Friday, October 4, 2024
Friday, October 4, 2024

ಕೃಷ್ಣ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ- ಸಿಎಂ

Date:

ಕೃಷ್ಣಾ ಮೇಲ್ದಂಡೆ ಯೋಜನೆಯ 3ನೇ ಹಂತದ ಕಾಮಗಾರಿಗಳ ಅನುಷ್ಠಾನಕ್ಕೆ ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಬೂದಿಹಾಳ, ಪೀರಾಪೂರ ಏತ ನೀರಾವರಿ ಯೋಜನೆಯ ಹಂತ-01 ಪೈಪ್‌ ವಿತರಣೆ ಜಾಲದ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಯೋಜನೆ ಸಂಬಂಧ ಕೋರ್ಟ್ ನಲ್ಲಿ ಕಾನೂನಾತ್ಮಕ ಹೋರಾಟ ನಡೆಯುತ್ತಿದೆ. ಇನ್ನು 2-3 ತಿಂಗಳಲ್ಲಿ ಈ ಸಂಬಂಧ ಆದೇಶ ಹೊರಬೀಳುವ ಸಾಧ್ಯತೆ ಇದೆ. ನಂತರ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಯೋಜನೆ ಜಾರಿಗೊಳಿಸಲಾಗುತ್ತದೆ. ಈ ಯೋಜನೆಗಾಗಿ ಈ ಬಾರಿ ಬಜೆಟ್‌ನಲ್ಲಿ .5 ಸಾವಿರ ಕೋಟಿ ತೆಗೆದಿಡಲಾಗಿದೆ. 3ನೇ ಹಂತದ ಯೋಜನೆಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹೋರಾಟಕ್ಕೆ ಅಂತಿಮ ತೆರೆ ಬಿದ್ದರೆ 130 ಟಿಎಂಸಿ ನೀರು ಸದ್ಬಳಕೆ ಮಾಡಿಕೊಳ್ಳಲು ಕೈಗೊಳ್ಳಬೇಕಾದ ಎಲ್ಲ ನೀರಾವರಿ ಯೋಜನೆಗಳನ್ನು ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಭಗೀರಥನಾಗುವ ಕನಸಿಲ್ಲ.
ನನಗೆ ಭಗೀರಥನಾಗುವ ಕನಸಿಲ್ಲ. ಪ್ರಚಾರವೂ ಬೇಕಿಲ್ಲ. ಆದರೆ, ರೈತರು ನಲುಗಬಾರದೆನ್ನುವುದು ನನ್ನ ಕಾಳಜಿಯಾಗಿದೆ. ಬರದ ನೆಲಕ್ಕೆ ಹಸಿರು ಸೀರೆ ಉಡಿಸಬೇಕೆಂಬುದು ನನ್ನ ಕನಸಾಗಿದೆ. ಈ ಕಾರಣ- ಕಾಳಜಿಯಿಂದಾಗಿ ಏತ ನೀರಾವರಿಯಂತಹ ನೀರಾವರಿ ಯೋಜನೆಗಳು ರಾಜ್ಯದಲ್ಲಿ ಅನುಷ್ಠಾನಗೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ

ಆಲಮಟ್ಟಿ ಅಣೆಕಟ್ಟೆ ಎತ್ತರ 524.256 ಮೀಟರ್‌ಗೆ ಹೆಚ್ಚಿಸುವುದರಿಂದ ಮುಳುಗಡೆಯಾಗಲಿರುವ 20 ಹಳ್ಳಿಗಳ ಪುನರ್ವಸತಿ ಮತ್ತು ಪುನರ್‌ ನಿರ್ಮಾಣಕ್ಕೆ ಮತ್ತು ಭೂಸ್ವಾಧೀನಕ್ಕೆ ಎಷ್ಟುಹಣದ ಅವಶ್ಯಕತೆ ಆಗುತ್ತದೆಯೋ ಅಷ್ಟೂ ಹಣವನ್ನು ರಾಜ್ಯ ಸರ್ಕಾರ ಒದಗಿಸಲು ಸಿದ್ಧವಿದೆ ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ಅನುಷ್ಠಾನಕ್ಕೆ .55,000 ಕೋಟಿ ಅಗತ್ಯವಿದೆ. ಭಾರಿ ಮೊತ್ತದ ಹಣ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ. 3ನೇ ಹಂತದ ಯೋಜನೆ ಬೇಗನೆ ಪೂರ್ಣಗೊಂಡು ರೈತರ ಜಮೀನಿಗೆ ನೀರು ಒದಗಿಸಲಾಗುತ್ತದೆ. ನಮ್ಮ ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಉಮೇಶ ಕತ್ತಿ, ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ, ಬಸನಗೌಡ ಪಾಟೀಲ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Backward Classes Welfare Department ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Backward Classes Welfare Department ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ...

Klive Special Article ನವರಾತ್ರಿ ಎರಡನೇ ದಿನ.ದೇವಿಯ ಶ್ರೀಬ್ರಹ್ಮಚಾರಿಣಿ ರೂಪದಲ್ಲಿ ಆರಾಧನೆ. ...

Klive Special Article "ದಧಾನಾಂ ಕರಪದ್ಮಾಭ್ಯಾಂಅಕ್ಷಮಾಲಾ ಕಮಂಡಲೂ/ದೇವಿ ಪ್ರಸೀದತು ಮಯಿಬ್ರಹ್ಮಚಾರಿಣ್ಯನುತ್ತಮಾ//ಮೊದಲನೆಯ ದಿನ...

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...