮಸಾಕ್ಷಿಯ ಸ್ವಾತಂತ್ರ್ಯ ಇವೆರಡರ ನಡುವಿನ ವ್ಯತ್ಯಾಸವನ್ನು ಗುರುತಿಸುವಲ್ಲಿ ಕೋರ್ಟು ತಪ್ಪು ಮಾಡಿದೆ. ಈ ಮೂಲಕ ಧರ್ಮವನ್ನು ಪಾಲನೆ ಮಾಡುವವರು, ಆತ್ಮಸಾಕ್ಷಿಯ ಸ್ವಾತಂತ್ರ ಹೊಂದಬೇಕಿಲ್ಲ ಎಂದು ಊಹಿಸಿದೆ. ಹಿಜಾಬ್‌ ಧಾರಣೆಯ ಹಕ್ಕು, ಸಂವಿಧಾನದ 21ನೇ ವಿಧಿಯಡಿ ಬರುವ ಖಾಸಗಿತನ ಹಕ್ಕಿನ ವ್ಯಾಪ್ತಿಗೆ ಬರುತ್ತದೆ. ಇದನ್ನು ಪರಿಗಣಿಸುವಲ್ಲಿ ಹೈಕೋರ್ಚ್‌ ವಿಫಲವಾಗಿದೆ. ಆತ್ಮಸಾಕ್ಷಿಯ ಸ್ವಾತಂತ್ರವು ಖಾಸಗಿತನ ಹಕ್ಕಿನ ಭಾಗ’ ಎಂದು ವಾದಿಸಿದ್ದಾರೆ.

ಹಿಜಾಬ್‌ ತೆಗೆಯಲು ನಿರಾಕರಿಸಿ ಮೂವರು ವಿದ್ಯಾರ್ಥಿನಿಯರು ಗಣಿತ ವಿಷಯದ ಪರೀಕ್ಷೆಗೆ ಗೈರಾದ ಘಟನೆ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ಈಗಾಗಲೇ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಿದ್ದು, ಎರಡು ದಿನದ ಹಿಂದೆ ನಡೆದ ಇಂಗ್ಲೀಷ್‌ ವಿಷಯದ ಪರೀಕ್ಷೆಯಲ್ಲಿ ಹಿಜಾಬ್‌ ವಿವಾದ ಕೇಳಿಬಂದಿರಲಿಲ್ಲ. ಆದರೆ, ಮತ್ತೆ ಹಿಜಾಬ್‌ ವಿವಾದ ಕೇಳಿಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...