Monday, December 15, 2025
Monday, December 15, 2025

ಕಾಂಗ್ರೆಸ್ ಗೆ ನೋ ನೋ ಎಂದ ಪ್ರಶಾಂತ್ ಕಿಶೋರ್

Date:

ಅನೇಕ ಸಭೆಗಳ ಬಳಿಕ ಚುನಾವಣಾ ಚಾಣಾಕ್ಷ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷವನ್ನು ಸೇರುತ್ತಾರೆ ಎಂದು ಸುದ್ದಿ ಆಗಿತ್ತು. ಆದರೆ ಈಗ ಆ ಪ್ರಸ್ತಾಪವನ್ನು ಕಿಶೋರ್ ಅವರು ಕಡೆಗಣಿಸಿದ್ದಾರೆ.

ಅನೇಕ ದಿನಗಳಿಂದ ಕುತೂಹಲ ಮೂಡಿಸಿದ್ದ ಪ್ರಶಾಂತ್ ಕಿಶೋರ್ ಹಾಗೂ ಕಾಂಗ್ರೆಸ್ ನಡುವಿನ ಮಾತುಕತೆ ಈಗ ಅಂತ್ಯಕಂಡಿದೆ.

2024ರ ರಾಷ್ಟ್ರೀಯ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಸವಾಲುಗಳನ್ನು ಎದುರಿಸಿ ಮುನ್ನಡೆ ಸಾಧಿಸಲು ಯೋಚಿಸಿದ್ದ ಕಾಂಗ್ರೆಸ್‍ಗೆ ಈಗ ಹಿನ್ನಡೆ ಕಂಡಂತಾಗಿದೆ. ಈ ಬಗ್ಗೆ ಪ್ರಶಾಂತ್ ಕಿಶೋರ್ ಅವರು ತಮ್ಮ ಅಭಿಪ್ರಾಯಗಳನ್ನು ಟ್ವೀಟ್ ಮೂಲಕ ತಿಳಿಸಿದ್ದಾರೆ.

ತಮ್ಮ ಟ್ವೀಟ್ ಖಾತೆಯಲ್ಲಿ ಹೀಗೆ ಹೇಳಿಕೊಂಡಿದ್ದಾರೆ.
ಚುನಾವಣಾ ತಂತ್ರಗಾರಿಕೆಯ ಭಾಗವಾಗಿ ಪಕ್ಷಕ್ಕೆ ಸೇರಲು ಮತ್ತು ಚುನಾವಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಕಾಂಗ್ರೆಸ್‍ನ ಪ್ರಸ್ತಾಪವನ್ನು ನಾನು ನಿರಾಕರಿಸಿದೆ. ನನ್ನ ಅಭಿಪ್ರಾಯದ ಪ್ರಕಾರ ರಚನಾತ್ಮಕ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಪಕ್ಷಕ್ಕೆ ಮುಖ್ಯವಾಗಿ ಬೇಕಾಗಿರುವುದು ಸರಿಯಾದ ನಾಯಕತ್ವವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಸೇರಿದಂತೆ ಇನ್ನಿತ್ತರರು ಕಾಂಗ್ರೆಸ್ ನಾಯಕರ ಜೊತೆಗೆ ಪ್ರಶಾಂತ್ ಕಿಶೋರ್ ಮಾತುಕತೆ ನಡೆಸಿದ್ದರು. ಅನೇಕ ಸುತ್ತಿನ ಮಾತುಕತೆಗಳ ಬಳಿಕ ಪ್ರಶಾಂತ್ ಕಿಶೋರ್ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿಹರಿದಾಡುತ್ತಿತ್ತು.
ಆದರೆ ಈಗ ಪ್ರಶಾಂತ್ ಕಿಶೋರ್ ತಮ್ಮ ಅನಿಸಿಕೆಯನ್ನು ಟ್ವೀಟ್ ಮಾಡಿ ಕಾಂಗ್ರೆಸ್‍ಗೆ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಶಾಂತ್ ಕಿಶೋರ್ ಅವರ ಟ್ವೀಟರ್ ಸಂದೇಶ ಹೀಗಿದೆ,

Prashant Kishor
@PrashantKishor
I declined the generous offer of #congress to join the party as part of the EAG & take responsibility for the elections.

In my humble opinion, more than me the party needs leadership and collective will to fix the deep rooted structural problems through transformational reforms.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...