ಕರ್ನಾಟಕದ ಗಡಿ ಬಗ್ಗೆ ಸರ್ಕಾರದ ನಿಲುವು ಬಹಳ ಸ್ಪಷ್ಟವಾಗಿದೆ. ರಾಜ್ಯದ ಗಡಿ ಪ್ರದೇಶದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ನಿನ್ನೆ ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿನ ರಾಜಕಾರಣಿಗಳು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ. ಅದಕ್ಕಾಗಿ ರಾಜ್ಯದ ಗಡಿ ಭಾಷೆಗಳ ಬಗ್ಗೆ ಕೆದಕುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಅನೇಕ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳಿವೆ. ಅವುಗಳನ್ನು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಚಿಂತನೆ ಸರ್ಕಾರ ಮಾಡುತ್ತಿದೆ. ಅವರ ರಾಜಕೀಯ ಉಳಿವಿಗಾಗಿ ರಾಜ್ಯದ ಗಡಿ ಭಾಷೆ ವಿಚಾರಗಳನ್ನು ಎತ್ತುವುದು ಸಣ್ಣತನ. ಅದನ್ನು ಕೈಬಿಡಬೇಕು ಎಂದು ಬಸವರಾಜ್ ಬೊಮ್ಮಾಯಿ ಅವರು ಹೇಳಿದ್ದಾರೆ.
ಮರಾಠಿ ಮಾತನಾಡುವ ಜನರು ಇರುವ ಕರ್ನಾಟಕದ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವವರೆಗೂ ಅಲ್ಲಿನ ಜನರ ಹೋರಾಟಕ್ಕೆ ಬೆಂಬಲ ನೀಡುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದರು. ಅದಕ್ಕೆ ಬೊಮ್ಮಾಯಿ ಈ ರೀತಿ ತಿರುಗೇಟು ನೀಡಿದ್ದಾರೆ.