Friday, October 4, 2024
Friday, October 4, 2024

ಜೂನ್ ಅಂತ್ಯದೊಳಗೆ ನೀರಾವರಿ ಕಾಮಗಾರಿ ಪೂರೈಸಿ-ಕಾರಜೋಳ

Date:

ಜೂನ್ ಅಂತ್ಯದೊಳಗೆ ನೀರಾವರಿ ಕಾಮಗಾರಿ ಪೂರ್ಣಗೊಳಿಸದಿದ್ದರೆ ಗುತ್ತಿಗೆದಾರರ ವಿರುದ್ಧ ನೋಟಿಸ್ ಜಾರಿ ಮಾಡಿ, ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಕಲಘಟಗಿ ತಾಲ್ಲೂಕಿನ ಬೆಲವಂತರ ಗ್ರಾಮದ ಹತ್ತಿರ ಬೇಡ್ತಿ (ಶಾಲ್ಮಲಾ) ನದಿಗೆ ಚೆಕ್‌ಡ್ಯಾಮ್‌ ನಿರ್ಮಿಸಿ ಅಲ್ಲಿಂದ 153 ಕಿ.ಮೀ. ಉದ್ದದ ಪೈಪ್ ಲೈನ್ ಮೂಲಕ ತಾಲ್ಲೂಕಿನ 35 ನೀರಾವರಿ ಕೆರೆ ತುಂಬಿಸುವ ₹ 122 ಕೋಟಿ ಮೊತ್ತದ ಕಾಮಗಾರಿ ಭಾನುವಾರ ವೀಕ್ಷಣೆ ಹಾಗೂ ಪ್ರಗತಿ ಪರಿಶೀಲನೆ ಮಾಡಿ ಮಾತನಾಡಿದರು.

ಏತ ನೀರಾವರಿ ಯೋಜನೆ ಪೂರ್ಣಗೊಳಿಸುವಲ್ಲಿ ವಿಳಂಬ ಮಾಡಿರುವ ಬೆಂಗಳೂರಿನ ಅಮೃತ ಕನ್‌ಸ್ಟ್ರಕ್ಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪನಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಕರ್ನಾಟಕ ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎಚ್.ಎನ್. ಶ್ರೀನಿವಾಸ್ ಮತ್ತು ಕಾರ್ಯನಿರ್ವಾಹಕ ಎಂಜನಿಯರ್ ಎಸ್.ಕೆ ಕುಲಕರ್ಣಿ ಗುತ್ತಿಗೆ ಸಂಸ್ಥೆಗೆ ತಕ್ಷಣ ನೋಟಿಸ್ ನೀಡಿ, ಶೀಘ್ರದಲ್ಲಿ ರಿಸ್ಕ್ ಆಯಂಡ್ ಕಾಸ್ಟ್ ಪ್ರಪೋಸಲ್ ಸಲ್ಲಿಸುವುದಾಗಿ ಹೇಳಿದರು.

ಕೊರೊನಾ ಹಿನ್ನೆಲೆ ಒಂದೂವರೆ ವರ್ಷ ಹೆಚ್ಚುವರಿ ಅವಧಿ ನೀಡಲಾಗಿದೆ. ನಿಗದಿತ ಅವಧಿಗಿಂತ ಒಂದು ವರ್ಷ ವಿಳಂಬವಾಗಿದ್ದರೂ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ. ಗುತ್ತಿಗೆದಾರರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಸರ್ಕಾರದ ಹಣ ಅಪವ್ಯಯ ಆಗುತ್ತಿದೆ. ಹಾಗಾಗಿ ಗುತ್ತಿಗೆ ಸಂಸ್ಥೆಯ ವಿರುದ್ಧ `ರಿಸ್ಕ್ ಆಯಂಡ್ ಕಾಸ್ಟ್ ಪ್ರಪೋಸಲ್’ ಸಲ್ಲಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚಿಸಿದರು.

ಏತ ನೀರಾವರಿ ಯೋಜನೆಗೆ ಬೆಲವಂತರ ಗ್ರಾಮದ 13 ರೈತರ ಭೂಮಿ ಬಳಕೆಯಾಗಿದೆ. ಭೂಸ್ವಾಧೀನ ಮಾಡಿಕೊಂಡು ನಾಲ್ಕು ವರ್ಷ ಕಳೆಯುತ್ತ ಬಂದರೂ ಇನ್ನೂ ತಮಗೆ ಪರಿಹಾರ ನೀಡಿಲ್ಲ, ಎಷ್ಟೇ ಗೋಗರೆದರೂ ಅಧಿಕಾರಿಗಳು ಕಣ್ತೆರೆದು ನೋಡುತ್ತಿಲ್ಲ ಎಂದು ಆ ರೈತರು ಸಚಿವರ ಎದುರು ತಮ್ಮ ಗೋಳು ತೋಡಿಕೊಂಡರು.

ಶಾಸಕ ಸಿ.ಎಂ.ನಿಂಬಣ್ಣವರ ಕೂಡ ಅವರ ಪರವಾಗಿ ಸಚಿವರಲ್ಲಿ ಮನವಿ ಮಾಡಿದರು.
ಈ ಮನವಿಗೆ ಸ್ಪಂದಿಸಿದ ಸಚಿವರು, ಒಪ್ಪಿಗೆ ನಿಯಮಾವಳಿ (ಕನ್ಸೆಂಟ್) ಅಡಿಯಲ್ಲಿ ಎರಡೇ ದಿನಗಳಲ್ಲಿ ಪರಿಹಾರ ನೀಡುವಂತೆ ಭೂಸ್ವಾಧೀನ ಅಧಿಕಾರಿಗೆ ತಾಕೀತು ಮಾಡಿದರು.

ಶಾಸಕ ಸಿ.ಎಂ. ನಿಂಬಣ್ಣವರ ಮಾತನಾಡಿ ಗುತ್ತಿಗೆದಾರ ನಿರ್ಲಕ್ಷದಿಂದ 4 ವರ್ಷಗಳಿಂದ ಕಾಮಗಾರಿ ನೆನೆಗುದಿಗೆ ಬಿದ್ದಿದೆ ಈಗ ತಡಮಾಡದೆ ರೈತರು ಮುಂಗಾರು ಬಿತ್ತನೆ ಮಾಡುವುದರೊಳಗಾಗಿ ರೈತರ ಜಮೀನಿನಲ್ಲಿ ಕೆರೆಗೆ ಪೈಪ್ ಲೈನ್ ಅಳವಡಿಕೆ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಸ್ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯರಾದ ಗಂಗಾಧರ ಗೌಳಿ, ಕೃಷ್ಣಾ ತಹಶೀಲ್ದಾರ್, ಜಿಲ್ಲಾ ಬಿಜೆಪಿ ಘಟಕದ ನಿಂಗಪ್ಪ ಸುತಗಟ್ಟಿ, ಸದಾನಂದ ಚಿಂತಾಮನಿ, ಅಶೋಕ ಆಡಿನವರ, ಶಿವಯ್ಯ ಸಿಂಧೋಗಿಮಠ, ಯಲ್ಲಪ್ಪ ಆಸಮಟ್ಟಿ, ಬೀರಪ್ಪ ಡೊಳ್ಳಿನ, ಪರಶುರಾಮ ಹುಲಿಹೊಂಡ ಇದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...