Saturday, September 28, 2024
Saturday, September 28, 2024

₹532 ಕೋಟಿ ವೆಚ್ಚದ ಅನುಭವ ಮಂಟಪ ಯೋಜನೆಗೆ ಒಪ್ಪಿಗೆ

Date:

ಬಸವ ಕಲ್ಯಾಣದಲ್ಲಿ 532 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣ ಯೋಜನೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.

ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಕೈಗೆತ್ತಿಕೊಂಡಿರುವ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಸರ್ಕಾರ 532 ಕೋಟಿ ರೂ.ಗಳ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಅನುಮತಿ ನೀಡಿದೆ. ಮೂರು ವರ್ಷಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಯಿತು.

ಅನುಭವ ಮಂಟಪ ಬಸವಣ್ಣನವರ ಕ್ರಾಂತಿಕಾರಿ ವೇದಿಕೆ. ಈ ಮಂಟಪದ ಮೂಲಕ ಸಮಾಜದ ಓರೆಕೋರೆಗಳನ್ನು ತಿದ್ದುವ ಕೆಲಸವನ್ನು ಬಸವಣ್ಣನವರು ಮಾಡಿದ್ದಾರೆ. ಅವರು ಮಾಡಿರುವ ಸಾಮಾಜಿಕ ಕ್ರಾಂತಿಯನ್ನು ಪ್ರತಿಬಿಂಬಿಸುವ ರೂಪದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಅನುಭವ ಮಂಟಪದಲ್ಲಿ 12ನೇ ಶತಮಾನದಲ್ಲಿ ಇದ್ದಂತಹ ವಚನಕಾರರು ದಾರ್ಶನಿಕ ಪುರುಷರ ಕುರಿತಾದ ಮಾಹಿತಿ ನೀಡುವಂತಹ ಕಿರು ಚಿತ್ರಗಳ ಪ್ರದರ್ಶನ, ಬಸವಣ್ಣನವರ ಜೀವನ ಸಾಧನೆ ಬಿಂಬಿಸುವ ಮಾಹಿತಿಗಳನ್ನು ಅನುಭವ ಮಂಟಪಕ್ಕೆ ಆಗಮಿಸುವ ಎಲ್ಲರಿಗೂ ವಿವರಿಸುವ ವ್ಯವಸ್ಥೆ ಈ ಅನುಭವ ಮಂಟಪದಲ್ಲಿ ಇರಲಿದೆ ಎಂದರು.

ಕಂದಾಯ ಸಚಿವ ಆರ್.ಅಶೋಕ್, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ, ರಘುನಾಥ ರಾವ್ ಮಾಲ್ಕಪುರ್, ಅಮರನಾಥ ಪಾಟೀಲ್, ಶಾಸಕರಾದ ಈಶ್ವರ ಖಂಡ್ರೆ, ಶಶೀಲ್ ನಮೋಶಿ ಮೊದಲಾದವರು ಬಸವಕಲ್ಯಾಣ ಅಭಿವೃದ್ಧಿ ಮಂಡಳಿ ವಿಶೇಷ ಅಧಿಕಾರಿ ಹಾಗೂ ಬೀದರ್ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಬಸವಕಲ್ಯಾಣ ವೃದ್ಧಿ ಮಂಡಳಿಯ ಆಯುಕ್ತ ಶಿವಕುಮಾರ್ ಶೀಲವಂತ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...