Wednesday, July 8, 2026
Wednesday, July 8, 2026

ಚೆನ್ನೈ ಮೇಲೆ ಜಯ ಸಾಧಿಸಿದ ಆರ್ ಸಿ ಬಿ

Date:

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್​ಗಳಿಂದ ಮಣಿಸಿದ ಆರ್​ಸಿಬಿ ಅಮೂಲ್ಯ ಎರಡು ಅಂಕಗಳನ್ನು ಸಂಪಾದಿಸಿತು.

ಐಪಿಎಲ್ ಪಂದ್ಯಾವಳಿಯಲ್ಲಿ ಇತ್ತೀಚೆಗೆ ಸೋಲಿನ ಬೆನ್ನೇರಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೊನೆಗೂ ಗೆಲುವಿನ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 13 ರನ್​ಗಳಿಂದ ಮಣಿಸಿದ ಆರ್​ಸಿಬಿ ಅಮೂಲ್ಯ ಎರಡು ಅಂಕಗಳನ್ನು ಸಂಪಾದಿಸಿತು.

ಫಾಫ್​ಡು ಪ್ಲೆಸಿಸ್ ನೇತೃತ್ವದ ಬೆಂಗಳೂರು ತಂಡ ಟಾಸ್ ಸೋತು ಮೊದಲು ಬ್ಯಾಟ್ ಮಾಡಿತು. ಉತ್ತಮ ಆರಂಭದ ಹೊರತಾಗಿಯೂ ಸತತವಾಗಿ ವಿಕೆಟ್ ಕಳೆದುಕೊಂಡ ಪರಿಣಾಮ ಆರ್​ಸಿಬಿ ಕಡಿಮೆ ಮೊತ್ತ ಕಲೆಹಾಕುವ ಭೀತಿಯಲ್ಲಿತ್ತು.

ಆದರೆ ರಜತ್ ಪಾಟಿದಾರ್, ಮಹಿಪಾಲ್ ಲಾಮ್ರೋರ್ ಹಾಗೂ ದಿನೇಶ್ ಕಾರ್ತಿಕ್​ರ ಅಮೂಲ್ಯ ಕೊಡುಗೆಯಿಂದ ತಂಡವು 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಪೇರಿಸಿತು. ಗುರಿ ಬೆಂಬತ್ತಿದ ಚೆನ್ನೈ ಕೂಡ ಉತ್ತಮ ಆರಂಭ ಪಡೆಯಿತು. ಆದರೆ ಆರ್​ಸಿಬಿ ಲಯಬದ್ಧ ಬೌಲಿಂಗ್​ಗೆ ನಲುಗಿದ ಚೆನ್ನೈ ಬ್ಯಾಟರ್​ಗಳು 20 ಓವರ್​ಗಳಲ್ಲಿ 160 ರನ್​ ಗಳಿಸಲಷ್ಟೇ ಶಕ್ತರಾದರು.

ಸ್ಪಿನ್​ಗೆ ನೆರವು ನೀಡುತ್ತಿದ್ದ ಪಿಚ್​ನಲ್ಲಿ ಮ್ಯಾಕ್ಸ್​ವೆಲ್ ಅಮೂಲ್ಯ ಬೌಲಿಂಗ್ ಮಾಡಿದರು. ಅವರಿಗೆ ವನಿಂದು ಹಸರಂಗ, ಶಾಬಾಜ್ ಅಹ್ಮದ್ ಜತೆಯಾದರು. ವೇಗದ ಬೌಲಿಂಗ್​ನಲ್ಲಿ ಜೋಶ್ ಹೇಜಲ್​ವುಡ್ ಹಾಗೂ ಹರ್ಷಲ್ ಪಟೇಲ್ ಮಾರಕ ದಾಳಿ ನಡೆಸಿದರು.

ಪರಿಣಾಮವಾಗಿ ಚೆನ್ನೈ 160 ರನ್​ಗಳಿಗೆ 8 ವಿಕೆಟ್​ ಪೇರಿಸಲಷ್ಟೇ ಶಕ್ತವಾಯಿತು. ಈ ಗೆಲುವಿನಿಂದ ಆರ್​ಸಿಬಿ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರ 4ಕ್ಕೆ ಲಗ್ಗೆ ಇಟ್ಟಿದೆ.

ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ 6ನೇ ಸ್ಥಾನದಲ್ಲಿದ್ದ ಆರ್​ಸಿಬಿ ಈಗ ಅಗ್ರ ನಾಲ್ಕರಲ್ಲಿ ಕಾಣಿಸಿಕೊಂಡಿದೆ. 11 ಪಂದ್ಯಗಳಲ್ಲಿ 6ರಲ್ಲಿ ಗೆದ್ದು, 5ರಲ್ಲಿ ಸೋತಿರುವ ಬೆಂಗಳೂರು ತಂಡ, 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಉಳಿದ ಮೂರೂ ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ನಲ್ಲಿ ಆಡುವ ಹಂಬಲದಲ್ಲಿದೆ ಆರ್​ಸಿಬಿ. ಆದರೆ ನೆಟ್​​ ರನ್​ರೇಟ್ -0.444 ಇರುವುದು ತಂಡದ ಚಿಂತೆ ಹೆಚ್ಚಿಸಿದೆ.

ಇದನ್ನು ಉತ್ತಮಪಡಿಸಿಕೊಳ್ಳಲು ಉಳಿದ ಪಂದ್ಯಗಳನ್ನು ಹೆಚ್ಚಿನ ಅಂತರದಿಂದ ಗೆಲ್ಲುವ ಅನಿವಾರ್ಯತೆ ಇದೆ.

ಗುಜರಾತ್ ಟೈಟಾನ್ಸ್ ಆಡಿದ 10 ಪಂದ್ಯಗಳಲ್ಲಿ 16 ಅಂಕ ಸಂಪಾದಿಸಿದ್ದು, ಮೊದಲ ಸ್ಥಾನದಲ್ಲಿದೆ. 14 ಅಂಕಗಳೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ ಎರಡನೇ ಸ್ಥಾನದಲ್ಲಿದ್ದು 12 ಅಂಕಗಳೊಂದಿಗೆ ರಾಜಸ್ಥಾನ್ ರಾಯಲ್ಸ್ 3ನೇ ಸ್ಥಾನದಲ್ಲಿದೆ. ಆರ್​ಆರ್​ ತಂಡವು 0.340 ನೆಟ್​ ರನ್​ರೇಟ್ ಹೊಂದಿರುವುದು ಅದಕ್ಕೆ ಪ್ಲಸ್ ಆಗಿದೆ.
ಐದನೇ ಸ್ಥಾನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ 10 ಅಂಕ ಹೊಂದಿದೆ. ಆದರೆ ಅದು ಕೇವಲ 9 ಪಂದ್ಯಗಳನ್ನಾಡಿದ್ದು, ಪ್ಲೇ ಅವಕಾಶ ಮುಕ್ತವಾಗಿದೆ.
ಅದಕ್ಕೂ ಮೇಲಾಗಿ ತಂಡದ ರನ್​ರೇಟ್ ಅತ್ಯುತ್ತಮವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...