ದೇಶದ 75ನೇ ಸ್ವಾತಂತ್ರ್ಯ ಮಹೋತ್ಸವದ ನೆನಪಿಗೆ ಕಳೆದ ವರ್ಷ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದ ಅಮೃತ ಗ್ರಾಮ ಪಂಚಾಯಿತಿ ಯೋಜನೆಯ ಪ್ರಥಮ ಹಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೊಸದಾಗಿ 750 ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿ, ಸಮಗ್ರ ಅಭಿವೃದ್ಧಿ ಮಾಡಲು ಉದ್ದೇಶಿಸಲಾಗಿದೆ.
ಆಯ್ಕೆಯಾಗಿರುವ ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ದೀಪಗಳು ಅಥವಾ ಸೋಲಾರ್ ಬೀದಿ ದೀಪಗಳು, ಪ್ರತಿ ಮನೆಗೆ ಕುಡಿಯುವ ನೀರಿನ ನಳ ಸಂಪರ್ಕ, ಶೇ. 100 ರಷ್ಟು ಘನತ್ಯಾಜ್ಯ ವಿಂಗಡಣೆ ಮತ್ತು ವಿಲೇವಾರಿ, ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ವಿಸರ್ಜಿಸುವುದು. ಗ್ರಾ.ಪಂ. ಕಟ್ಟಡಗಳಲ್ಲಿ ಸೌರ ವಿದ್ಯುತ್ ಅಳವಡಿಕೆ, ಅಮೃತ ಉದ್ಯಾನವನ, ಗ್ರಾ.ಪಂ. ಗ್ರಂಥಾಲಯದ ಡಿಜಿಟಲೀಕರಣ, ಶಾಲೆ ಅಥವಾ ಅಂಗನವಾಡಿಗಳಿಗೆ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಶಾಲೆಗಳಲ್ಲಿ ಆಟದ ಮೈದಾನ ಮತ್ತು ಆವರಣ ಗೋಡೆಗಳನ್ನು ನಿರ್ಮಾಣ, ಕೆರೆಗಳು ಮತ್ತು ಕಲ್ಯಾಣಿಗಳ ಪುನಶ್ಚೇತನಗೊಳಿಸಲಾಗುತ್ತದೆ.ಜೊತೆಗೆ ಗ್ರಾಮಗಳ ಇತರ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲಾಗುತ್ತದೆ.