Monday, December 15, 2025
Monday, December 15, 2025

ಮಳೆಗಾಲ ಎದುರಿಸಲು ಸನ್ನದ್ಧರಾಗಿ-ಡಾ.ಸೆಲ್ವಮಣಿ

Date:

ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು ಎದುರಿಸಲು ಕೈಗೊಳ್ಳುವ ಕ್ರಮಗಳ ಕುರಿತು ಕಾರ್ಯ ಯೋಜನೆಯನ್ನು ವಾರದ ಒಳಗಾಗಿ ಸಲ್ಲಿಸುವಂತೆ ಅವರು ತಿಳಿಸಿದರು.

ನಗರ ಪ್ರದೇಶದಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾಗಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಮೊದಲೇ ಗುರುತಿಸಿ ಸೂಕ್ತ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯ ಬಿದ್ದರೆ ಕಾಳಜಿ ಕೇಂದ್ರ ತೆರೆಯಬಹುದಾದ ಸ್ಥಳಗಳನ್ನು ಗುರುತಿಸಬೇಕು. ಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರು ನೆರವಿಗಾಗಿ ಸಂಪರ್ಕ ಮಾಡಲು 24×7 ಸಹಾಯಕೇಂದ್ರಗಳನ್ನು ತೆರೆಯಲು ಸಿದ್ಧತೆ ಮಾಡಬೇಕು. ಪರಿಹಾರ ಕಾರ್ಯಗಳನ್ನು ನಡೆಸಲು ಕಾರ್ಯಪಡೆಯನ್ನು ರಚಿಸಿ ಅವರಿಗೆ ಸೂಕ್ತ ತರಬೇತಿಯನ್ನು ನೀಡಬೇಕು. ಕಾರ್ಯಪಡೆಯಲ್ಲಿ ಪೊಲೀಸ್, ಕಂದಾಯ, ಆರೋಗ್ಯ ಸೇರಿದಂತೆ ಎಲ್ಲಾ ಪ್ರಮುಖ ಇಲಾಖೆಗಳ ಪ್ರತಿನಿಧಿಗಳು ಇರಬೇಕು ಎಂದು ಹೇಳಿದರು.

ಜಲಾಶಯಗಳ ನೀರಿನ ಮಟ್ಟದ ಮಾಹಿತಿಯನ್ನು ನಿರಂತರವಾಗಿ ಅಧಿಕಾರಿಗಳ ನಡುವೆ ಹಂಚಿಕೊಳ್ಳಬೇಕು. ಜಲಾಶಯದಿಂದ ನೀರನ್ನು ಬಿಡುಗಡೆ ಮಾಡುವ ಸಾಕಷ್ಟು ಪೂರ್ವದಲ್ಲಿ ಮಾಹಿತಿಯನ್ನು ಒದಗಿಸಬೇಕು. ನೀರು ನಿಂತು ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಸದಾ ಸನ್ನದ್ಧವಾಗಿರಬೇಕು. ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತದ ಔಷಧ ಲಭ್ಯವಿರುವಂತೆ ನೋಡಿಕೊಳ್ಳಬೇಕು. ಗಾಳಿ ಮಳೆಯಿಂದ ಮರ, ವಿದ್ಯುತ್ ಕಂಬಗಳು ಬಿದ್ದ ತಕ್ಷಣ ಅವುಗಳನ್ನು ತೆರವುಗೊಳಿಸಲು ಎಲ್ಲಾ ತಾಲೂಕುಗಳಲ್ಲಿ ತಂಡಗಳನ್ನು ರಚಿಸಬೇಕು. ಜೆಸಿಬಿ ಸೇರಿದಂತೆ ಅಗತ್ಯ ಸೌಲಭ್ಯಗಳು ಎಲ್ಲಾ ಕಡೆ ಸಿದ್ಧವಿರಬೇಕು. ಮಳೆಯಿಂದಾಗಿ ಗುಡ್ಡ ಕುಸಿಯಬಹುದಾದ ಸ್ಥಳಗಳು, ಘಾಟಿ ಪ್ರದೇಶದಲ್ಲಿ ರಸ್ತೆ ಕುಸಿಯಬಹುದಾದ ಸ್ಥಳಗಳನ್ನು ಈಗಲೇ ಗುರುತಿಸಬೇಕು. ಅಂತಹ ಸಂದರ್ಭದಲ್ಲಿ ತಕ್ಷಣ ಸಂಚಾರ ವ್ಯವಸ್ಥೆಯನ್ನು ಪುನಾರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ವಿದ್ಯುತ್ ಕಂಬಗಳು, ಟ್ರಾನ್ಸ್‍ಫಾರ್ಮರ್‍ಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ವಿದ್ಯುತ್ ಸಂಪರ್ಕವನ್ನು ಆದಷ್ಟು ಬೇಗನೇ ಪುನರ್ ಒದಗಿಸಲು ತಂಡಗಳನ್ನು ರಚಿಸಬೇಕು. ಪ್ರಸ್ತುತ 3ಬೋಟ್‍ಗಳು ಜಿಲ್ಲಾಡಳಿತದಲ್ಲಿ ಲಭ್ಯವಿದ್ದು, ಇನ್ನಷ್ಟು ಅಗತ್ಯ ಬೋಟ್‍ಗಳನ್ನು ಪಡೆಯಲು ಕ್ರಮ ಕೈಗೊಳ್ಳಲಾಗುವುದು. ನಗರ ಪ್ರದೇಶದಲ್ಲಿ ಹೂಳೆತ್ತುವ ಕಾರ್ಯವನ್ನು ಮಳೆಗಾಲಕ್ಕಿಂತ ಮೊದಲೇ ಪೂರ್ಣಗೊಳಿಸಬೇಕು. ಜಾನುವಾರು, ಮಾನವ ಪ್ರಾಣ ಹಾನಿ ಸಂಭವಿಸಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ 24ಗಂಟೆ ಒಳಗಾಗಿ ಪರಿಹಾರದ ಮೊತ್ತವನ್ನು ನೀಡಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...