Tuesday, April 29, 2025
Tuesday, April 29, 2025

ಮುಂಬೈಗೆ ರೋಚಕ ಜಯ

Date:

ಐಪಿಎಲ್ 2022 ಟೂರ್ನಿಯಲ್ಲಿ ನಿನ್ನೆ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ಐದು ರನ್ ಅಂತರದ ರೋಚಕ ಗೆಲುವು ದಾಖಲಿಸಿದೆ.

ಈ ಮೂಲಕ ಟೂರ್ನಿಯಲ್ಲಿ ಮುಂಬೈ ಸತತ 2ನೇ ಗೆಲುವು ದಾಖಲಿಸಿದೆ.

ಅತ್ತ ಗುಜರಾತ್ ಸತತ 2ನೇ ಸೋಲಿಗೆ ಶರಣಾಗಿದೆ.

ಇದರೊಂದಿಗೆ ರಶೀದ್ ಖಾನ್ (24ಕ್ಕೆ 2 ವಿಕೆಟ್) ಮತ್ತು ವೃದ್ಧಿಮಾನ್ ಸಹಾ (55) ಹಾಗೂ ಶುಭಮನ್ ಗಿಲ್ (52) ಹೋರಾಟವು ವ್ಯರ್ಥವೆನಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ, ಆರು ವಿಕೆಟ್ ನಷ್ಟಕ್ಕೆ 177 ರನ್ ಗಳಿಸಿತ್ತು. ಬಳಿಕ ಗುರಿ ಬೆನ್ನಟ್ಟಿದ ಗುಜರಾತ್, ಸಹಾ-ಗಿಲ್ ಶತಕದ ಜೊತೆಯಾಟದ ಹೊರತಾಗಿಯೂ ಐದು ವಿಕೆಟ್ ನಷ್ಟಕ್ಕೆ 172 ಗಳಿಸಲಷ್ಟೇ ಸಾಧ್ಯವಾಯಿತು.

10 ಪಂದ್ಯಗಳಲ್ಲಿ ಮುಂಬೈ ಎರಡನೇ ಗೆಲುವು ದಾಖಲಿಸಿದೆ. ಆದರೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅತ್ತ ಹಾರ್ದಿಕ್ ಪಾಂಡ್ಯ ಬಳಗ 11 ಪಂದ್ಯಗಳಲ್ಲಿ 3ನೇ ಸೋಲು ಅನುಭವಿಸಿದೆ. ಹಾಗಿದ್ದರೂ 16 ಅಂಕಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದೆ.

ಸವಾಲಿನ ಮೊತ್ತ ಬೆನ್ನಟ್ಟಿದ ಗುಜರಾತ್‌ಗೆ ವೃದ್ಧಿಮಾನ್ ಸಹಾ ಹಾಗೂ ಶುಭಮನ್ ಗಿಲ್ ಬಿರುಸಿನ ಆರಂಭವೊದಗಿಸಿದರು. ಆರಂಭದಲ್ಲಿ ಗಿಲ್ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರೆ ವೃದ್ಧಿಮಾನ್ ಬಿರುಸಿನ ಆಟವಾಡಿದರು.

ಸ್ವಲ್ಪ ಹೊತ್ತಲ್ಲೇ ಗಿಲ್ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. ಇವರಿಬ್ಬರು ಮುಂಬೈ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

10 ಓವರ್‌ ಅಂತ್ಯಕ್ಕೆ ಗುಜರಾತ್ ವಿಕೆಟ್ ನಷ್ಟವಿಲ್ಲದೆ 95 ರನ್ ಗಳಿಸಿತ್ತು. ಅಂತಿಮ 60 ಎಸೆತಗಳಲ್ಲಿ ಗೆಲುವಿಗೆ 83 ರನ್ ಬೇಕಾಗಿತ್ತು.

ಬ್ಯಾಟ್ ಮಾಡಿದ ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ತಂಡ ತನ್ನ ಪಾಲಿನ ಓವರ್ಗಳು ಮುಕ್ತಾಯಗೊಂಡಾಗ 5 ವಿಕೆಟ್ ನಷ್ಟಕ್ಕೆ 172 ಮಾತ್ರ ಗಳಿಸಲು ಶಕ್ತಗೊಂಡ ಸೋಲನ್ನೊಪ್ಪಿಕೊಂಡಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Yadav School of Chess Institute ಯಾದವ ಸಂಸ್ಥೆಯಿಂದ ಚೆಸ್ ತರಬೇತಿ ಶಿಬಿರ

Yadav School of Chess Institute ರವೀದ್ರನಗರದ ಯಾದವ ಸ್ಕೂಲ್ ಆಫ್...

Shivaganga Yoga Center ನಗರದ ಅತಿದೊಡ್ಡ ಬಾಡಾವಣೆಗಳಿಗೆ ₹140 ಕೋಟಿ ಅನುದಾನದಿಂದ ಅಭಿವೃದ್ಧಿ- ವಿಶ್ವಾಸ್

Shivaganga Yoga Center ಶಿವಗಂಗಾ ಯೋಗ ಕೇಂದ್ರದ ಅಧ್ಯಕ್ಷರಾಗಿ ಆಯ್ಕೆಯಾದ ನಂತರ...

Sarva Samriddhi Sadhana Center ರಿಪ್ಪನ್ ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ ಕೇಂದ್ರದಲ್ಲಿ ಮಕ್ಕಳಿಗಾಗಿ ಸಂಸ್ಕಾರ ಶಿಬಿರ

Sarva Samriddhi Sadhana Center ಹೊಸನಗರದ ರಿಪ್ಪನ್‌ಪೇಟೆ ಮೂಗುಡ್ತಿ ಸರ್ವಸಮೃದ್ಧಿ ಸಾಧನಾ...