Sunday, March 23, 2025
Sunday, March 23, 2025

ಬಸವಣ್ಣನವರ ಆದರ್ಶಗಳು ಸಾರ್ವಕಾಲಿಕ- ಬಿವೈಆರ್

Date:

ವಿಶ್ವಗುರು ಬಸವಣ್ಣನವರ ಜೀವನಾದರ್ಶಗಳು ಸಾರ್ವಕಾಲಿಕವಾಗಿದ್ದು ಇಂದಿನ ಯುವ ಜನತೆಗೆ ಮಾರ್ಗದರ್ಶಿಯಾಗಿವೆ. ಅವರ ಸಾಮಾಜಿಕ ಸಾಮರಸ್ಯ, ಭ್ರಾತೃತ್ವ, ಏಕತೆ ಮತ್ತು ಸಹಾನುಭೂತಿಯ ಚಿಂತನೆಗಳು ಇಂದಿಗೂ ಪ್ರಭಾವಯುತವಾಗಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ಹೇಳಿದರು.

ಬಿ.ವೈ. ರಾಘವೇಂದ್ರ ಅವರು ನಿನ್ನೆ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಹಾಗೂ ಬಸವೇಶ್ವರ ವೀರಶೈವ ಸಮಾಜ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ಜಗಜ್ಯೋತಿ ಬಸವೇಶ್ವರರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಬಸವಣ್ಣನವರ ಜೀವನಾದರ್ಶಗಳನ್ನು ಇಂದಿನ ಯುವ ಜನತೆ ಅಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಬಸವಣ್ಣನವರು ಜನಿಸಿದ ಈ ನಾಡಿನಲ್ಲಿ ಜನಿಸಿದ ನಾವೇ ಧನ್ಯರು. ಅವರ ಆಶಯದಂತೆ ಪ್ರತಿ ವ್ಯಕ್ತಿಯು ನಡೆ-ನುಡಿ ಶುದ್ಧವಾಗಿಸಿಕೊಂಡಲ್ಲಿ ತನ್ನಲ್ಲಿಯೇ ಕೈಲಾಸವನ್ನು ಕಾಣಬಹುದಾಗಿದೆ ಎಂದ ಅವರು, ಜಾತಿ, ಮತ ಪಂಥಗಳ ಎಲ್ಲೆ ಮೀರಿ ಬೆಳೆದವರು ಬಸವಣ್ಣನವರು. ಅಂತಹ ಮಹಾನ್ ಮಾನವತಾವಾದಿಯನ್ನು ಯಾವುದೋ ಒಂದು ಜನಾಂಗಕ್ಕೆ ಸೀಮಿತಗೊಳಿಸುವುದು ಸಲ್ಲದು ಎಂದು ನುಡಿದರು.

ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವೇಶ್ವರ ಪ್ರತಿಮೆಯನ್ನು ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಬಿಡುಗಡೆಗೊಳಿಸಿ, ಬಸವೇಶ್ವರರಿಗೆ ಗೌರವ ಸಲ್ಲಿಸಿದೆ ಮಾತ್ರವಲ್ಲ ಅವರ ಆದರ್ಶಗಳನ್ನು ಜಗತ್ತಿಗೆ ಪಸರಿಸುವಲ್ಲಿ ಸಕ್ರಿಯವಾಗಿದೆ. ಬಸವಕಲ್ಯಾಣದಲ್ಲಿ ಬಸವಣ್ಣನವರು ಸ್ಥಾಪಿಸಿದ್ದ ಅನುಭವ ಮಂಟಪದ ಸ್ಥಳದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಸರ್ಕಾರ ಬದ್ಧವಾಗಿದೆ. ಅಗತ್ಯವಿರುವ 500 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಿದೆ. ಉತ್ತರ ಕರ್ನಾಟಕದ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಘೋಷಿಸಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲು ಉದ್ಧೇಶಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಮಾತನಾಡಿ, ಬಸವಣ್ಣನವರನ್ನು ಅನುಸರಿಸುವವರು, ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ನಡೆಯುವವರು ಮಹಾಪುರುಷರಾಗಿ ಗುರುತಿಸಿಕೊಳ್ಳುತ್ತಾರೆ. ಬಸವಣ್ಣನವರ ಅನುಯಾಯಿಗಳು ಎಂಬುದೇ ನಮ್ಮ ಹೆಮ್ಮೆ. ಆದರೆ, ಬಹುಸಂಖ್ಯೆಯಲ್ಲಿ ಬಸವೇಶ್ವರ ಆದರ್ಶಗಳನ್ನು ಅನುಸರಿಸದಿರುವುದು ಬೇಸರದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ಜಗಜ್ಯೋತಿ ಬಸವೇಶ್ವರ ಕುರಿತು ದಿಕ್ಸೂಚಿ ಭಾಷಣ ಮಾಡಿದ ಚಿಕ್ಕಮಗಳೂರಿನ ಹಿರಿಯ ಸಾಹಿತಿ ಚಟ್ನಳ್ಳಿ ಮಹೇಶ್ ಅವರು ಮಾತನಾಡಿ, ಬಸವಣ್ಣನವರ ವಚನಗಳಲ್ಲಿ ಗುರು-ಜಂಗಮ, ಕಾಯಕ, ದಾಸೋಹ, ಧರ್ಮ, ಮಹಿಳೆ, ನಿಸರ್ಗ, ಕಾರ್ಮಿಕ ಮುಂತಾದ ಅನೇಕ ವಿಷಯಗಳ ವ್ಯಾಖ್ಯಾನವಿದೆ. ಈ ವಚನಗಳೊಳಗಿನ ಅಂತಃಸತ್ವ ಇಂದಿಗೂ ಪ್ರಸ್ತುತವಾಗಿದೆ ಹೇಳಿದರು.

ಅವರ ವಚನಗಳಲ್ಲಿ ಬಾಳಿಗೆ ಪೂರಕವಾದ ಬಂಗಾರದ ಹೂರಣ ಉಣಬಡಿಸಿದ್ದಾರೆ. ಅವರ ಬರಹ, ಸಾಹಿತ್ಯ ಸರ್ವಕಾಲಕ್ಕೂ ಅನ್ವಯವಾಗುತ್ತವೆ. ಸಮಾಜದ ಓರೆ-ಕೋರೆಗಳನ್ನು ತಿದ್ದಿ ಮುನ್ನಡೆದವರು, ಬದುಕನ್ನು ಸರಿದಾರಿಗೆ ಶ್ರಮಿಸಿದವರಲ್ಲಿ ಬಸವಣ್ಣನವರು ಅಗ್ರಗಣ್ಯರು. ಸಮಸಮಾಜವನ್ನು ನಿರ್ಮಿಸುವಲ್ಲಿ ಅವರ ಸಂಕಲ್ಪ ಅದ್ವಿತೀಯವಾದುದು ಎಂದರು.

ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಬಸವ ಮರುಳಸಿದ್ಧ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸೂಡಾ ಅಧ್ಯಕ್ಷ ಎನ್.ಜಿ.ನಾಗರಾಜ್, ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಮಹಾನಗರಪಾಲಿಕೆ ಸದಸ್ಯ ಹೆಚ್.ಎಂ.ಯೋಗೀಶ್, ಶ್ರೀಮತಿ ಅನಿತಾ ರವಿಶಂಕರ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಎನ್.ಜೆ.ರಾಜಶೇಖರ್, ಟಿ.ಬಿ.ಜಗದೀಶ್, ಡಿ.ಬಿ.ವಿಜಯಕುಮಾರ್, ಜ್ಯೋತಿಪ್ರಕಾಶ್, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಸಿ.ಇ.ಒ. ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಉಪವಿಭಾಗಾಧಿಕಾರಿ ಟಿ.ವಿ.ಪ್ರಕಾಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್. ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಶ್ರೀಮತಿ ನಾಗರತ್ನ ಚಂದ್ರಶೇಖರಯ್ಯ ಮತ್ತು ತಂಡದವರಿಂದ ವಚನಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

PM Yoga Awards 2025 ಪ್ರಧಾನಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ

PM Yoga Awards 2025 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ...

Department of Tourism ಕೌಶಲ್ಯಾಭಿವೃದ್ಧಿಗೆ ಪ.ಜಾ/ ಪ.ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಮೈಸೂರಿನ ಫುಡ್ ಕ್ರಾಫ್ಟ್...

Shivamogga News ವಹಿಸಿರುವ ಜವಾಬ್ದಾರಿಯನ್ನ ಪರಿಣಾಮಕಾರಿಯಾಗಿ ನಿರ್ವಹಿಸುವೆ- ವಸಂತ ಹೋಬಳಿದಾರ್

Shivamogga News ಸಮಾಜದಲ್ಲಿ ಸೇವಾ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಮಾಡುವಲ್ಲಿ ರೋಟರಿಯಂತಹ ಸಂಸ್ಥೆಗಳು...

Rotary Club Shivamogga ಸಮಾಜದಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸಹಾಯಮಾಡುವುದು ರೋಟರಿಸಂಸ್ಥೆಯ ಗುರಿ-ಸಿ.ಎ.ದೇವ್ ಆನಂದ್

Rotary Club Shivamogga ವಿಶ್ವದ ಎಲ್ಲ ದೇಶಗಳಲ್ಲಿ ಹೆಚ್ಚು ಸೇವಾ ಕಾರ್ಯಗಳನ್ನು...