Thursday, July 9, 2026
Thursday, July 9, 2026

ಶಾಲಾ ಪಠ್ಯದಲ್ಲಿ ಭಗತ್ ಸಿಂಗ್ ಪಾಠ ಕೈಬಿಟ್ಟಿಲ್ಲ- ನಾಗೇಶ್ ಸ್ಪಷ್ಟನೆ

Date:

ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಕುರಿತ ಪಾಠಗಳನ್ನು ಪುಸ್ತಕದಿಂದ ಕೈಬಿಟ್ಟು ಆರ್‌ಎಸ್‌ಎಸ್‌ ಸಂಸ್ಥಾಪಕ ಹೆಡಗೆವಾರ್ ಕುರಿತ ಪದ್ಯವನ್ನು ಪಠ್ಯದಲ್ಲಿ ಸೇರಿಸಲಾಗಿದೆ ಎನ್ನುವ ಆರೋಪಕ್ಕೆ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

10ನೇ ತರಗತಿ ಪಠ್ಯಪುಸ್ತಕದಲ್ಲಿ ಭಗತ್‌ ಸಿಂಗ್ ಅವರ ಪಠ್ಯ ತೆಗೆದು ಆರ್‌ಎಸ್‌ಎಸ್‌ ಸಂಸ್ಥಾಪಕ ಡಾ.ಕೇಶವ ಬಲಿರಾಮ್ ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದವು.

ವಿವಾದದ ಬಗ್ಗೆ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕೂಡ ಸ್ಪಷ್ಟನೆ ನೀಡಿದ್ದರು. “ಭಗತ್ ಸಿಂಗ್ ಪಠ್ಯಪುಸ್ತಕ ತೆಗೆದು ಹೆಡಗೆವಾರ್ ಪಠ್ಯ ಅಳವಡಿಕೆ ಮಾಡಿಲ್ಲ, ಆರೋಪ ಮಾಡುವ ಮೊದಲು ಪಠ್ಯಪುಸ್ತಕ ಓದಲಿ” ಎಂದಿದ್ದರು.

ವಿವಾದದ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ನೀಡಿದ್ದು, ಭಗತ್ ಸಿಂಗ್ ಪಠ್ಯ ತೆಗೆದು ಹೆಡಗೆವಾರ್ ಬಗ್ಗೆ ಪಠ್ಯದಲ್ಲಿ ಸೇರಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಸಮಾಜ ವಿಜ್ಞಾನ ಹಾಗೂ ಭಾಷಾ ಪಠ್ಯಪುಸ್ತಕಗಳಲ್ಲಿದ್ದ ಸೂಕ್ಷ್ಮ ವಿಚಾರಗಳನ್ನು ಪರಿಶೀಲಿಸಲು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ನೇಮಕ ಮಾಡಲಾಗಿತ್ತು. ಸಮಿತಿಯು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕಗಳು ಹಾಗೂ 1 ರಿಂದ 10 ನೇ ತರಗತಿ ಕನ್ನಡ ಭಾಷಾ ಪಠ್ಯಪುಸ್ತಕ ಪರಿಷ್ಕರಿಸಿರುತ್ತಾರೆ.

10ನೇ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿದ್ದ ‘ಭಗತ್‌ಸಿಂಗ್’ ಗದ್ಯವನ್ನು ಕೈಬಿಟ್ಟು ‘ಹೆಡಗೆವಾರ್’ರವರ ಬಗ್ಗೆ ಗದ್ಯ ಸೇರಿಸಲಾಗಿದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು. ವಾಸ್ತವವಾಗಿ ‘ಭಗತ್‌ಸಿಂಗ್’ ಗದ್ಯವನ್ನು ಪಠ್ಯದಿಂದ ಕೈಬಿಟ್ಟಿಲ್ಲ. ಪರಿಷ್ಕರಿಸಿರುವ 10ನೇ ತರಗತಿ ಪ್ರಥಮ ಭಾಷಾ ಕನ್ನಡ ಪಠ್ಯಪುಸ್ತಕ ಇನ್ನೂ ಮುದ್ರಣ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆಗೆ ನೂತನ ಪದಾಧಿಕಾರಿಗಳ ಆಯ್ಕೆ

Rotary Club of Shivamogga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ಸಂಸ್ಥೆ...

Friends Center Organization ಸಮಾಜಮುಖಿ ಸೇವಾ ಚಟುವಟಿಕೆಗಳಲ್ಲಿ ಫ್ರೆಂಡ್ಸ್ ಸೆಂಟರ್ ಸಂಸ್ಥೆ ಪ್ರಸಿದ್ಧಿ ಪಡೆದಿದೆ- ಎಸ್.ಎನ್.ಚನ್ನಬಸಪ್ಪ

Friends Center Organization ಸಮಾಜಮುಖಿ, ಸೇವಾ ಚಟುವಟಿಕೆಗಳಲ್ಲಿ ಭಾಗವಹಿಸಿ ಹಲವಾರು ಕಾರ್ಯಕ್ರಗಳನ್ನು...

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....