Friday, October 4, 2024
Friday, October 4, 2024

ದೇಶದ್ರೋಹ ವಿವರಣೆ ಮರು ಪರಿಶೀಲಿಸಲಾಗುತ್ತದೆ-ಕೇಂದ್ರದ ಹೇಳಿಕೆ ಸಲ್ಲಿಕೆ

Date:

ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯಲ್ಲಿರುವ ದೇಶದ್ರೋಹ ವಿವರಿಸುವ ವಿಧಿಯನ್ನು ಮರು ಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಸರ್ಕಾರವು ಭಾರತೀಯ ದಂಡ ಸಂಹಿತೆಯ (Indian Penal Code – IPC) 124ಎ ವಿಧಿಯನ್ನು ಮರುಪರಿಶೀಲಿಸುವುದಾಗಿ ಸುಪ್ರೀಂಕೋರ್ಟ್​ಗೆ ತಿಳಿಸಿದೆ.

ದೇಶದ್ರೋಹದ ಅಪರಾಧವನ್ನು ಐಪಿಸಿ 124ಎ ವಿಧಿಯು ವಿವರಿಸುತ್ತದೆ. ಎಸ್​.ಜಿ.ಒಂಬತ್​ಕೆರೆ vs ಭಾರತ ಸರ್ಕಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂಕೋರ್ಟ್​ಗೆ ಸಲ್ಲಿಸಿರುವ ಸತ್ಯಾಪನಾ ಪತ್ರದಲ್ಲಿ (ಅಫಿಡವಿಟ್) ಈ ಮಾಹಿತಿ ನೀಡಲಾಗಿದೆ. ವಸಾಹತುಶಾಹಿಯ ಕಾಲದಲ್ಲಿ ರೂಪುಗೊಂಡಿದ್ದ ಕಾನೂನುಗಳ ಹೊರೆಯಿಂದ ದೇಶವನ್ನು ಪಾರು ಮಾಡಬೇಕು ಎಂದು ಕೇಂದ್ರ ಸರ್ಕಾರವು ಶ್ರಮಿಸುತ್ತಿದೆ.

ದೇಶದ್ರೋಹ ಕಾಯ್ದೆಗೆ ಸಂಬಂಧಿಸಿದಂತೆ ಈವರೆಗೆ ವ್ಯಕ್ತವಾಗಿರುವ ದೃಷ್ಟಿಕೋನಗಳ ಬಗ್ಗೆ ಭಾರತ ಸರ್ಕಾರಕ್ಕೆ ಸಂಪೂರ್ಣ ಮಾಹಿತಿಯಿದೆ. ನಾಗರಿಕ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಬಗ್ಗೆಯೂ ಚರ್ಚೆಗಳು ಆರಂಭವಾಗಿವೆ. ದೇಶದ ಸಾರ್ವಭೌಮತೆ ಮತ್ತು ಏಕತೆಯನ್ನು ಸಂರಕ್ಷಿಸಲು ಕೇಂದ್ರ ಸರ್ಕಾರವು ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿಯೇ ಐಪಿಸಿ ಸೆಕ್ಷನ್ 124ಎ ವಿಧಿಯನ್ನು ಸಂಪೂರ್ಣ ಮರುಪರಿಶೀಲಿಸಲು ಕೇಂದ್ರ ಸರ್ಕಾರ ಸಮ್ಮತಿಸಿದೆ ಎಂದು ಅಫಿಡವಿಟ್ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಹ ಇದೇ ಚಿಂತನೆ ಹಂಚಿಕೊಂಡಿದ್ದಾರೆ. ದೇಶವು ಸುವರ್ಣ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಇರುವಾಗಲೇ ವಸಾಹತುಶಾಹಿ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನಗಳು ಆರಂಭವಾಗಿವೆ ಎಂದು ಕೇಂದ್ರ ಸರ್ಕಾರವು ತಿಳಿಸಿದೆ.

ದೇಶದ್ರೋಹ ಕಾನೂನು ಭಾರತ ಸರ್ಕಾರವೇ ಮರುಪರಿಶೀಲನೆಗೆ ಒಳಪಡಿಸಲು ಉದ್ದೇಶಿಸಿರುವುದರಿಂದ ಈ ಕಾನೂನಿನ ಸಾಂವಿಧಾನಿಕ ಮಾನ್ಯತೆಯ ಬಗ್ಗೆ ಪರಿಶೀಲಿಸಲು ಈ ಹಂತದಲ್ಲಿ ಸುಪ್ರೀಂಕೋರ್ಟ್​ ಮುಂದಾಗುವ ಅಗತ್ಯವಿಲ್ಲ ಎಂದು ಭಾರತ ಸರ್ಕಾರವು ಕೋರಿದೆ.

ವಸಾಹತುಶಾಹಿ ಕಾಲದಲ್ಲಿ ಜಾರಿಯಾಗಿದ್ದ ಕಾನೂನಿನ ಔಚಿತ್ಯ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳಿಗೆ ಪ್ರತಿಕ್ರಿಯೆಯಾಗಿ ಕೇಂದ್ರ ಸರ್ಕಾರವು ತನ್ನ ಅಭಿಪ್ರಾಯವನ್ನು ಅಫಿಡವಿಟ್ ಮೂಲಕ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...