Tuesday, March 24, 2026
Tuesday, March 24, 2026

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರದಿಂದ ನೆರವು

Date:

ಆ್ಯಸಿಡ್ ಸಂತ್ರಸ್ತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

ಆ್ಯಸಿಡ್ ಸಂತ್ರಸ್ತರಿಗೆ ನೀಡುವ ಮಾಸಾಶನ 3 ಸಾವಿರ ರೂ.ಗಳಿಂದ 10 ಸಾವಿರ ರೂ.ಗೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕಂದಾಯ ಇಲಾಖೆಯ ಸಾಮಾಜಿಕ ಭದತ್ರೆ ಮತ್ತು ಪಿಂಚಣೆಗಳ ನಿರ್ದೇಶನಾಲಯದ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಲಾಗಿದ್ದ ‘ಹಲೋ ಕಂದಾಯ ಸಚಿವರೇ – 72 ಗಂಟೆಯಲ್ಲಿ ಮನೆ ಬಾಗಿಲಿಗೆ ಪಿಂಚಣಿ ಸಹಾಯವಾಣಿಯನ್ನು ಲೋಕಾರ್ಪಣೆಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದರು.

ಆ್ಯಸಿಡ್ ದಾಳಿಗೊಳಗಾದ ಎಲ್ಲ ಹೆಣ್ಣು ಮಕ್ಕಳಿಗೆ ನಿವೇಶನ ಹಾಗೂ ಮನೆ ನೀಡಲು ಆದೇಶವನ್ನು ಹೊರಡಿಸಲಾಗುವುದು ಹಾಗೂ ಅವರಿಗೆ ಸ್ವಯಂ ಉದ್ಯೋಗ ಯೋಜನೆಯಡಿ 5 ಲಕ್ಷ ರೂ.ಗಳವರೆಗೆ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಆ್ಯಸಿಡ್ ದಾಳಿಗೆ ಒಳಗಾದವರು ಬಹಳಷ್ಟು ನೋವನ್ನು ಉಂಡಿರುತ್ತಾರೆ . ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗಿರುತ್ತಾರೆ. ಅವರ ನೆರವಿಗೆ ನಿಲ್ಲುವುದು ಸರ್ಕಾರದ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಅವರ ಮಾಸಾಶನವನ್ನು 3000ದಿಂದ 10 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅದರ ಜೊತೆಗೆ ಈಗ ಅವರಿಗೆ ಬದುಕು ಸಾಗಿಸಲು ಮನೆ ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...