Sunday, December 14, 2025
Sunday, December 14, 2025

ಹರ್ಷ ಹತ್ಯೆ ಪ್ರಕರಣ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಸ್ತರಣೆ

Date:

ರಾಜ್ಯಾದ್ಯಂತ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಹತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಕ್ಕೆ ವಿಸ್ತರಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಎನ್‌ಐಎ ವಿಶೇಷ ನ್ಯಾಯಾಲಯದ ಉಸ್ತುವಾರಿ ನ್ಯಾಯಾಧೀಶ ಕಸನಪ್ಪ ನಾಯಕ್‌ ವಿಚಾರಣೆ ನಡೆಸಿ, ಎನ್‌ಐಎ ಪರ ವಕೀಲರು ಸಲ್ಲಿಸಿದ ಮನವಿಯನ್ನು ಮಾನ್ಯ ಮಾಡಿದರು.

ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 190 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.

ಎನ್‌ಐಎ ಪರ ವಾದ ಮಂಡಿಸಿದ ವಿಶೇಷ ಪ್ರಾಸಿಕ್ಯೂಟರ್‌ ಪಿ.ಪ್ರಸನ್ನಕುಮಾರ್, ಪ್ರಕರಣದಲ್ಲಿ ಈಗಾಗಲೇ ಆರೋಪಿಗಳ ಗುರುತು ಪತ್ತೆಯ ಪೆರೇಡ್‌ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಆದರೆ, ಪ್ರತ್ಯಕ್ಷ ಸಾಕ್ಷಿಗಳ ವಿಚಾರಣೆ ನಡೆಯಬೇಕಿದೆ.

ಜೊತೆಗೆ ಆರೋಪಿಗಳು ಬಳಸುತ್ತಿದ್ದ ವಿದ್ಯುನ್ಮಾನ ಸಾಧನಗಳು ಮತ್ತು ಸಿಡಿಆರ್ ವಿಶ್ಲೇಷಣೆಯು ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ಇನ್ನೂ ನಡೆಯಬೇಕಿದೆ. ಹಾಗಾಗಿ ತನಿಖೆಗಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅಗತ್ಯವಿದೆ ಎಂದರು.

ಅಲ್ಲದೆ, ಹತ್ಯೆ ನಡೆಸಿ ಸಮಾಜದಲ್ಲಿ ಭಯದ ವಾತಾವರಣ ಸೃಷ್ಟಿಸಲು ನಡೆಸಲಾದ ಸಂಚನ್ನು ಕಾರ್ಯಗತಗೊಳಿಸಿದ ಬಗೆ, ಅದಕ್ಕಾಗಿ ಎಲ್ಲಿಂದ ಹಣಕಾಸಿನ ನೆರವು ಪಡೆಯಲಾಯಿತು ಎಂಬುದನ್ನೆಲ್ಲಾ ಪತ್ತೆ ಹಚ್ಚಬೇಕಿದೆ.

ಆದ ಕಾರಣ, ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ)-1967ರ ಕಲಂ 43ಡಿ (2)(ಬಿ) ಅಡಿಯಲ್ಲಿ 190 ದಿನಗಳಿಗೆ ವಿಸ್ತರಿಸಿ ಆದೇಶಿಸಬೇಕು ಎಂದು ಕೋರಿದರು.

ಅದಕ್ಕೆ ಒಪ್ಪಿದ ನ್ಯಾಯಾಧೀಶರು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಗಳಿಗೆ ವಿಸ್ತರಿಸಿ ಆದೇಶಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...