Sunday, December 7, 2025
Sunday, December 7, 2025

ಕೃಷಿ ಪರಿಕರಗಳನ್ನು ನಿಯಮಾನುಸಾರ ಮಾರಾಟ ಮಾಡಬೇಕು-ಶಿವರಾಜಕುಮಾರ್

Date:

ಕೃಷಿ ಪರಿಕರ ಮಾರಾಟಗಾರರು ನಿಯಮಾನುಸಾರವಾಗಿ ಪರಿಕರಗಳನ್ನು ಮಾರಾಟ ಮಾಡಬೇಕು. ಒಂದು ವೇಳೆ ನಿಯಮಗಳನ್ನು ಉಲ್ಲಂಘನೆ ಮಾಡಿದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶಿವರಾಜಕುಮಾರ್ ತಿಳಿಸಿದರು.

ಶಿವಮೊಗ್ಗದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಬುಧವಾರ ಏರ್ಪಡಿಸಿದ್ದ ಕೃಷಿ ಪರಿಕರ ಮಾರಾಟಗಾರರ ಸಭೆ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ರೈತರಿಗೆ ಕೃಷಿ ಚಟುವಟಿಕೆಗಳಿಗೆ ಅಗತ್ಯ ರಸಗೊಬ್ಬರ ಕೀಟನಾಶಕ ಮತ್ತು ಬಿತ್ತನೆ ಬೀಜಗಳನ್ನು ಕಡ್ಡಾಯವಾಗಿ ರಸಗೊಬ್ಬರ ಅಂಗಡಿ ಮುಂಗಟ್ಟುಗಳ ಮಾಲೀಕರು ಸಕಾಲದಲ್ಲಿ ನಿಗದಿತ ದರದಲ್ಲಿ ವಿತರಣೆ ಮಾಡಬೇಕು. ಯಾವುದೇ ಕಾರಣಕ್ಕೂ ಯಾವುದೇ ರೀತಿಯ ರಸಗೊಬ್ಬರ, ಕೀಟನಾಶಕ ಮತ್ತು ಬಿತ್ತನೆ ಬೀಜಗಳನ್ನು ಗೋಡಾನ್‍ಗಳಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡುವ ಹಾಗಿಲ್ಲ. ತಪ್ಪಿದಲ್ಲಿ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೃಷಿ ಪರಿಕರ ಮಾರಾಟಗಾರರು ನಿಯಮಾನುಸಾರ ಪರಿಕರ ಮಾರಾಟ ಮಾಡಬೇಕು. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿ ಅಧಿಕ ದರಕ್ಕೆ ಮಾರಾಟ, ಅನಧಿಕೃತ ದಾಸ್ತಾನು ಶೇಖರಣೆ, ಕೃತಕ ಅಭಾವ ಸೃಷ್ಟಿಸುವಿಕೆ, ಲೂಸ್ ಸೀಡ್ಸ್ ಬಿತ್ತನೆ ಬೀಜ ಮಾರಾಟ ಮಾಡುವುದು ಕಂಡು ಬಂದಲ್ಲಿ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು. ಪ್ರತಿಯೊಬ್ಬರು ರೈತರ ಹಿತಾಸಕ್ತಿಗಾಗಿ ದುಡಿಯಬೇಕೆಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕರ(ಜಾಗೃತ ದಳ) ವೀರಭದ್ರಪ್ಪ ಮಾತನಾಡಿ, ಯೂರಿಯಾ ಗೊಬ್ಬರಕ್ಕೆ ಸರ್ಕಾರ ಪ್ರತಿ 45 ಕೆ.ಜಿ ಚೀಲಕ್ಕೆ ರೂ.800/- ಮೊತ್ತದ ಸಹಾಯಧನ ಭರಿಸುತ್ತಿದೆ. ಡಿಎಪಿ ಗೊಬ್ಬರಕ್ಕೆ ಪ್ರತಿ 50 ಕೆಜಿ ಚೀಲಕ್ಕೆ ರೂ. 2500 ಹಾಗೂ 15:15:15 ಗೊಬ್ಬರಕ್ಕೆ ಪ್ರತಿ 50 ಕೆ.ಜಿ ಚೀಲಕ್ಕೆ ರೂ. 1425/- ಸಹಾಯಧನ ಭರಿಸುತ್ತದೆ

ದೇಶದಲ್ಲಿ ರಸಗೊಬ್ಬರಕ್ಕಾಗಿ ಕೇಂದ್ರ ಸರ್ಕಾರವು 2020-21 ನೇ ಸಾಲಿನಲ್ಲಿ ರೂ.127 ಲಕ್ಷ ಕೋಟಿ, 2021-22 ನೇ ಸಾಲಿನಲ್ಲಿ ರೂ.160 ಲಕ್ಷ ಕೋಟಿ ಹಾಗೂ ಪ್ರಸಕ್ತ ಸಾಲಿನಲ್ಲಿ ರೂ.200 ಲಕ್ಷ ಕೋಟಿ ಸಹಾಯಧನವನ್ನು ನೀಡುತ್ತಿದೆ ಎಂದರು.

ತಾಲ್ಲೂಕಿನಲ್ಲಿ ಒಟ್ಟು 123 ಕೃಷಿ ಪರಿಕರಗಳ ಮಾರಾಟಗಾರರು ಪರವಾನಗಿ ಪಡೆದಿದ್ದಾರೆ. ಅದರಲ್ಲಿ 100 ಖಾಸಗಿ ಮತ್ತು 23 ಸೊಸೈಟಿಗಳಿವೆ. ಒಟ್ಟು 26,000 ಹೆಕ್ಟೇರ್ ಕೃಷಿ ಮತ್ತು 49,000 ತೋಟಗಾರಿಕೆ ಬೆಳೆಗಳು ಸೇರಿದಂತೆ ಒಟ್ಟು 75,000 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳು ಆವರಿಸಿದೆ ಎಂದು ತಿಳಿಸಿದರು.

ಸಭೆಯಲ್ಲಿ ಶಿವಮೊಗ್ಗ ತಾಲ್ಲೂಕಿನ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳಾದ ಸುನೀತಾ, ಮಹೇಶ್ ಇತರರು ಹಾಗೂ ತಾಲ್ಲೂಕಿನ ಎಲ್ಲಾ ಹೋಬಳಿಗಳ ಕೃಷಿ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaiah ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ, ಸೀಎಂ ಸಿದ್ಧರಾಮಯ್ಯ ಖಂಡನೆ

CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ...

ಶಾಲಾ ಬಸ್ ಅತಿವೇಗ ಚಾಲನೆ, ಬೈಕಿಗೆ ಢಿಕ್ಕಿ‌ ಸವಾರನ ಸ್ಥಿತಿ ಗಂಭೀರ

ಶಾಲಾ ಪ್ರವಾಸಕ್ಕೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸು ಮತ್ತು ಬೈಕ್ ನಡುವೆ...

B.Y.Raghavendra ಆರ್.ಎಸ್.ಎಸ್. ಗೃಹ ಸಂಪರ್ಕ ಅಭಿಯಾನದಲ್ಲಿ ಸಂಸದ ರಾಘವೇಂದ್ರ ಭಾಗಿ.

B.Y.Raghavendra ರಾಷ್ಟ್ರೀಯ ಸ್ವಯಂಸೇವಕ ಸಂಘದ ನೂರನೇ ವರ್ಷದ ಪ್ರಯುಕ್ತ, ಇಂದು...