ಈ ಬಾರಿ ಅಕ್ಷಯ ತೃತೀಯದ ಸಂದರ್ಭದಲ್ಲೂ ಚಿನ್ನದ ಬೆಲೆ ಏರಿಕೆಯಾಗಿರಲಿಲ್ಲ.
ಚಿನ್ನದ ಬೆಲೆಯಲ್ಲಿ ನಿನ್ನೆ ಕೂಡ ಮತ್ತೆ ಇಳಿಕೆಯಾಗಿದ್ದು, 230 ರೂ. ಕುಸಿತ ಕಂಡಿದೆ.
ಆದರೆ, ಬೆಳ್ಳಿಯ ಬೆಲೆ ಇಂದು 400 ರೂ. ಏರಿಕೆಯಾಗಿದೆ. ನೀವೇನಾದರೂ ಬಂಗಾರ ಖರೀದಿಸುವವರಾದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಹೀಗಿದೆ..
ಭಾರತದಲ್ಲಿ ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 47,200 ರೂ. ಇದ್ದುದು 47,000 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,510 ರೂ. ಇದ್ದುದು 51,280 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯ ನಿರ್ಣಾಯಕವಾಗುತ್ತದೆ.
ಗುಡ್ ರಿಟರ್ನ್ಸ್ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,100 ರೂ. ಮುಂಬೈ- 47,000 ರೂ, ದೆಹಲಿ- 47,000 ರೂ, ಕೊಲ್ಕತ್ತಾ- 47,000 ರೂ, ಬೆಂಗಳೂರು- 47,000 ರೂ, ಹೈದರಾಬಾದ್- 47,000 ರೂ, ಕೇರಳ- 47,000 ರೂ, ಪುಣೆ- 47,100 ರೂ, ಮಂಗಳೂರು- 47,000 ರೂ, ಮೈಸೂರು- 47,000 ರೂ. ಇದೆ.
ಚಿನ್ನದ ಉತ್ಪಾದನೆಯಲ್ಲಿ ಪ್ರಮುಖ ರಾಷ್ಟ್ರವಾಗಿರುವ ರಷ್ಯಾ ಮೇಲಿನ ನಿರ್ಬಂಧಗಳಿಂದಾಗಿ ಆಮದು ಕಡಿಮೆಯಾಗುವ ಭೀತಿಯೂ ಚಿನ್ನದ ಬೆಲೆಯ ಹೆಚ್ಚಳಕ್ಕೆ ಕಾರಣವಾಗಿದೆ.
ಭಾರತದಲ್ಲಿ ಚಿನ್ನದ ಬೆಲೆ ಹೆಚ್ಚಳಕ್ಕೆ ರಷ್ಯಾ- ಉಕ್ರೇನ್ ಯುದ್ಧ ಕೂಡ ಕಾರಣ ಎನ್ನಲಾಗಿದೆ. ಇಂದು ಚಿನ್ನದ ಬೆಲೆ ಕುಸಿತವಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದೆ.