Saturday, October 5, 2024
Saturday, October 5, 2024

ಮಹನೀಯರ ಜಯಂತಿ ಬರೀ ಆಚರಣೆಯಾಗಬಾರದು-ವೀರಮಲ್ಲಪ್ಪ

Date:

ಮಹನೀಯರ ಜಯಂತಿಗಳು ಕೇವಲ ಆಚರಣೆಯಾಗದೆ ಅನುಸರಣೆ ಆಗಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಅವರು ಮಾತನಾಡಿದರು.

ಇವತ್ತು ನೀರು ಹಾಗೂ ಉಪ್ಪು ಇಲ್ಲದ ಯಾವುದೇ ಪದಾರ್ಥಗಳು ರುಚಿಯಾಗಿರುವುದಿಲ್ಲ. ಭಗೀರಥ ಮಹರ್ಷಿರವರ ಜಯಂತಿಯು ಬರಿ ಆಚರಣೆಯಾಗಬಾರದು ಬದಲಿಗೆ ಅನುಸರಣೆ ಆಗಬೇಕು. ಭಗಿರಥ ಮಹರ್ಷಿ ಅಂತಹ ಮಹನೀಯರ ಯಶೋಗಾಥೆಯನ್ನು ನಮ್ಮ ಮಕ್ಕಳಿಗೂ ತಿಳಿಸಬೇಕು. ನಾವೆಲ್ಲರೂ ಅವರ ಮಾರ್ಗದಲ್ಲಿ ಸಾಗಿ ಸಮಾಜದಲ್ಲಿ ಒಳ್ಳೆಯ ಕೆಲಸಗಳನ್ನು ಮಾಡೋಣ ಎಂದರು.

ಶಿವಮೊಗ್ಗ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅನಂದ್ ಮಾತನಾಡಿ, ಇವತ್ತಿನ ದಿನ ನಾವು ನೀರನ್ನು ಹಣಕೊಟ್ಟು ಕುಡಿಯುವಂತಹ ಪರಿಸ್ಥಿತಿಗೆ ಬಂದಿದೆ, ನಾವೆಲ್ಲರೂ ಭಗೀರಥ ಮಹಾಋಷಿ ಅವರಂತೆ ನಮ್ಮ ಮುಂದಿನ ಪೀಳಿಗೆಗೋಸ್ಕರ ನೀರನ್ನು ಉಳಿಸುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಸಮಾಜದ ಜಿಲ್ಲಾಧ್ಯಕ್ಷ ತಿಪ್ಪೇಶ್ ಮಾತನಾಡಿ, ಇಡೀ ಮನುಕುಲಕ್ಕೆ ಮಹಾನೀಯ ಭಗೀರಥ ರವರ ಕೊಡುಗೆ ಅಪಾರವಾದದ್ದು, ನಾವೆಲ್ಲರೂ ಆಧುನಿಕ ಭಗೀರಥ ಆಗಬೇಕು ಎಲ್ಲಿ ನೀರು ವ್ಯರ್ಥವಾಗಿ ಪೋಲಾಗಿರುತ್ತದೆಯೋ ಅದನ್ನು ತಡೆಯುವ ನಿಟ್ಟಿನಲ್ಲಿ ಜಲ ಸಂರಕ್ಷಣೆಗೆ ಮುಂದಾಗಬೇಕು ಎಂದರು.

ಸಮಾಜದ ಮುಖಂಡ ಅಂಜಿನಪ್ಪ ಉಪನ್ಯಾಸ ನೀಡಿ, ಗಂಗೆಯನ್ನು ಭೂಮಿಗೆ ಇಳಿಸಿದ ಮಹಾನಿಯ ಶ್ರೀ ಭಗೀರಥ ಮಹರ್ಷಿ, ಗಂಗೆ ಕೇವಲ ನೀರಲ್ಲ, ಅದು ಪ್ರಜ್ಞೆಯ ಪ್ರವಾಹ. ಭಗೀರಥ ಮಹರ್ಷಿಯವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಲ್ಲದೆ ಕರ್ಮ ತತ್ವದ ಮೂಲಕ ಇಡೀ ಮನುಕುಲದ ಸಕಲ ಜೀವರಾಶಿಗಳಿಗೂ ಅನುಕೂಲ ಮಾಡಿಕೊಟ್ಟ ಮಹಾಪುರುಷರಾಗಿದ್ದಾರೆ ನಾವೆಲ್ಲರೂ ನಮ್ಮ ನಮ್ಮ ಕ್ಷೇತ್ರದಲ್ಲಿ ಭಗೀರಥರಂತೆ ಆಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜದ ರಾಜ್ಯ ಉಪಾಧ್ಯಕ್ಷರಾದ ಬಸವರಾಜಪ್ಪ ಹಾಗೂ ಭರತ್ ಮಾತನಾಡಿದರು.
ಕಾರ್ಯಕ್ರಮಕ್ಕೂ ಮುನ್ನ ರುದ್ರೇಶ್ ಚಿರಡೋಣಿ ಹಾಗೂ ಸಂಗಡಿಗರಿಂದ ಶ್ರೀ ಭಗೀರಥ ಮಹರ್ಷಿ ಅವರ ಹಾಡನ್ನು ಹಾಡಿದರು.

ಇದೇ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಉಪ್ಪಾರ ಸಮಾಜದ ಮಾಜಿ ಉಪಮೇಯರ್ ಮಂಜುಳಾ, ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಚಂದ್ರಪ್ಪ, ದಾವಣಗೆರೆ ಶಿಕ್ಷಣತಜ್ಞ ಬಸವರಾಜ್ ಸಾಗರ್, ಸೇರಿದಂತೆ ಹಲವಾರು ಜನರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...